ಸಾರಾಂಶ
ಗದಗ: ಮಹಿಳೆಯರು ಮನೆ ಬಿಟ್ಟು ಹೊರಗೆ ಬರುವುದು ಕಷ್ಟವಾಗುತ್ತಿತ್ತು. ಆದರೆ ಇಂದಿನ ದಿನಮಾನದಲ್ಲಿ ಮಹಿಳೆಯರು ಪುರುಷರಷ್ಟೇ ಸರಿಸಮಾನವಾಗಿ ಮುಂದೆ ಬಂದಿರುತ್ತಾರೆ. ಯಶಸ್ವಿ ಉದ್ಯಮದಾರರಾಗಿ ಆರ್ಥಿಕವಾಗಿ ಸ್ವಾಲಂಭಿಗಳಾಗಿದ್ದಾರೆ ಎಂದು ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಎಸ್.ಪಿ. ಸಂಶಿಮಠ ಹೇಳಿದರು.
ನಗರದ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ 50ನೇ ಸುವರ್ಣ ಮಹೋತ್ಸವ ವರ್ಷದ ರಜತ ಮಹೋತ್ಸವದ ಬನಪ್ಪ ಸಂಕಪ್ಪ ಸಂಕಣ್ಣವರ ಸಭಾ ಭವನದಲ್ಲಿ ನಡೆದ ದೃಷ್ಠಿಕೋನ ಕಾರ್ಯಾಗಾರ ಹಾಗೂ ಮಹಿಳೆ ಆರ್ಥಿಕ ಸ್ವಾವಲಂಬನೆಯೊಂದಿಗೆ ಸಾರ್ಥಕ ಹೆಜ್ಜೆ 1(ತಂತ್ರಜ್ಞಾನದಲ್ಲಿ ಷೇರು ಮಾರುಕಟ್ಟೆ ಕುರಿತು ತಿಳಿವಳಿಕೆ) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಮಹಿಳೆಯರು ಷೇರು ಮಾರುಕಟ್ಟೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಣ ಹೂಡಿಕೆ ಮಾಡುತ್ತಿದ್ದಾರೆ. ತಾವು ಕೂಡಾ ಜಾಗೃತೆಯಿಂದ ಅದರ ಬಗ್ಗೆ ಅಭ್ಯಾಸ ಮಾಡಿ ಮುಂದೂವರೆಯುವುದು ಸೂಕ್ತವಾಗಿದೆ. ಈಗ ತಂತ್ರಜ್ಞಾನ ಸಾಕಷ್ಟು ಮುಂದೂವರೆದಿದ್ದು, ಮೊಬೈಲ್ ಬಂದ ನಂತರ ಸಾಕಷ್ಟು ಅನುಕೂಲವಾಗಿದೆ ಎಂದರು.
ಸಂಸ್ಥೆಯ ಗೌರವ ಕಾರ್ಯದರ್ಶಿ ಅಶೋಕಗೌಡ ಕೆ. ಪಾಟೀಲ ಮಾತನಾಡಿ, ಸಂಸ್ಥೆಯ ಮಹಿಳಾ ಘಟಕವು ಯಶಸ್ವಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಸಾಕಷ್ಟು ಮಹಿಳಾ ಉದ್ಯಮದಾರರಿಗೆ ತಿಳಿವಳಿಕೆ ನೀಡುವಂತಹ ಕಾರ್ಯಕ್ರಮ ಏರ್ಪಡಿಸುತ್ತಿರುವುದು ಸಂತೋಷವನ್ನುಂಟು ಮಾಡುತ್ತಿದೆ ಎಂದರು.ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಜಯಶ್ರೀ ತಾತನಗೌಡ ಪಾಟೀಲ ಮಾತನಾಡಿ, ಕಳೆದ 4 ವರ್ಷಗಳಿಂದ ಹುಟ್ಟಿರುವಂತಹ ಮಹಿಳಾ ಘಟಕವು ಸಾಕಷ್ಟು ಯಶಸ್ವಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಮಹಿಳೆಯರಿಗೆ ಸಾಕಷ್ಟು ಮಾಹಿತಿ ನೀಡುವ ಕಾರ್ಯ ಮಾಡುತ್ತಿದೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಭನೆಯ ಕಡೆಗೆ ಹೆಚ್ಚಿನ ಒತ್ತು ನೀಡಿ ಆರ್ಥಿಕವಾಗಿ ಸಬಲರಾಗಬೇಕೆಂದು ತಿಳಿಸಿದರು.
ಮೆ. ಸುವಿಜಯ ಅಗ್ರಿವೆಂಚರ, ಸುಜಯ ಉಮೇಶ ಹುಬ್ಬಳ್ಳಿ ಮಾತನಾಡಿದರು. ಅಧ್ಯಕ್ಷತೆಯನ್ನು ಸಂಸ್ಥೆಯ ಮಹಿಳಾ ಘಟಕದ ಅಧ್ಯಕ್ಷೆ ನಂದಾ ಚಂದ್ರು ಬಾಳಿಹಳ್ಳಿಮಠ ವಹಿಸಿದ್ದರು. ಉಪಾಧ್ಯಕ್ಷೆ ಸುಷ್ಮಾ ಎಸ್. ಜಾಲಿ ಸ್ವಾಗತಿಸಿದರು. ಜ್ಯೋತಿ ಆರ್. ದಾನಪ್ಪಗೌಡ್ರ ನಿರೂಪಿಸಿದರು. ಸುವರ್ಣಾ ಎಸ್. ಮದರಿಮಠ ವಂದಿಸಿದರು.