ಸಾರಾಂಶ
ಜಿಲ್ಲಾಡಳಿತ, ಬಳ್ಳಾರಿ ಪ್ರಾದೇಶಿಕ ಅರಣ್ಯ ವಿಭಾಗ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬುಧವಾರ ನಗರದ ಕೋಟೆ ಪ್ರದೇಶದ ಕ್ರಿಕೆಟ್ ಕ್ಲಬ್ ಆವರಣದಲ್ಲಿ ಗಿಡ ನೆಡಲಾಯಿತು.
ಕನ್ನಡಪ್ರಭ ವಾರ್ತೆ ಬಳ್ಳಾರಿ
ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ನಾವೆಲ್ಲರೂ ಪಣ ತೊಡೋಣ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಕರೆ ನೀಡಿದರು.ಜಿಲ್ಲಾಡಳಿತ, ಬಳ್ಳಾರಿ ಪ್ರಾದೇಶಿಕ ಅರಣ್ಯ ವಿಭಾಗ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬುಧವಾರ ನಗರದ ಕೋಟೆ ಪ್ರದೇಶದ ಕ್ರಿಕೆಟ್ ಕ್ಲಬ್ ಆವರಣದಲ್ಲಿ ಗಿಡ ನೆಟ್ಟು ನೀರುಣಿಸಿ ಬಳಿಕ ಮಾತನಾಡಿದರು.
ಎಲ್ಲರೂ ಪರಿಸರದ ಕಾಳಜಿಯ ಅರಿವು ಹೊಂದಬೇಕು. ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕ ಬಿ.ಎಸ್. ಲೋಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ್ ಬಂಡಾರು, ಬಳ್ಳಾರಿ ಪ್ರಾದೇಶಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಸೂರ್ಯವಂಶಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಇದ್ದರು.