ಕೃಷಿ ಭೂಮಿ ಕೈಗಾರಿಕೆಗೆ ವಶಪಡಿಸಿಕೊಳ್ಳುವ ಕ್ರಮ ವಿರೋಧಿಸಿ ರಾಷ್ಟ್ರಪತಿಗೆ ಪತ್ರ

| Published : Oct 20 2025, 01:04 AM IST

ಕೃಷಿ ಭೂಮಿ ಕೈಗಾರಿಕೆಗೆ ವಶಪಡಿಸಿಕೊಳ್ಳುವ ಕ್ರಮ ವಿರೋಧಿಸಿ ರಾಷ್ಟ್ರಪತಿಗೆ ಪತ್ರ
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ ಯೋಗ್ಯಭೂಮಿ ವಶಪಡಿಸಿಕೊಂಡು ಬಹುರಾಷ್ಟ್ರೀಯ ಕಂಪನಿಗಳಿಗೆ ಹಂಚಿಕೆ ಮಾಡುವುದನ್ನು ನಿಲ್ಲಿಸಬೇಕು

ಕುರುಗೋಡು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ ಯೋಗ್ಯಭೂಮಿ ವಶಪಡಿಸಿಕೊಂಡು ಬಹುರಾಷ್ಟ್ರೀಯ ಕಂಪನಿಗಳಿಗೆ ಹಂಚಿಕೆ ಮಾಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ರಾಷ್ಟ್ರಪತಿಗೆ ಬರೆದ ಮನವಿಯನ್ನು ಅಖಿಲ ಭಾತರ ಕೃಷಿ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ರೈತರು ಇಲ್ಲಿನ ತಹಶೀಲ್ದಾರಗೆ ಮನವಿ ಸಲ್ಲಿಸಿದರು.

ಕೇಂದ್ರ ಮತ್ತು ರಾಜ್ಯಗಳ ರೈತ ವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಗೋವಿಂದ್ ಮತ್ತು ಕಾರ್ಯದರ್ಶಿ ಗುರಳ್ಳಿ ರಾಜ ಮಾತನಾಡಿ, ಬಹುರಾಷ್ಟ್ರೀಯ ಕಂಪನಿಗಳನ್ನು ಓಲೈಸಲು ಸರ್ಕಾರಗಳು ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಂಡಿ ರೈತರು ಮತ್ತು ಕೃಷಿ ಕಾರ್ಮಿಕರನ್ನು ಮೂಲೆ ಗುಂಪು ಮಾಡುತ್ತಿದೆ ಎಂದು ಆರೋಪಿಸಿದರು.

ಒಡಿಶಾ, ಆಂಧ್ಯಪ್ರದೇಶ, ಉತ್ತರಪ್ರದೇಶ ರಾಜ್ಯಗಳ ಕೆಲವು ಜಿಲ್ಲೆಗಳಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಂಡು ರೈತರು ಮತ್ತು ಕೃಷಿ ಕಾರ್ಮಿಕರಿಗೆ ಉದ್ಯೋಗವಿಲ್ಲದಂತೆ ಮಾಡಿದ್ದಾರೆ. ಈ ಕ್ರಮದಿಂದ ಸರ್ಕಾರಗಳು ಹಿಂದೆ ಸರಿಯಬೇಕು. ಇಲ್ಲವಾದರೆ ರಾಷ್ಟ್ರವ್ಯಾಪ್ತಿ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಲಿಂಗಪ್ಪ, ಬಸವರಾಜ, ಹೊನ್ನೂರಪ್ಪ, ಕಾಳಿಂಗಪ್ಪ, ಮಾರೆಪ್ಪ, ಪಂಪನಗೌಡ, ಬಸವನಗೌಡ, ಸಿದ್ದಪ್ಪ, ನಾಗರಾಜ, ನಾಗೀರೆಡ್ಡಿ ಮತ್ತು ತಿಮ್ಮಾರೆಡ್ಡಿ ಇದ್ದರು.

ಕುರುಗೋಡು ಅಖಿಲ ಭಾತರ ಕೃಷಿ ಕಾರ್ಮಿಕ ಸಂಘಟನೆ ತಾಲೂಕು ಘಟಕದಿಂದ ರಾಷ್ಟ್ರಪತಿಗೆ ಬರೆದ ಮನವಿಯನ್ನು ತಹಶೀಲ್ದಾರ್ ನರಸಪ್ಪ ಅವರಿಗೆ ಸಲ್ಲಿಸಿದರು.