ಕೆಜಿಎಫ್:ಇತ್ತೀಚೆಗೆ ನಗರದ ವಾರ್ಡ್‌ವೊಂದರಲ್ಲಿ ನಡೆದ ಪಿಂಚಣಿ ಅದಲಾತ್ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಗಾಯತ್ರಿ ಅವರು ತಮಿಳು ಭಾಷೆಯಲ್ಲಿ ಭಾಷಣ ಮಾಡಿದ್ದಕ್ಕೆ ವಿವಿಧ ಸಂಘಟನೆಗಳು ವ್ಯಾಪಕ ಟೀಕೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು ಬರೆದು ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹಿಸಿದ್ದಾರೆ.
ಕಳೆದ ಜು. ೧೨ರಂದು ನಗರದ ೧೮ನೇ ವಾರ್ಡ್‌ನಲ್ಲಿ ನಡೆದ ಪಿಂಚಣಿ ಅದಾಲತ್ ಸರ್ಕಾರಿ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಗಾಯತ್ರಿ ಅವರು ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿ ತಮಿಳು ಭಾಷೆಯಲ್ಲಿ ಭಾಷಣ ಮಾಡಿದ್ದು, “ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಕನ್ನಡ ಕಡ್ಡಾಯ ನಿಯಮ ಉಲ್ಲಂಘನೆ, ತಾಲೂಕು ದಂಡಾಧಿಕಾರಿ ಅಮಾನತಿಗೆ ಆಗ್ರಹ, ತಹಸೀಲ್ದಾರ್ ತಮಿಳು ಭಾಷಣಕ್ಕೆ ಆಕ್ರೋಶ” ಎಂಬ ಶೀರ್ಷಿಕೆಯಡಿಯಲ್ಲಿ ಕನ್ನಡ ಪ್ರಭ ವರದಿಯ ವಿಸ್ತೃತ ವರದಿಯನ್ನು ಪ್ರಕಟಿಸಿತ್ತು.ಈ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್ ರವರಿಗೆ ಪತ್ರ ಬರೆದು ಇಂತಹ ಪ್ರಕರಣಗಳ ಕುರಿತಂತೆ ಸರ್ಕಾರವು ಗಂಭೀರವಾಗಿ ಪರಿಗಣಿಸದೇ ಹೋದಲ್ಲಿ ನೆಲದ ಭಾಷೆಯ ಕುರಿತಂತೆ ಅನಾದರ ಹೆಚ್ಚುತ್ತಲೇ ಹೋಗುವ ಸಾಧ್ಯತೆ ಇರುತ್ತದೆ. ನಮ್ಮ ನಾಡಿನಲ್ಲಿಯೇ ಕನ್ನಡವೂ ಪರಕೀಯವಾಗುವ ಅಪಾಯವು ಒದಗುವ ಸಾಧ್ಯತೆ ಇರುವುದರಿಂದ ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.೧೪ಕೆಜಿಎಫ್೬ತಹಸೀಲ್ದಾರ್ ಗಾಯತ್ರಿ೧೪ಕೆಜಿಎಫ್೭ಕನ್ನಡ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ್ ಬಿಳಿಮಲೆ