ನಾಸೀರ ಹುಸೇನ್‌ ಪ್ರಮಾಣವಚನ ವಿರುದ್ಧ ಉಪರಾಷ್ಟ್ರಪತಿಗೆ ಪತ್ರ: ವಿಜಯೇಂದ್ರ

| Published : Mar 06 2024, 02:17 AM IST

ನಾಸೀರ ಹುಸೇನ್‌ ಪ್ರಮಾಣವಚನ ವಿರುದ್ಧ ಉಪರಾಷ್ಟ್ರಪತಿಗೆ ಪತ್ರ: ವಿಜಯೇಂದ್ರ
Share this Article
  • FB
  • TW
  • Linkdin
  • Email

ಸಾರಾಂಶ

ಪಾಕ್ ಪರ ಘೋಷಣೆ ಆರೋಪದ ತನಿಖೆ ಸಂಪೂರ್ಣವಾಗಿ ಮುಗಿಯುವವರೆಗೂ ಕಾಂಗ್ರೆಸ್‌ನಿಂದ ರಾಜ್ಯಸಭೆಗೆ ಆಯ್ಕೆಯಾದ ನಾಸೀರ ಹುಸೇನ್ ಅವರು ಪ್ರಮಾಣ ವಚನ ತೆಗೆದುಕೊಳ್ಳಬಾರದು ಎಂದು ಆಗ್ರಹಿಸಿ ಉಪರಾಷ್ಟ್ರಪತಿಗೆ ಪತ್ರ ಬರೆಯಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಪಾಕ್ ಪರ ಘೋಷಣೆ ಆರೋಪದ ತನಿಖೆ ಸಂಪೂರ್ಣವಾಗಿ ಮುಗಿಯುವವರೆಗೂ ಕಾಂಗ್ರೆಸ್‌ನಿಂದ ರಾಜ್ಯಸಭೆಗೆ ಆಯ್ಕೆಯಾದ ನಾಸೀರ ಹುಸೇನ್ ಅವರು ಪ್ರಮಾಣ ವಚನ ತೆಗೆದುಕೊಳ್ಳಬಾರದು ಎಂದು ಆಗ್ರಹಿಸಿ ಉಪರಾಷ್ಟ್ರಪತಿಗೆ ಪತ್ರ ಬರೆಯಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನಸೌಧದ ಒಳಗಡೆ ಕೆಲ ದೇಶದ್ರೋಹಿಗಳು ಪಾಕಿಸ್ತಾನ ಪರ ಘೋಷಣೆ ‌ಕೂಗಿದ್ದಾರೆ. ಇದನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ ಮಾಡಿದ ಬಳಿಕ ದೇಶದ್ರೋಹಿಗಳನ್ನು ಬಂಧಿಸಿದ್ದಾರೆ. ಪಾಕ್ ಪರ ಘೋಷಣೆ ಕೂಗಿರುವ ಎಫ್ಎಸ್ಎಲ್ ವರದಿಯನ್ನು ರಾಜ್ಯ ಸರ್ಕಾರ ಇಲ್ಲಿಯವರೆಗೂ ಬಹಿರಂಗಪಡಿಸಿಲ್ಲ. ಖಾಸಗಿ ಎಫ್ಎಸ್ಎಲ್ ವರದಿ ಬಹಿರಂಗಗೊಳ್ಳದಿದ್ದರೆ, ದೇಶದ್ರೋಹಿಗಳನ್ನು ಬಂಧಿಸಲು ರಾಜ್ಯ ಸರ್ಕಾರ ಮೀನಮೇಷ ಎಣಿಸುತ್ತಿತ್ತು. ವ ಕಾರಣದಿಂದ ಎಫ್ಎಸ್ಎಲ್ ವರದಿಯನ್ನು ಬಹಿರಂಗಗೊಳಿಸಲು ಸಾಧ್ಯವಾಗುತ್ತಿಲ್ಲ ಎಂಬುದಕ್ಕೆ ರಾಜ್ಯ ಸರ್ಕಾರವೇ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು. ವಾಸ್ತವವಾಗಿ ಈ ಪ್ರಕರಣದ ಸೂತ್ರಧಾರಿ ಯಾರು ಎಂಬುದು ಬಹಿರಂಗಗೊಳ್ಳಬೇಕು. ಪ್ರಕರಣದಲ್ಲಿ ಪ್ರಮುಖವಾಗಿ ರಾಜ್ಯಸಭಾ ಸದಸ್ಯ ನಾಸೀರ ಹುಸೇನ್ ಅವರ ಹೆಸರನ್ನೇ ಪೊಲೀಸರು ಕೈ ಬಿಟ್ಟಿರುವುದು‌ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ನಾಸೀರ ಹುಸೇನ್ ಅವರನ್ನು ಆರೋಪಿಯಾಗಿ ಪೊಲೀಸರು ಪರಿಗಣಿಸಿ ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ರಾಜ್ಯಸಭಾ ಸದಸ್ಯರಾದವರು ದೇಶದ ಸಂವಿಧಾನವನ್ನು ಎತ್ತಿ ಹಿಡಿಯುತ್ತೇವೆ ಎಂದು ಪ್ರಮಾಣ ವಚನ ಮಾಡುತ್ತಾರೆ. ನಾಸೀರ ಹುಸೇನ್ ರಾಜ್ಯಸಭಾ ಸದಸ್ಯರಾಗಿ ನೇಮಕವಾದ ಬಳಿಕ ಅವರ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿದರೂ ನಾಸೀರ್ ಮೇಲೆ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಜರಿದರು.ಕಾಂಗ್ರೆಸ್ ನಾಯಕರು ನಿಜವಾಗಿಯೂ ದೇಶ ಪ್ರೇಮಿಗಳಾಗಿದ್ದರೆ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ತನಿಖೆ ವೇಳೆ ಪೊಲೀಸ್ ಅಧಿಕಾರಿಗಳ ಮೇಲೆ ಸರ್ಕಾರ ಒತ್ತಡ ಹಾಕುವುದು ಸರಿಯಲ್ಲ ಎಂದರು.