ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ತಳಹದಿಯ ಮೇಲೆ ಭಾರತದ ಸಂವಿಧಾನ ರಚಿಸಲಾಗಿದೆ.

ಕನ್ನಡಪ್ರಭ ವಾರ್ತೆ ಕನಕಗಿರಿ

ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ತಳಹದಿಯ ಮೇಲೆ ಭಾರತದ ಸಂವಿಧಾನ ರಚಿಸಲಾಗಿದೆ ಎಂದು ತಾಪಂ ಕಾಯನಿರ್ವಹಣಾಧಿಕಾರಿ ರಾಜಶೇಖರ ಹೇಳಿದರು. ಅವರು ಗುರುವಾರ ಪಟ್ಟಣದ ತಾಪಂ ಕಚೇರಿಯಲ್ಲಿ ಗುರುವಾರ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಹಾಗೂ ಭ್ರಾತೃತ್ವದ ಹಕ್ಕುಗಳನ್ನು ಕಲ್ಪಿಸಿದೆ. ಸಂವಿಧಾನವು ದೇಶದ ಆಡಳಿತ ವ್ಯವಸ್ಥೆಗೆ ಭದ್ರ ಬುನಾದಿಯಾಗಿದ್ದು, ಪ್ರತಿಯೊಬ್ಬರೂ ಸಂವಿಧಾನದ ಮೌಲ್ಯಗಳು ಮತ್ತು ಆಶಯಗಳನ್ನು ಅರಿತುಕೊಂಡು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂವಿಧಾನ ನೀಡಿರುವ ಹಕ್ಕುಗಳ ಜತೆಗೆ ಕರ್ತವ್ಯಗಳನ್ನೂ ಪಾಲಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ತಿಳಿಸಿದರು.ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ ಸಂವಿಧಾನದ ಆಶಯಗಳನ್ನು ಗೌರವಿಸುವ ಪ್ರತಿಜ್ಞೆ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ತಾಪಂ ಸಿಬ್ಬಂದಿಗಳಾದ ಈರಪ್ಪ, ಪವನಕುಮಾರ, ಮುದೇಗೌಡ, ರಿಯಾಜ್ ಅಹ್ಮದ್‌, ರೇಣುಕಾ, ಮೇಘರಾಜ್‌, ಶಿವಕುಮಾರ, ಮೌನೇಶ, ಮಂಜುನಾಥ, ಶರಣಪ್ಪ, ಬಸವಲಿಂಗ, ರಾಕೇಶ, ಮಹೇಶ, ಹುಲುಗಪ್ಪ, ಪೂಜೇಶ ಸೇರಿ ಇತರರಿದ್ದರು. ವಿವಿಧೆಡೆ ಆಚರಣೆ:

ಪಟ್ಟಣ ಸೇರಿದಂತೆ ತಾಲೂಕಿನ ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಹಾಗೂಟಿಲ್ಲಿನ ಡಾ. ಬಿ.ಆರ್. ಅಂಬೇಡ್ಕರ ವೃತ್ತದಲ್ಲಿ ಸಂವಿಧಾನ ದಿನವನ್ನು ಅಂಬೇಡ್ಕರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಅಚ್ಚುಕಟ್ಟಾಗಿ ಆಚರಿಸಲಾಯಿತು. ತಾಲೂಕು ಆಡಳಿತದ ಸಿಬ್ಬಂದಿಯವರು ಅಂಬೇಡ್ಕರ ವೃತ್ತಕ್ಕೆ ಪುಷ್ಪನಮನ ಸಲ್ಲಿಸಿ ಅಚ್ಚುಕಟ್ಟಾದ ಸಂವಿಧಾನ ದಿನವನ್ನು ಆಚರಿಸಲಾಯಿತು.