ಸರ್ಧಾತ್ಮಕ ಪರೀಕ್ಷೆಗಳಿಗೆ ಗ್ರಂಥಾಲಯಗಳು ಅವಶ್ಯ: ನೈಯ್ಕೋಡಿ

| Published : Nov 17 2023, 06:45 PM IST

ಸರ್ಧಾತ್ಮಕ ಪರೀಕ್ಷೆಗಳಿಗೆ ಗ್ರಂಥಾಲಯಗಳು ಅವಶ್ಯ: ನೈಯ್ಕೋಡಿ
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ನೇಮಕಾತಿ ಪರೀಕ್ಷೆಗಳ ತಯಾರಿಗಾಗಿ ಸಾರ್ವಜನಿಕ ಗ್ರಂಥಾಲಯಗಳು ಅತ್ಯವಶ್ಯಕವಾಗಿವೆ. ಇದರಿಂದ ಸಾಮಾನ್ಯ ಬಡವರ್ಗದ ಸ್ಪರ್ಧಾಕಾಂಕ್ಷಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹುಣಸಗಿ ತಹಸೀಲ್ದಾರ್ ಬಸಲಿಂಗಪ್ಪ ನೈಯ್ಕೋಡಿ ಹೇಳಿದರು.

ಹುಣಸಗಿ: ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ನೇಮಕಾತಿ ಪರೀಕ್ಷೆಗಳ ತಯಾರಿಗಾಗಿ ಸಾರ್ವಜನಿಕ ಗ್ರಂಥಾಲಯಗಳು ಅತ್ಯವಶ್ಯಕವಾಗಿವೆ. ಇದರಿಂದ ಸಾಮಾನ್ಯ ಬಡವರ್ಗದ ಸ್ಪರ್ಧಾಕಾಂಕ್ಷಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹುಣಸಗಿ ತಹಸೀಲ್ದಾರ್ ಬಸಲಿಂಗಪ್ಪ ನೈಯ್ಕೋಡಿ ಹೇಳಿದರು.

ಪಟ್ಟಣದ ಯುಕೆಪಿ ಕ್ಯಾಂಪಿನಲ್ಲಿರುವ ಶಾಖಾ ಗ್ರಂಥಾಲಯ ಹಾಗೂ ಎಸ್.ಕೆ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಾರ್ವಜನಿಕ ಗ್ರಂಥಾಲಯಗಳು ಜನಸಾಮಾನ್ಯರಿಗಾಗಿ ಜ್ಞಾನ, ಮಾಹಿತಿ ನೀಡುತ್ತದೆ. ವಿಶೇಷವಾಗಿ ಸ್ಪರ್ಧಾಕಾಂಕ್ಷಿಗಳಿಗೆ ಸ್ಪರ್ಧಾತ್ಮಕ ಕೃತಿಗಳನ್ನು ಹೆಚ್ಚು ನೀಡುತ್ತಿವೆ ಎಂದರು.

ಎಸ್.ಕೆ ಸಂಸ್ಥೆ ಆಡಳಿತಾಧಿಕಾರಿ ಬಿಜಿ ದೇಸಾಯಿ ಮಾತಾನಾಡಿ, ಕಾಲ ಬದಲಾದಂತೆ ಜ್ಞಾನ ವಿಕಾಸದ ವ್ಯಾಪ್ತಿ ವಿಸ್ತಾರವಾದಂತೆ ಗ್ರಂಥಾಲಯಗಳು ಬೆಳೆಯಬೇಕು. ಗ್ರಂಥಾಲಯದಲ್ಲಿರುವ ಸಾಹಿತ್ಯಿಕ ಕೃತಿಗಳ ಅಧ್ಯಯನದಿಂದ ಮನುಷ್ಯ ತನ್ನ ವ್ಯಕ್ತಿತ್ವ ರೂಪಿಸಿಕೊಳ್ಳಲು ಮತ್ತು ಶೈಕ್ಷಣಿಕವಾಗಿ ಬೆಳೆಯಲು ಅನುಕೂಲವಾಗುತ್ತದೆ ಎಂದರು.

ತಾಲೂಕು ವೈದ್ಯಾಧಿಕಾರಿ ಡಾ.ಎಸ್.ಬಿ ಪಾಟೀಲ್ ಮಾತನಾಡಿ, ಕಾಲೇಜು ವಿದ್ಯಾಭ್ಯಾಸ ಅವಧಿಯಲ್ಲಿ ಹೆಚ್ಚು ಗ್ರಂಥಾಲಯದಲ್ಲಿ ಸಮಯ ಕಳೆಯುತ್ತಿದ್ದೇವು ಎಂದು ತಮ್ಮ ಶೈಕ್ಷಣಿಕ ಜೀವನದ ಕ್ಷಣಗಳನ್ನು ನೆನಪಿಸಿಕೊಂಡರು.

ಶಾಖಾ ಗ್ರಂಥಾಲಯದ ಸಹಾಯಕ ಗ್ರಂಥಪಾಲಕ ಬಸನಗೌಡ ಪಾಟೀಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಖಾಸ್ಗತೇಶ್ವರ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ಮುರಿಗೆಣ್ಣ ಎನ್ ದೇಸಾಯಿ ಅಧ್ಯಕ್ಷತೆ ವಹಿಸಿದ್ದರು. ಶಂಕರಗೌಡ ದೊಡ್ಮನಿ ನಿರೂಪಿಸಿದರು. ಕಾಲೇಜು ಪ್ರಾಂಶುಪಾಲ ಆರ್‌ಎನ್ ಹೂಗಾರ ವಂದಿಸಿದರು.