ಸಾರಾಂಶ
ಹೊಸಪೇಟೆ: ಕಾಂಗ್ರೆಸ್‌ನ್ನು ಬೇರುಮಟ್ಟದಿಂದ ಗಟ್ಟಿಗೊಳಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು. ಇದಕ್ಕಾಗಿ ಪಕ್ಷದ ಪ್ರಚಾರ ಸಮಿತಿಯಿಂದಲೇ ತಾಲೂಕು, ಹೋಬಳಿ, ಗ್ರಾಮ ಮಟ್ಟದಲ್ಲೂ ಪ್ರತ್ಯೇಕ ಸಮಿತಿ ರಚನೆ ಮಾಡಲಾಗುವುದು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.
ನಗರದ ಆಜಾದ್ ನಗರದ ವಿ.ಕೆ. ರಾಯಲ್ ಗಾರ್ಡನ್ ಫಂಕ್ಷನ್ ಹಾಲ್ ಸಭಾಂಗಣದಲ್ಲಿ ವಿಜಯನಗರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಕಾರ್ಯಕರ್ತರ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾರ್ಯಕರ್ತರು ಕೂಡ ಜಿಪಂ, ತಾಪಂ ಚುನಾವಣೆಗೂ ಸನ್ನದ್ಧರಾಗಬೇಕು. ಅದಕ್ಕೂ ಮೊದಲು ನಾವು ಪ್ರಚಾರ ಸಮಿತಿ ವತಿಯಿಂದ ಹೋಬಳಿ, ತಾಲೂಕು, ಗ್ರಾಮ ಮಟ್ಟದ ಸಮಿತಿಗಳನ್ನು ರಚನೆ ಮಾಡಬೇಕಿದೆ. ಎಲ್ಲ ಜಿಲ್ಲೆಯಲ್ಲೂ ಈ ಕಾರ್ಯ ಮಾಡಬೇಕಿದೆ ಎಂದರು.ವಿಜಯನಗರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಹಾಗೂ ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎನ್. ಎಫ್ ಮಹಮ್ಮದ್ ಇಮಾಮ್ ನಿಯಾಜಿ ಮಾತನಾಡಿ, ವಿಜಯನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಬಲವರ್ಧನೆಗೊಳಿಸಲಾಗಿದೆ. ಪ್ರಚಾರ ಸಮಿತಿ ವತಿಯಿಂದ ಎಲ್ಲ ಚುನಾವಣೆಗಳಲ್ಲೂ ಪ್ರಚಾರ ಕೈಗೊಳ್ಳಲಾಗಿದೆ. ಈಗ ಮತ್ತಷ್ಟು ಜವಾಬ್ದಾರಿ ನೀಡಲಾಗಿದ್ದು, ಇನ್ನಷ್ಟು ಹುರುಪಿನಿಂದ ಕೆಲಸ ಮಾಡಲಾಗುವುದು ಎಂದರು.
ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷ ಮಂಜುನಾಥ, ಕೆಪಿಸಿಸಿ ಪ್ರಚಾರ ಸಮಿತಿ ಸಂಯೋಜಕ ಯಶೋಧರ ಮೂರ್ತಿ ಕಾಂಗ್ರೆಸ್ ಸರ್ಕಾರದ ಸಾಧನೆ ಮತ್ತು ಅಭಿವೃದ್ಧಿ ಯೋಜನೆಗಳ ಕುರಿತು ಮಾತನಾಡಿದರು.ಹೊಸಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿನಾಯಕ ಶೆಟ್ಟರ್, ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಕುಮಾರ್, ಗ್ರಾಮಾಂತರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಂಬಯ್ಯ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಡಿ. ವೆಂಕಟರಮಣ, ಕೆಪಿಸಿಸಿ ಅಲ್ಪಸಂಖ್ಯಾತರ ಪ್ರಧಾನ ಕಾರ್ಯದರ್ಶಿ ಸಯ್ಯದ್ ಮೊಹಮ್ಮದ್, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಯೋಗಲಕ್ಷ್ಮಿ, ಹಡಗಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಟ್ರೇಶ್, ನಗರಸಭಾ ಸದಸ್ಯರಾದ ಅಸ್ಲಾಂ ಮಾಳಗಿ, ರಾಘವೇಂದ್ರ, ಮುನ್ನಿ ಖಾಂಸೀ ಮತ್ತಿತರರಿದ್ದರು.