ಸಾರಾಂಶ
ವಿಜ್ಞಾನ ಮೇಳಗಳ ಆಯೋಜನೆಯಿಂದ ಮಕ್ಕಳಲ್ಲಿನ ಕ್ರೀಯಾಶೀಲತೆ ಹೊರ ತರಲು ಸಾಧ್ಯವಾಗುತ್ತದೆ ಹೀಗಾಗಿ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ವೃದ್ದಿಸುವ ಸಲುವಾಗಿ ಎಲ್ಲರೂ ಶ್ರಮಿಸಬೇಕಿದೆ.
ಕನ್ನಡಪ್ರಭ ವಾರ್ತೆ ಚವಡಾಪುರ
ವಿಜ್ಞಾನ ಮೇಳಗಳ ಆಯೋಜನೆಯಿಂದ ಮಕ್ಕಳಲ್ಲಿನ ಕ್ರೀಯಾಶೀಲತೆ ಹೊರ ತರಲು ಸಾಧ್ಯವಾಗುತ್ತದೆ ಹೀಗಾಗಿ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ವೃದ್ದಿಸುವ ಸಲುವಾಗಿ ಎಲ್ಲರೂ ಶ್ರಮಿಸೋಣ ಎಂದು ವಿಜ್ಞಾನ ಶಿಕ್ಷಕಿ ಸಂಧ್ಯಾ ಗೋಡಬೋಲೆ ಹೇಳಿದರು.ಅಫಜಲ್ಪುರ ತಾಲೂಕಿನ ಅರ್ಜುಣಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಸೈನ್ಸ್ ಎಕ್ಸಪೋ 2024 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಚನ್ನಮಲ್ಲೇಶ್ವರ ಶಿಕ್ಷಣ ಸಂಸ್ಥೆಯ ಮುಖ್ಯಗುರು ಉಮಾಕಾಂತ ರಾಠೋಡ ಅವರು ಸಿ.ವಿ. ರಾಮನ್ ಭಾವಚಿತ್ರದ ಪೂಜೆ ಸಲ್ಲಿಸಿ ಹಾಗೂ ಅರ್ಜುಣಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಸಿದ್ದರಾಮ ಮಲ್ಲಾಬಾದ ಉದ್ಘಾಟಿಸಿ ಮಾತನಾಡಿ ವಿಜ್ಞಾನ ಮೇಳದಿಂದ ಮಕ್ಕಳ ಬೌದ್ಧಿಕ ಸಾಮರ್ಥ್ಯದ ಪರೀಕ್ಷೆ ಮತ್ತು ಪ್ರಯತ್ನಶೀಲತೆಗೆ ಪ್ರೋತ್ಸಾಹ ಸಿಕ್ಕಂತಾಗುತ್ತದೆ. ನಿಜಕ್ಕೂ ವಿಜ್ಞಾನ ಮೇಳಗಳು ಆಗಾಗ ನಡೆದು ನಮ್ಮ ಗ್ರಾಮೀಣ ಭಾಗದ ಮಕ್ಕಳಿಗೆ ಪ್ರೋತ್ಸಾಹ ಸಿಗುವಂತಾಗಬೇಕು ಎಂದರು.ಈ ಸಂದರ್ಭದಲ್ಲಿ ಮೊರಾರ್ಜಿ ವಸತಿ ಶಾಲೆಯ ಮುಖ್ಯಗುರು ಮಲ್ಲಿಕಾರ್ಜುನ, ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಶೇಖರ ಕಾಂಬಳೆ, ಶೆಟ್ಟೆಪ್ಪ ಕುಮಸಗಿ, ರವಿ, ಕಾಳಿಂಗ ತಳವಾರ, ಲಕ್ಷ್ಮೀಪುತ್ರ ಪಾಟೀಲ, ಸಪ್ನಾ ನಡಗೇರಿ, ಜೈಭೀಮ ವಾಡೆಕರ, ಬಸವರಾಜ ಅತನೂರ ಸೇರಿದಂತೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪಾಲಕರು ಇದ್ದರು.