ಸಾರಾಂಶ
ತರೀಕೆರೆ, ದೇಶಕ್ಕೆ ಸಂವಿಧಾನ ರಚಿಸಿಕೊಟ್ಟಿರುವ, ಮಹನೀಯರಾದ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ಪಾಲಿಸುವ ಮೂಲಕ ಸಹಬಾಳ್ವೆಯಿಂದ ಬದುಕೋಣ ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ತಿಳಿಸಿದರು.
ತರೀಕೆರೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ರವರ ಪುಣ್ಯತಿಥಿ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ, ತರೀಕೆರೆದೇಶಕ್ಕೆ ಸಂವಿಧಾನ ರಚಿಸಿಕೊಟ್ಟಿರುವ, ಮಹನೀಯರಾದ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ಪಾಲಿಸುವ ಮೂಲಕ ಸಹಬಾಳ್ವೆಯಿಂದ ಬದುಕೋಣ ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ತಿಳಿಸಿದರು. ಶುಕ್ರವಾರ ಡಾ.ಬಿ.ಆರ್.ಅಂಬೇಡ್ಕರ್ ಪುಣ್ಯತಿಥಿ ಪ್ರಯುಕ್ತ ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ನೆರವೇರಿಸಿ ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಕೊಡುಗೆ ಅಜರಾಮರ ಎಂದು ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ ಮಾತನಾಡಿ, ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಸಮಾಜದಲ್ಲಿನ ಅಸಮಾನತೆ ವಿರುದ್ಧ ಹೋರಾಟ ನಡೆಸಿದವರು. ಸಮಾಜಕ್ಕಾಗಿ ಬದುಕಿದವರಿಗೆ ಸಾವಿಲ್ಲ. ಅವರು ಸದಾ ಪೂಜ್ಯನೀಯ, ಸದಾ ಸ್ಮರಣೀಯ ಎಂದರು.ಈ ಸಂದರ್ಭದಲ್ಲಿ ಅಜ್ಜಂಪುರ ತಹಸೀಲ್ದಾರ್ ವಿನಾಯಕಸಾಗರ್, ದಲಿತ ಮುಖಂಡ ಎನ್.ವೆಂಕಟೇಶ್ ಮಾತನಾಡಿದರು. ತರೀಕೆರೆ ತಹಸೀಲ್ದಾರ್ ವಿಶ್ವಜಿತ ಮಹತಾ, ಪುರಸಭೆ ಉಪಾಧ್ಯಕ್ಷೆ ಗಿರಿಜಾಪ್ರಕಾಶ್‌ವರ್ಮ, ಮಾಜಿ ಅಧ್ಯಕ್ಷ ಪ್ರಕಾಶ್‌ವರ್ಮ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್, ಸಿಡಿಪಿಒ ಚರಣ್‌ರಾಜ್, ದಲಿತ ಮುಖಂಡರಾದ ಎಚ್.ವಿ.ಬಾಲರಾಜ್, ಸಿದ್ದಪ್ಪ, ಮಂಜಪ್ಪ, ಬಸವರಾಜ್, ಚಂದ್ರಪ್ಪ, ವಕೀಲರಾದ ಎನ್.ವೀರಭದ್ರಪ್ಪ, ವಸಂತ್ ಮತ್ತಿತರರು ಭಾಗವಹಿಸಿದ್ದರು.6ಕೆಟಿಆರ್.ಕೆ.2ಃ
ತರೀಕೆರೆಯಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ರವರ ಪುಣ್ಯತಿಥಿಯಲ್ಲಿ ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಡಾ.ಬಿ.ಆರ್.ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಪುರಸಭೆ ಉಪಾಧ್ಯಕ್ಷೆ ಗಿರಿಜಾ ಪ್ರಕಾಶ್ ವರ್ಮ, ತಹಸೀಲ್ದಾರ್ ವಿಶ್ತಜಿತ ಮೆಹತಾ, ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ ಮತ್ತಿತರರು ಇದ್ದರು.