ಮತದಾನದ ಪವಿತ್ರ ಕಾರ್ಯದಲ್ಲಿ ಎಲ್ಲರೂ ಪಾಲ್ಗೊಳ್ಳೋಣ: ಮಂಜುಳಾ

| Published : Apr 18 2024, 02:26 AM IST

ಮತದಾನದ ಪವಿತ್ರ ಕಾರ್ಯದಲ್ಲಿ ಎಲ್ಲರೂ ಪಾಲ್ಗೊಳ್ಳೋಣ: ಮಂಜುಳಾ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಜಾಪ್ರಭುತ್ವದಲ್ಲಿ ಮತ ಚಲಾವಣೆಗೆ ಅವಕಾಶ ಇರುವುದು ಸಂವಿಧಾನವು ನಮಗೆ ದೊಡ್ಡ ಕೊಡುಗೆಯಾಗಿದೆ.

- ಗಿಣಿಗೇರಾ ನರೇಗಾ ಕಾಮಗಾರಿ ಸ್ಥಳದಲ್ಲಿ ಸ್ವೀಪ್ ಕಾರ್ಯಕ್ರಮದಲ್ಲಿ ಪಿಡಿಒಕನ್ನಡಪ್ರಭ ವಾರ್ತೆ ಕೊಪ್ಪಳ

ಮತದಾನ ಎನ್ನುವದು ಪವಿತ್ರ ಕಾರ್ಯ. ಪ್ರಜಾಪ್ರಭುತ್ವದಲ್ಲಿ ಮತ ಚಲಾವಣೆಗೆ ಅವಕಾಶ ಇರುವುದು ಸಂವಿಧಾನವು ನಮಗೆ ದೊಡ್ಡ ಕೊಡುಗೆಯಾಗಿದೆ ಎಂದು ಗಿಣಿಗೇರಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುಳಾ ದೇವಿ ಹೂಗಾರ ಹೇಳಿದರು.

ಬುಧವಾರ ಕೊಪ್ಪಳ ತಾಲೂಕಿನ ಗಿಣಿಗೇರಾ ಗ್ರಾಮ ಪಂಚಾಯಿತಿಯ ನರೇಗಾ ಕಾಮಗಾರಿ ಸ್ಥಳವಾದ ಗಿಣಿಗೇರಾ ಗ್ರಾಮದ ಕೆರೆ ಕಾಮಗಾರಿಯಲ್ಲಿ ಗ್ರಾಪಂ ಸ್ವೀಪ್ ಸಮಿತಿ ವತಿಯಿಂದ ಕೂಲಿಕಾರರಿಗೆ ಜರುಗಿದ ಸ್ವೀಪ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮೇ 7ರಂದು ಜರುಗುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತಗಟ್ಟೆ ಕೇಂದ್ರಕ್ಕೆ ಹೋಗಿ ಮತ ಚಲಾಯಿಸುವುದರ ಮೂಲಕ ಸುಭದ್ರ ದೇಶವನ್ನಾಗಿ ನಿರ್ಮಿಸೋಣ. ಚುನಾವಣೆ ಆಯೋಗ ನಿಗದಿಪಡಿಸಿದ ದಾಖಲಾತಿ ತೆಗೆದುಕೊಂಡು ಹೋಗಿ ಸೂಕ್ತ ಎನಿಸುವ ವ್ಯಕ್ತಿಗೆ ಮತ ಚಲಾಯಿಸಬೇಕು. ಸ್ವೀಪ್ ಕಾರ್ಯಕ್ರಮಗಳನ್ನು ಪ್ರಾರಂಭಿಸಿ ಜಾಗೃತಿ ಮೂಡಿಸಲಾಗುತ್ತಿದ್ದು, ನರೇಗಾ ಕೂಲಿಕಾರರು ಮತದಾನ ಮಾಡಿ ಇತರರಿಗೆ ಮಾದರಿಯಾಗಬೇಕೆಂದು ಕರೆ ನೀಡಿದರು.

ಕಳೆದ ಬಾರಿಗಿಂತ ಈ ಬಾರಿ ವಿನೂತನವಾಗಿ ಸ್ವೀಪ್ ಕಾರ್ಯಕ್ರಮಗಳನ್ನು ಜರುಗಿಸುವ ಮೂಲಕ ಜಿಲ್ಲೆಯ ಮತದಾನ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ. ಮತ ಚಲಾವಣೆ ತುಂಬಾ ಜವಾಬ್ದಾರಿಯುತವಾದ ಕಾರ್ಯ. ಆ ಮೂಲಕ ನಾವುಗಳು ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೇ ನಿರ್ಭಯವಾಗಿ ಮತ ಚಲಾಯಿಸಬೇಕೆಂದು ಕರೆ ನೀಡಿದರು. ನಂತರ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.

ಸ್ವೀಪ್ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಮಂಜುನಾಥ ಭಾವಿಕಟ್ಟಿ, ತಾಂತ್ರಿಕ ಸಹಾಯಕಿ ಅಕ್ಷತಾ ಕುಮಾರಿ, ಬೇರ್ ಫೂಟ್ ಟೆಕ್ನಿಷಿಯನ್ ದಾವಲಸಾಬ ಮುಲ್ಲಾ, ಕರವಸೂಲಿಗಾರ ಈಶ್ವರಯ್ಯ, ಡಿಇಒ ರಾಜಾಭಕ್ಷಿ, ನೀರಗಂಟಿ ಶ್ರೀಕಾಂತ ಪೂಜಾರ, ಕಾಯಕ ಬಂಧುಗಳು, 825 ನರೇಗಾ ಕೂಲಿಕಾರರು ಭಾಗವಹಿಸಿದ್ದರು.