ಐಕಳ ಪೊಂಪೈ ಕಾಲೇಜಿನಲ್ಲಿ ಗ್ರಂಥಾಲಯ ಮಾಹಿತಿ ತರಬೇತಿ ಕಾರ್ಯಕ್ರಮ

| Published : May 31 2024, 02:15 AM IST

ಐಕಳ ಪೊಂಪೈ ಕಾಲೇಜಿನಲ್ಲಿ ಗ್ರಂಥಾಲಯ ಮಾಹಿತಿ ತರಬೇತಿ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಗ್ರಂಥಾಲಯ ಮಾಹಿತಿ ತರಬೇತಿಯ ಪ್ರಮಾಣಪತ್ರ ವಿತರಣೆ ಮತ್ತು ಉತ್ತಮ ಓದುಗ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಮೂಲ್ಕಿ

ಓದಿನಿಂದ ಶಬ್ದ ಸಂಪತ್ತು, ಅನ್ವೇಷಣೆ, ಏಕಾಗ್ರತೆ, ನೆನಪಿನ ಶಕ್ತಿ, ಆತ್ಮವಿಶ್ವಾಸ, ಸೃಜನಾತ್ಮಕತೆ ಹೆಚ್ಚಾಗುತ್ತದೆ ಎಂದು ಶಿರ್ವ ಸೈಂಟ್ ಮೇರಿಸ್ ಕಾಲೇಜಿನ ಉಪನ್ಯಾಸಕ ಡಾ. ವಿಠಲ್ ನಾಯಕ್ ಹೇಳಿದರು.

ಐಕಳ ಪೊಂಪೈ ಕಾಲೇಜಿನ ಗ್ರಂಥಾಲಯ ವಿಭಾಗ, ಅರ್ಥಶಾಸ್ತ್ರ ವಿಭಾಗ, ಐ.ಕ್ಯೂ.ಎಸ್‌.ಸಿ ಮತ್ತು ಓದುಗರ ಸಂಘದ ಸಹಯೋಗದಲ್ಲಿ ಕಾಲೇಜಿನಲ್ಲಿ ನಡೆದ ಗ್ರಂಥಾಲಯ ಮಾಹಿತಿ ತರಬೇತಿಯ ಪ್ರಮಾಣಪತ್ರ ವಿತರಣೆ ಮತ್ತು ಉತ್ತಮ ಓದುಗ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಪುರುಷೋತ್ತಮ ಕೆ.ವಿ. ಅಧ್ಯಕ್ಷತೆಯನ್ನು ವಹಿಸಿದ್ದರು. ಗ್ರಂಥಾಲಯ ವಿಭಾಗದ ಮುಖ್ಯಸ್ಥರಾದ ವಿನಿತಾ ರೋಡ್ರಿಗಸ್‌ ಕಾರ್ಯಕ್ರಮವನ್ನು ಸಂಯೋಜಿಸಿದರು. ಸಂಪನ್ಮೂಲ ವ್ಯಕ್ತಿಗಳ ಮುಖಾಂತರ ಗ್ರಂಥಾಲಯ ಮಾಹಿತಿ ವಿಜ್ಞಾನ ಕೋರ್ಸಿನ ಪ್ರಮಾಣ ಪತ್ರವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಪುಸ್ತಕ ವಿಮರ್ಶೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿಯನ್ನು ನೀಡಲಾಯಿತು. ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಫ್ಲೋರಿನ್ ಡಿಸೋಜ, ನಿಶಿತ್ ಫೆರ್ನಾಂಡಿಸ್, ಕನ್ನಡ ವಿಭಾಗದ ಪೃಥ್ವಿರಾಜ್, ವಿದ್ಯಾರ್ಥಿ ವಿದ್ಯಾರ್ಥಿನಿಯರು ಬೋಧಕ ಬೋಧಕೇತರ ವರ್ಗದವರು ಉಪಸ್ತಿತರಿದ್ದರು. ಕೃತಿಕಾ ಕಾರ್ಯಕ್ರಮ ನಿರೂಪಿಸಿದರು.