ಶಾಸಕ ಯಶವಂತರಾಯಗೌಡ ಪಾಟೀಲರಿಗೆ ಸಚಿವ ನೀಡಲು ಆಗ್ರಹಿಸಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಇಂಡಿ ಘಟಕ ಹಾಗೂ ವಿದ್ಯಾರ್ಥಿಗಳಿಂದ ಪತ್ರ ಚಳವಳಿ ನಡೆಯಿತು.
ಕನ್ನಡಪ್ರಭ ವಾರ್ತೆ ಇಂಡಿ
ಶಾಸಕ ಯಶವಂತರಾಯಗೌಡ ಪಾಟೀಲರಿಗೆ ಸಚಿವ ನೀಡಲು ಆಗ್ರಹಿಸಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಇಂಡಿ ಘಟಕ ಹಾಗೂ ವಿದ್ಯಾರ್ಥಿಗಳಿಂದ ಪತ್ರ ಚಳವಳಿ ನಡೆಯಿತು.ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆಯುವ ಮೂಲಕ ಶಾಸಕ ಯಶವಂತರಾಯಗೌಡ ಪಾಟೀಲರಿಗೆ ಸಚಿವ ಸ್ಥಾನ ನೀಡಲು ಮನವಿ ಮಾಡಿದರು.
ಸ್ವಾತಂತ್ರ್ಯ ಬಂದ ನಂತರ ಯಾವುದೇ ಪಕ್ಷ, ಸರ್ಕಾರ ಇಂಡಿ ಮತಕ್ಷೇತ್ರಕ್ಕೆ ಸಚಿವ ಸ್ಥಾನ ನೀಡದೆ ಮಲತಾಯಿ ಧೋರಣೆ ಅನುಸರಿಸಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಂಡಿ ಕ್ಷೇತ್ರಕ್ಕೆ ಸಚಿವ ಸ್ಥಾನ ನೀಡಿ ಈ ಭಾಗದ ಅಭಿವೃದ್ದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.ಈ ಭಾಗದಲ್ಲಿ ಶಿಕ್ಷಣ ರಂಗದಲ್ಲಿ ಕ್ರಾಂತಿ ಮಾಡಿ ಜಿಟಿಟಿಸಿ ಕಾಲೇಜು ಮತ್ತು ಶಾಲಾ ಕಾಲೇಜು ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ ಅಡಿಪಾಯ ಹಾಕಿ ಈ ಭಾಗದ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚು ಒತ್ತು ಕೊಟ್ಟಿರುವ ಶಾಸಕ ಯಶವಂತರಾಯಗೌಡರಿಗೆ ಸಚಿವ ಸ್ಥಾನ ನೀಡಿದರೆ ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡಲು ಸಹಕಾರಿ ಆಗುತ್ತದೆ ಎಂದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಅಧ್ಯಕ್ಷ ಸುನೀಲ ಕುಮಾರ ಅತನೂರ ಹೇಳಿದರು.
ಇದೇ ಸಂದರ್ಭ ಮಾತನಾಡಿದ ಸಂಘಟನಾ ಕಾರ್ಯದರ್ಶಿ ರಾಹುಲ ಮಡ್ಡಿಮನಿ, ಶಾಸಕ ಯಶವಂತರಾಯಗೌಡ ಪಾಟೀಲರಿಗೆ ಸಚಿವ ಸ್ಥಾನ ನೀಡುವ ಮೂಲಕ ಈ ಭಾಗಕ್ಕೆ ಸಾಮಾಜಿಕ, ಅಭಿವೃದ್ದಿಯ ನ್ಯಾಯ ನೀಡಬೇಕು ಎಂದು ಮನಿ ಮಾಡಿದರು.ಉಪಾಧ್ಯಕ್ಷ ಪ್ರಕಾಶ, ಸುದೀಪ್, ಸಂಚಾಲಕರ ಸಂತೋಷ , ಗಂಗಾಧರ , ಈಶ್ವರ , ಸುರೇಶ, ಭರತ, ಗೋವಿಂದ, ಅಕ್ಬರ್ ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗಿಯಾಗಿದ್ದರು.