ಸಾರಾಂಶ
ಸಂಡೂರು: ಸ್ಪರ್ಧಾತ್ಮಕ ಪರೀಕ್ಷೆಯ ಯಶಸ್ಸಿಗೆ ಗ್ರಂಥಾಲಯ ಸಹಕಾರಿಯಾಗಿದೆ. ಐಎಎಸ್, ಕೆಎಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ವಿದ್ಯಾರ್ಥಿಗಳು ಗ್ರಂಥಾಲಯಗಳಲ್ಲಿನ ಪುಸ್ತಕಗಳ ಪ್ರಯೋಜನ ಪಡೆಯಬೇಕು ಎಂದು ತಹಶೀಲ್ದಾರ ಜಿ. ಅನಿಲ್‌ಕುಮಾರ್ ಹೇಳಿದರು.
ಪಟ್ಟಣದ ಸಾರ್ವಜನಿಕ ಗ್ರಂಥಾಲಯ ಹಾಗೂ ಲಕ್ಷ್ಮೀ.ಎಸ್ .ನಾನಾವಟೆ ಶಿಕ್ಷಣ ಮಹಾವಿದ್ಯಾಲಯ ಸಂಡೂರು ಇವರ ಸಹಯೋಗದೊಂದಿಗೆ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ಶ್ರೀಶೈಲೇಶ್ವರ ವಿದ್ಯಾಕೇಂದ್ರದ ಲಕ್ಷ್ಮೀ. ಎಸ್ ನಾನಾವಟೆ ಶಿಕ್ಷಣ ಮಹಾವಿದ್ಯಾಲಯದ ಸೆಮೀನಾರ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಐಎಎಸ್‌ಕೆಎಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ಪುಸ್ತಕಗಳು, ಮಾಹಿತಿಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ವಿಫಲರಾಗುತ್ತಿದ್ದಾರೆ. ಸ್ಪರ್ಧಾತ್ಮಕ ದಿನಗಳಲ್ಲಿ ಸರ್ಕಾರಿ ಹಾಗೂ ಕಾರ್ಪೋರೇಟ್ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವುದು ಸುಲಭ ಹಾಗೂ ಸರಳವಾಗಿರುದಿಲ್ಲ, ಕನಸಿನ ಕೆಲಸ ಪಡೆಯುವ ಬಯಕೆಗೆ ಸಾಕಷ್ಟು ಸಮರ್ಪಣಾ ಭಾವನೆ, ಕಠಿಣ ಪರಿಶ್ರಮ ಮತ್ತು ತಾಳ್ಮೆ ಬೇಕು. ಜೊತೆಗೆ ಸಾರ್ವಜನಿಕ ಗ್ರಂಥಾಲಯದಲ್ಲಿನ ಪುಸ್ತಕಗಳ ಭಂಡಾರದ ಜ್ಞಾನವನ್ನು ಪಡೆದುಕೊಂಡಾಗ ಯಶಸ್ಸನ್ನುಕಾಣಲು ಸಾಧ್ಯಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೆಚ್. ಷಡಕ್ಷರಯ್ಯ, ಗ್ರಂಥಪಾಲಕರಾದ ಮಲ್ಲಪ್ಪ ಗುಡ್ಲಾನೂರು, ಪ್ರ‍್ರಾಚಾರ್ಯ ಯು. ದೇವರಾಜ್ ಹಾಗೂ ಸಿಬ್ಬಂದಿ ವರ್ಗದವರು ಮತ್ತು ಪ್ರ-ಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.ಸಂಡೂರಿನ ಶ್ರೀಶೈಲೇಶ್ವರ ವಿದ್ಯಾಕೇಂದ್ರದ ಲಕ್ಷ್ಮೀ.ಎಸ್ ನಾನಾವಟೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷಾರ್ತಿಗಳ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.