ಸಾರಾಂಶ
1947 ಆಗಸ್ಟ್ 15ರಂದು ಸ್ವಾತಂತ್ರ್ಯ ದೊರೆತರೂ, ನಿಜಾಮರ ಆಡಳಿತಕ್ಕೆ ಒಳಪಟ್ಟಿದ್ದ ಹೈದರಾಬಾದ್ ಕರ್ನಾಟಕ ಪ್ರದೇಶಗಳು ಮಾತ್ರ ದೊರೆತಿರಲಿಲ್ಲ, ರಜಾಕಾರರಿಂದ ಕಲ್ಯಾಣ ಕರ್ನಾಟಕ ವಿಮೋಚನೆಗಾಗಿ ಹೋರಾಟ ಮಾಡಿದವರ ಬಲಿದಾನ ಮರೆಯುವಂತಿಲ್ಲ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.
ಕನ್ನಡಪ್ರಭ ವಾರ್ತೆ ಸುರಪುರ
1947 ಆಗಸ್ಟ್ 15ರಂದು ಸ್ವಾತಂತ್ರ್ಯ ದೊರೆತರೂ, ನಿಜಾಮರ ಆಡಳಿತಕ್ಕೆ ಒಳಪಟ್ಟಿದ್ದ ಹೈದರಾಬಾದ್ ಕರ್ನಾಟಕ ಪ್ರದೇಶಗಳು ಮಾತ್ರ ದೊರೆತಿರಲಿಲ್ಲ, ರಜಾಕಾರರಿಂದ ಕಲ್ಯಾಣ ಕರ್ನಾಟಕ ವಿಮೋಚನೆಗಾಗಿ ಹೋರಾಟ ಮಾಡಿದವರ ಬಲಿದಾನ ಮರೆಯುವಂತಿಲ್ಲ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಬುಧವಾರ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಮಾತನಾಡಿದ ಅವರು, ನಮ್ಮ ಕಲ್ಯಾಣ ಕರ್ನಾಟಕ ಭಾಗಕ್ಕೆ ಇರುವ ಹಿಂದುಳಿದ ಪ್ರದೇಶ ಎಂಬ ಹಣೆಪಟ್ಟಿಯನ್ನು ತೆಗೆದುಹಾಕಬೇಕು. ಅದಕ್ಕಾಗಿ ನಾವೆಲ್ಲರೂ ಜಾತಿ, ಧರ್ಮ ಎನ್ನದೇ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು. 371 (ಜೆ) ಮೀಸಲಾತಿಯನ್ನು ಪಡೆದುಕೊಂಡು ಪ್ರಗತಿ ಹೊಂದಬೇಕು ಎಂದರು.
ತಹಸೀಲ್ದಾರ್ ಎಚ್.ಎ. ಸರಕಾವಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪ ಖಜಾನಾಧಿಕಾರಿ ಸಣ್ಣಿಕೆಪ್ಪ ಕೊಂಡಿಕಾರ ವಿಶೇಷ ಉಪನ್ಯಾಸ ನೀಡಿದರು. ಯೂಥ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜಾ ಕುಮಾರ ನಾಯಕ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಪ್ರಕಾಶ್ ಗುತ್ತೇದಾರ, ನಗರಸಭೆ ಅಧ್ಯಕ್ಷೆ ಹೀನಾ ಕೌಸರ್, ಉಪಾಧ್ಯಕ್ಷ ರಾಜಾ ಪಿಡ್ಡ ನಾಯಕ(ತಾತಾ), ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಸಜ್ಜನ್, ನಗರಸಭೆ ಪೌರಾಯುಕ್ತ ಬಸವರಾಜ ಟಣಕೇದಾರ, ಬಿಇಓ ಯಲ್ಲಪ್ಪ ಕಾಡ್ಲೂರು, ರಾಜಾ ವಾಸುದೇವ ನಾಯಕ, ಮಲ್ಲಣ್ಣ ಸಾಹುಕಾರ್, ರಮೇಶ ದೊರೆ ಆಲ್ದಾಳ, ದೊಡ್ಡ ದೇಸಾಯಿ ದೇವರಗೋನಾಲ, ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲೆಯ ಮಕ್ಕಳು, ಶಿಕ್ಷಕರು ಸೇರಿದಂತೆ ಇತರರಿದ್ದರು.