ಯುವನಿಧಿ ಯೋಜನೆ ಸದ್ಬಳಕೆಯಾಗಲಿ

| Published : May 16 2025, 01:49 AM IST

ಸಾರಾಂಶ

ಯುವನಿಧಿ ಯೋಜನೆಯು ೨೦೨೩-೨೪ನೇ ಸಾಲಿನಲ್ಲಿ ಪದವಿ, ಡಿಪ್ಲೊಮಾ ತೇರ್ಗಡೆ ಆಗಿ ೬ ತಿಂಗಳಿಂದ ಉದ್ಯೋಗ ಸಿಗದೇ ಇರುವವರಿಗೆ ಮಾತ್ರ ಅನ್ವಯವಾಗಲಿದೆ. ಯೋಜನೆ ಕುರಿತು ಸಂಪೂರ್ಣ ಮಾಹಿತಿ ಪಡೆದು ಸದ್ಬಳಕೆ ಮಾಡಿಕೊಳ್ಳಬೇಕು.

ಕನಕಗಿರಿ:

ಯುವನಿಧಿ ಯೋಜನೆಯನ್ನು ಅರ್ಹ ಫಲಾನುಭವಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ತಾಲೂಕು ಘಟಕದ ಆಧ್ಯಕ್ಷ ಹಜರತ್ ಹುಸೇನ ಮುಜಾವರ ಹೇಳಿದರು.

ಪಟ್ಟಣದ ಶ್ರೀಪಂಪಣ್ಣ ಶರಣಪ್ಪ ಗುಗ್ಗಳಶೆಟ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮಾಹಿತಿ ಕೋಶ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ,

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಮಹಿಳಾ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಗುರುವಾರ ನಡೆದ ಯುವನಿಧಿ ಜಾಗೃತಿ ಹಾಗೂ ಮಹಿಳಾ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಯುವನಿಧಿ ಯೋಜನೆಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ಚಾಲನೆ ನೀಡಲಾಗಿದ್ದು, ಯುವನಿಧಿ ಜಾಗೃತಿ ಕಾರ್ಯಕ್ರಮ ಎಂಬ ಶೀರ್ಷಿಕೆಯಡಿ ಆಯೋಜನೆ ರೂಪಿಸಲಾಗಿದೆ. ಈ ಯೋಜನೆಯು ೨೦೨೩-೨೪ನೇ ಸಾಲಿನಲ್ಲಿ ಪದವಿ, ಡಿಪ್ಲೊಮಾ ತೇರ್ಗಡೆ ಆಗಿ ೬ ತಿಂಗಳಿಂದ ಉದ್ಯೋಗ ಸಿಗದೇ ಇರುವವರಿಗೆ ಮಾತ್ರ ಅನ್ವಯವಾಗಲಿದೆ. ಯೋಜನೆ ಕುರಿತು ಸಂಪೂರ್ಣ ಮಾಹಿತಿ ಪಡೆದು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿಶೇಷ ತಜ್ಞೆ ಫಾತೀಮಾ ಮಾತನಾಡಿ, ಮಹಿಳಾ ಹಕ್ಕುಗಳು, ಒಂದೇ ಸೂರಿನಡಿ ಹಲವು ಯೋಜನೆಗಳು,

ಫೋಕ್ಸೋ, ಮಹಿಳಾ ದೌರ್ಜನ್ಯ ಪ್ರಕರಣ, ಬಾಲ್ಯ ವಿವಾಹ, ಭ್ರೂಣ ಹತ್ಯೆ ಪ್ರಕರಣಗಳು ಇದ್ದಲ್ಲಿ ಯಾವ ಕಾನೂನಿನಡಿ ಪ್ರಕರಣ ದಾಖಲಿಸಬೇಕು, ಹೇಗೆ ಕಾನೂನು ಸದ್ಬಳಕೆ ಮಾಡಿಕೊಳ್ಳಬೇಕು ಎಂಬುದರ ಕುರಿತು ಮಾಹಿತಿ ನೀಡಿದರು.

ಪ್ರಾಂಶುಪಾಲ ಡಾ. ಬಜರಂಗ ಬಲಿ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಸಭಲೀಕರಣ ಇಲಾಖೆಯ ಸಮಾಲೋಚಕಿ ದುರ್ಗಾ ಎನ್, ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರಾದ ನೀಲಕಂಠ ಬಡಿಗೇರ, ಜಗದೀಶಪ್ಪ, ಭೀಮೇಶ ಕೆ. ಮಲ್ಲಾಪುರ, ಹನುಮಮ್ಮ, ಯಂಕನಗೌಡ ಪಾಟೀಲ್, ವೀರೇಶ ನವಲಿ, ಕನಕಪ್ಪ ತಳವಾರ, ಜಿಲ್ಲಾ ಮಿಷನ್ ಸಂಚಾಲಕಿ ಶ್ರೀದೇವಿ, ಸಹಾಯಕ ಪ್ರಾಧ್ಯಾಪಕರಾದ ಆಶಿಕಾ, ಲಲಿತಾ ಕಿನ್ನಾಳ, ಮರ್ವಿನ್ ಡಿಸೋಜಾ, ವೀರೇಶ ಕೆಂಗಲ್, ರಕ್ಷಿತ್ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.