ಸಾರಾಂಶ
ಕೊಳ್ಳೇಗಾಲ ಪಟ್ಟಣದಲ್ಲಿ ಪರಿಶಿಷ್ಟ ಜಾತಿ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಿವೃತ್ತ ಶಿಕ್ಷಕರ ಸನ್ಮಾನ, ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ನಿರ್ಗಮಿತ ಪದಾಧಿಕಾರಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಸರ್ಕಾರಿ ನೌಕರರ ಸಭಾಂಗಣದಲ್ಲಿ ಜರುಗಿತು.
ಕನ್ನಡಪ್ರಭ ವಾರ್ತೆ ಕೊಳ್ಳೇಗಾಲ
ಪಟ್ಟಣದಲ್ಲಿ ಪರಿಶಿಷ್ಟ ಜಾತಿ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಿವೃತ್ತ ಶಿಕ್ಷಕರ ಸನ್ಮಾನ, ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ನಿರ್ಗಮಿತ ಪದಾಧಿಕಾರಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಸರ್ಕಾರಿ ನೌಕರರ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಅವರು, ಸಂಘ ಅಸ್ತಿತ್ವಕ್ಕೆ ಬಂದಿರುವುದು ಸಂತಸದ ವಿಚಾರ. ಸಂಘದ ಪದಾಧಿಕಾರಿಗಳೆಲ್ಲರೂ ಒಗ್ಗಟ್ಟು ಪ್ರದರ್ಶಿಸಿ ತಾಲೂಕಿನಲ್ಲಿ ಅನೇಕ ಶೈಕ್ಷಣಿಕ ಅಭಿವೃದ್ಧಿಗೆ ಸ್ಪಂದಿಸುವಂತಾಗಲಿ, ಮಕ್ಕಳ ಪ್ರಗತಿಗೆ ಮತ್ತು ಇಲಾಖಾ ಕಾರ್ಯಕ್ರಮ ಸರಾಗವಾಗಿ ನಡೆಯಲು ಕೈಜೋಡಿಸಿ ಎಂದರು. ಇದೇ ವೇಳೆ ನಿವೃತ್ತ ಶಿಕ್ಷಕರಾದ ಕೆ ಬಾಬು, ರಾಜಪ್ಪ ಅವರಿಗೆ ಬೀಳ್ಕೂಡುಗೆ ನೀಡಲಾಯಿತು.ಹನೂರು ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ಮಾತನಾಡಿ, ಇತರ ಸಂಘಗಳಂತೆ ನಾಮಕಾವಸ್ಥೆಯ ಸಂಘವಾಗದೆ ಜಿಲ್ಲಾದ್ಯಂತ ಪರಿಶಿಷ್ಟ ಜಾತಿ ಶಿಕ್ಷಕರ ಸಂಘದ ಉತ್ತಮ ರೀತಿ ಕಾರ್ಯನಿರ್ವಹಿಸುಂತಾಗಲಿ, ಈ ಸಂಘ ಚಳವಳಿ ರೂಪದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಯಶಸ್ವಿಯಾಗಿ ಸಾಗಲಿ ಎಂದರು. ಈ ವೇಳೆ ಬಿಆರ್‌ಸಿ ಮಹದೇವಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಶ್ರೀಧರ್, ಕೊಳ್ಳೇಗಾಲ ಸಾಹಿತ್ಯ ಮಿತ್ರಕೂಟದ ಅಧ್ಯಕ್ಷ ಬಿ. ದೊರಸ್ವಾಮಿ, ಗ್ರಾಮೀಣ ಶಿಕ್ಷಕ ಸಂಘದ ಅಧ್ಯಕ್ಷ ಕಲೀಂ ಶರೀಫ್, ಜಿಲ್ಲಾ ಉಪಾಧ್ಯಕ್ಷ ಬಿ ಸಿದ್ದರಾಜು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ ಶಿವಕುಮಾರ್, ಜಿಲ್ಲಾ ಸಹ ಕಾರ್ಯದರ್ಶಿ ಎಂ ಚಿಕ್ಕರಾಜು, ತಾಲೂಕು ಘಟಕದ ಗೌರವ ಅಧ್ಯಕ್ಷಬಿ ಶಿವರಾಮು ಇನ್ನಿತರರಿದ್ದರು.