ಸಾರಾಂಶ
ಬಳ್ಳಾರಿ: ಇಲ್ಲಿನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ ಘನ ಮತ್ತು ದ್ರವ ತ್ಯಾಜ್ಯ ಘಟಕಗಳ ನಾಲ್ಕು ಚಕ್ರದ ವಾಹನ ಚಾಲನಾ ತರಬೇತಿ ಶಿಬಿರ ಉದ್ಘಾಟನೆ ಸಮಾರಂಭ ಜರುಗಿತು.
ಚಾಲನೆ ನೀಡಿದ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು, ವಿವಿಧ ಯೋಜನೆಯಡಿ ಮಹಿಳೆಯರಿಗೆ ನೀಡುತ್ತಿರುವ ತರಬೇತಿ ಶಿಬಿರಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಘನ ಮತ್ತು ದ್ರವ ತ್ಯಾಜ್ಯ ವಾಹನಕ್ಕೆ ವಾಹನ ಚಾಲಕಿಯರನ್ನಾಗಿ ಸ್ವ- ಸಹಾಯ ಗುಂಪಿನ ಮಹಿಳೆಯರನ್ನು ಆಯ್ಕೆ ಮಾಡಲಾಗಿದ್ದು, ಮಹಿಳೆಯರು ಧೈರ್ಯದಿಂದ ವಾಹನ ಚಾಲನೆ ಮಾಡುವಲ್ಲಿ ಆಸಕ್ತಿ ವಹಿಸಿ ಕಲಿಯಬೇಕು. ಉತ್ತಮ ತರಬೇತಿ ಪಡೆದುಕೊಂಡು ಸ್ವಾವಲಂಬಿ ಜೀವನ ನಡೆಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಪ್ರಮೋದ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ. ಉತ್ತಮ ತರಬೇತಿ ಪಡೆದುಕೊಳ್ಳಬೇಕು. ಜಿಲ್ಲೆಯಲ್ಲಿ ಚಾಲನಾ ತರಬೇತಿ ಪಡೆಯದೆ ಇರುವ ಮಹಿಳೆಯರಿಗೆ ತರಬೇತಿ ಆಯೋಜಿಸಲಾಗಿದೆ ಎಂದರು.ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಎಜಿಎಂ ಆರ್. ಮುರಳೀಕೃಷ್ಣ, ಖಾದಿ ಗ್ರಾಮೋದ್ಯೋಗದ ಉಪನಿರ್ದೇಶಕ ಸಾದಿಕ್ ಉಲ್ಲಾ, ತಾಪಂ ಇಒ ಮಡಿಗಿನ ಬಸಪ್ಪ, ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಹಿರಿಯ ವ್ಯವಸ್ಥಾಪಕ ಶರಣಬಸವ ರೆಡ್ಡಿ, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ- ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ರಾಜೇಸಾಬ್ ಎರಿಮನಿ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ರಾಜೇಂದ್ರ, ಜಿಲ್ಲಾ ವ್ಯವಸ್ಥಾಪಕ ವಿಜಯ ಕುಮಾರ, ಉಪನ್ಯಾಸಕ ಜಡೇಶ, ಸಿದ್ದಲಿಂಗಮ್ಮ ಹಾಗೂ ಸಂತೋಷಕುಮಾರ ಉಪಸ್ಥಿತರಿದ್ದರು. ತರಬೇತಿಯಲ್ಲಿ 30 ಜನ ಶಿಬಿರಾರ್ಥಿಗಳು ಭಾಗವಹಿಸಿದ್ದರು.