ಒನಕೆ ಓಬವ್ವ ಜಯಂತಿ ಅರ್ಥಪೂರ್ಣವಾಗಿ ಆಚರಿಸೋಣ: ಸಿದ್ರಾಮೇಶ್ವರ

| Published : Nov 06 2024, 12:38 AM IST

ಒನಕೆ ಓಬವ್ವ ಜಯಂತಿ ಅರ್ಥಪೂರ್ಣವಾಗಿ ಆಚರಿಸೋಣ: ಸಿದ್ರಾಮೇಶ್ವರ
Share this Article
  • FB
  • TW
  • Linkdin
  • Email

ಸಾರಾಂಶ

ನ. 11ರಂದು ನಡೆಯುವ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಪ್ರತಿ ವರ್ಷದಂತೆ ಈ ವರ್ಷವು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸೋಣ.

ಕನ್ನಡಪ್ರಭ ವಾರ್ತೆ ಕೊಪ್ಪಳ

ನ. 11ರಂದು ನಡೆಯುವ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಪ್ರತಿ ವರ್ಷದಂತೆ ಈ ವರ್ಷವು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸೋಣ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.

ಮಂಗಳವಾರ ವೀರವನಿತೆ ಒನಕೆ ಓಬವ್ಬ ಜಯಂತಿ ಅಂಗವಾಗಿ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನ. 11ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಒನಕೆ ಓಬವ್ಬ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಪುಪ್ಪಾರ್ಚನೆ ಮಾಡಲಾಗುತ್ತದೆ. ಈ ಸಂದರ್ಭ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಓನಕೆ ಓಬವ್ವ ಸಮಾಜದ ಮುಖಂಡರು ಉಪಸ್ಥಿತರಿರಬೇಕೆಂದು ಹೇಳಿದರು.

ಅಂದು ಎಲ್ಲಾ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ವೀರವನಿತೆ ಒನಕೆ ಓಬವ್ಬ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು. ಜಯಂತಿ ಆಚರಣೆ ಕುರಿತು ಜನ ಪ್ತಿನಿಧಿಗಳಿಗೂ ಮಾಹಿತಿ ನೀಡಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ಇತರೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಈ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕು. ಸಮಾಜದ ಮುಖಂಡರು ಜಯಂತಿ ಆಚರಣೆ ಕುರಿತು ತಮ್ಮ ಸಲಹೆ, ಸೂಚನೆ ನೀಡುವಂತೆ ಹೇಳಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ನಗರಸಭೆ ಅಧಿಕಾರಿ ರಾಘವೇಂದ್ರ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ. ಬಸವರಾಜ, ಚಲವಾದಿ ಸಮಾಜದ ಜಿಲ್ಲಾಧ್ಯಕ್ಷ ಗವಿಸಿದ್ದಪ್ಪ ಬೆಲ್ಲದ, ಖಜಾಂಚಿ ಹನುಮಂತಪ್ಪ ಬಂಗಾಳಿಗಿಡ, ಸದಸ್ಯರಾದ ಅನಿಲಕುಮಾರ ಬೇಗಾರ, ಕಾಶಪ್ಪ ಚಲವಾದಿ ಸೇರಿದಂತೆ ಇತರೆ ಸಮಾಜದ ಮುಖಂಡರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.