ಮಹಿಳೆಯರು ಸಮಯದ ಸದ್ಬಳಕೆ ಮಾಡಿಕೊಳ್ಳಲಿ: ಜಿಲ್ಲಾಧಿಕಾರಿ ಜಾನಕಿ ಕೆ.ಎಂ.

| Published : Mar 10 2025, 12:22 AM IST

ಮಹಿಳೆಯರು ಸಮಯದ ಸದ್ಬಳಕೆ ಮಾಡಿಕೊಳ್ಳಲಿ: ಜಿಲ್ಲಾಧಿಕಾರಿ ಜಾನಕಿ ಕೆ.ಎಂ.
Share this Article
  • FB
  • TW
  • Linkdin
  • Email

ಸಾರಾಂಶ

ನಮ್ಮ ಮಹಿಳೆಯರ ಮನಸ್ಥಿತಿಯಲ್ಲಿ ಮಾತೃತ್ವ, ಭಾತೃತ್ವದ ಶಕ್ತಿಯಿದೆ. ಇಲ್ಲಿ ಯಾರೂ ಮೇಲಲ್ಲ ಕೀಳಲ್ಲ, ಎಲ್ಲರೂ ಸರ್ವ ಸಮಾನರೆಂಬ ಭಾವನೆ ಬೆಳೆಸಿಕೊಳ್ಳಬೇಕು. ಸಮಯದ ಸದ್ಬಳಕೆ ಮಾಡಿಕೊಂಡು ಆದರ್ಶ ವ್ಯಕ್ತಿಗಳಾಗಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ನಮ್ಮ ಮಹಿಳೆಯರ ಮನಸ್ಥಿತಿಯಲ್ಲಿ ಮಾತೃತ್ವ, ಭಾತೃತ್ವದ ಶಕ್ತಿಯಿದೆ. ಇಲ್ಲಿ ಯಾರೂ ಮೇಲಲ್ಲ ಕೀಳಲ್ಲ, ಎಲ್ಲರೂ ಸರ್ವ ಸಮಾನರೆಂಬ ಭಾವನೆ ಬೆಳೆಸಿಕೊಳ್ಳಬೇಕು. ಸಮಯದ ಸದ್ಬಳಕೆ ಮಾಡಿಕೊಂಡು ಆದರ್ಶ ವ್ಯಕ್ತಿಗಳಾಗಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.

ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಮತ್ತು ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿಶ್ವದ ಎಲ್ಲಾ ಕ್ಷೇತ್ರದಲ್ಲಿ ಮಹಿಳೆಯರಿಗೆ ಸಮಾನ ಸ್ಥಾನಮಾನ ದೊರೆಯವ ಅವಕಾಶಗಳಿವೆ. ಮಹಿಳೆಯರು ಮನೋಬಲ ಹಾಗೂ ಬುದ್ಧಿಬಲದೊಂದಿಗೆ ಉತ್ತಮ ಬದುಕು ಕಟ್ಟಿಕೊಳ್ಳುವ ಕಲೆ ಕಲಿತುಕೊಳ್ಳಬೇಕೆಂದು ಮಹಿಳಾ, ಬರಹಗಾರ್ತಿ ರಶ್ಮಿ ಎಸ್ ಹೇಳಿದರು.

ಪ್ರಾಂಶುಪಾಲ ಡಾ.ಅರುಣಕುಮಾರ ಗಾಳಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತದ ಸಾಂಸ್ಕೃತಿಕ ಸಮಾಜದಲ್ಲಿ ಮಹಿಳೆಯರಿಗೆ ಘನತೆ ಮತ್ತು ಗೌರವಿದೆ, ಮಾತೃತ್ವದ ಪರಂಪರೆ ಪೂಜಿಸುವ ಸಂಸ್ಕಾರ ನಮ್ಮದಾಗಿದೆ. ಸಮಾಜದಲ್ಲಿ ಮಹಿಳೆಯರಿಗೆ ಕಾಳಜಿ ಮಾಡುವುದರೊಂದಿಗೆ ರಕ್ಷಣೆ ಕೊಡುವ ಸಹೋದರತ್ವದ ಸಂಸ್ಕೃತಿಯನ್ನು ನಾವು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ಐಕ್ಯೂಎಸಿ ಸಂಚಾಲಕ ಡಾ. ಪ್ರಭುದೇವ ಮಂಡಿ ಹಾಗೂ ಮಹಿಳಾ ಸಬಲೀಕರಣ ಘಟಕದ ಸಂಚಾಲಕ ಡಾ.ಮೂಬೀನ್ ಬೆಳಗಾಮ್ ಅವರು ವೇದಿಕೆ ಮೇಲೆ ಇದ್ದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮಹಿಳಾ ದಿನಾಚರಣೆ ಪ್ರಯುಕ್ತ ಜಿಲ್ಲಾಧಿಕಾರಿ ಜಾನಕಿ.ಕೆ.ಎಂ. ಮತ್ತು ಮುಖ್ಯ ಅತಿಥಿಗಳಾದ ಅಂಕಣ ಬರಹಗಾರ್ತಿ ರಶ್ಮಿ ಎಸ್. ಅವರಿಗೆ ಕಾಲೇಜಿನ ಪರವಾಗಿ ಗೌರವ ಸನ್ಮಾನಿಸಲಾಯಿತು. ವಿವಿಧ ಸ್ಪಧರ್ಧೆಗಳ ವಿಜೇತರಿಗೆ ಪ್ರಶಸ್ತಿ ಮತ್ತು ಬಹುಮಾನ ವಿತರಿಸಲಾಯಿತು.

ಸುಜಾತ ನಾವಿ ಪ್ರಾರ್ಥಿಸಿದರು. ಡಾ.ಸುಮನ್ ಮುಚಖಂಡಿ ಸ್ವಾಗತಿಸಿ, ಪರಿಚಯಸಿದರು. ಡಾ.ಸುಮಂಗಲಾ ಮೇಟಿ ನಿರೂಪಿಸಿದರು, ಡಾ.ಮುಬೀನ ಬೆಳಗಾಮ್ ವಂದಿಸಿದರು.