ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಪರವಾನಗಿ ರದ್ದು

| Published : Jul 30 2025, 12:47 AM IST

ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಪರವಾನಗಿ ರದ್ದು
Share this Article
  • FB
  • TW
  • Linkdin
  • Email

ಸಾರಾಂಶ

ಅನಧಿಕೃತವಾಗಿ ಸ್ಟಾಕ್‌ ಇಟ್ಟುಕೊಂಡು ಮಾರಾಟ ಮಾಡಬಾರದು. ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡು ಬಂದರೆ ಅಂತಹವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು.

ಕೊಪ್ಪಳ:

ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡಿದರೆ ಪರವಾನಗಿ ರದ್ದುಪಡಿಸಿ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು ಎಂದು ಸಚಿವ ಶಿವರಾಜ್ ತಂಗಡಗಿ ಮಾರಾಟಗಾರರಿಗೆ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲೆಯ ರಸಗೊಬ್ಬರ ಮಾರಾಟಗಾರರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅನಧಿಕೃತವಾಗಿ ಸ್ಟಾಕ್‌ ಇಟ್ಟುಕೊಂಡು ಮಾರಾಟ ಮಾಡಬಾರದು. ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡು ಬಂದರೆ ಅಂತಹವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದರು.

ಜು.31ರಂದು ಜಿಲ್ಲೆಗೆ 800 ಮೆಟ್ರಿಕ್ ಟನ್, ಆ. 1 ಮತ್ತು 3ರಂದು ತಲಾ 1200 ಮೆಟ್ರಿಕ್ ಟನ್ ರಸಗೊಬ್ಬರ ಜಿಲ್ಲೆಗೆ ಬರಲಿದೆ. ಈ ಮಾಹಿತಿಯನ್ನು ರೈತರಿಗೆ ತಿಳಿಸಬೇಕೆಂದು ರಸಗೊಬ್ಬರ ವಿತರಕರಿಗೆ ಸಚಿವರು ಹೇಳಿದರು.

ನಕಲಿ ಗೊಬ್ಬರ ಮಾರಾಟ ಮಾಡುವುದು ಕಂಡು ಬಂದರೆ ಸಹಿಸುವುದಿಲ್ಲ. ಈಗಾಗಲೇ ಒಂದು ನಕಲಿ ಗೊಬ್ಬರ ಮಾರಾಟ ಫ್ಯಾಕ್ಟರಿ ಸೀಜ್ ಮಾಡಲಾಗಿದೆ. ರೈತರಿಗೆ ಹಾನಿಯಾದರೆ ನಾವು ಸಹಿಸಿಕೊಳ್ಳುವುದಿಲ್ಲ ಎಂದರು.ಸಭೆಯಲ್ಲಿ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಪಂ ಸಿಇಒ ವರ್ಣಿತ ನೇಗಿ, ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಉಪಾಧ್ಯಕ್ಷ ಮಂಜುನಾಥ ಗೊಂಡಬಾಳ, ಕೃಷಿ ಇಲಾಖೆ ಉಪ ನಿರ್ದೇಶಕ ಎಲ್. ಸಿದ್ದೇಶ್ ಹಾಗೂ ಅಧಿಕಾರಿ ವರ್ಗದವರಿದ್ದರು.