ಸಾರಾಂಶ
ಸಾಲಿಗ್ರಾಮದ ಡಾ. ಕೋಟ ಶಿವರಾಮ ಕಾರಂತ ಸಂಶೋಧನ ಮತ್ತು ಅಧ್ಯಯನ ಟ್ರಸ್ಟ್ ವತಿಯಿಂದ ಕಡಲತಡಿಯ ಭಾರ್ಗವ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೋಟ ಶಿವರಾಮ ಕಾರಂತರ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಕೋಟ
ಕೋಟ ಶಿವರಾಮ ಕಾರಂತರ ಬದುಕೇ ಒಂದು ವಿಸ್ಮಯ. ಅವರು ತಮ್ಮ ಬಹುಮುಖಿ ಪ್ರತಿಭೆಗಳ ಮೂಲಕ ವಿಶ್ವಮಟ್ಟದಲ್ಲಿ ತೆರೆದುಕೊಂಡು, ವಿಶ್ವಕೋಶವಾಗಿ ಜನಮಾನಸದಲ್ಲಿ ನೆಲೆಯಾದರು ಎಂದು ಸಾಹಿತಿ ನರೇಂದ್ರ ಕುಮಾರ್ ಕೋಟ ಅಭಿಪ್ರಾಯಪಟ್ಟರು.ಇಲ್ಲಿನ ಸಾಲಿಗ್ರಾಮದ ಡಾ. ಕೋಟ ಶಿವರಾಮ ಕಾರಂತ ಸಂಶೋಧನ ಮತ್ತು ಅಧ್ಯಯನ ಟ್ರಸ್ಟ್ ವತಿಯಿಂದ ಕಡಲತಡಿಯ ಭಾರ್ಗವ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೋಟ ಶಿವರಾಮ ಕಾರಂತರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ನುಡಿನಮನ ಸಲ್ಲಿಸಿ ಮಾತನಾಡಿದರು.ಕಾರಂತರ ಪರಿಸರ ಪ್ರಜ್ಞೆ ವಿಚಾರಧಾರೆ ಮುಂದಿನ ತಲೆಮಾರಿನತ್ತ ಕೊಂಡೊಯ್ಯಬೇಕಿದೆ. ಈ ನಿಟ್ಟಿನಲ್ಲಿ ಯುವ ಸಮುದಾಯ ವಿಶೇಷ ಆಸಕ್ತಿಯಿಂದ ಅಧ್ಯಯನ ನಡೆಸಿ ಕಾರಂತರಂತಾಗಲಿ ಎಂದು ಹಾರೈಸಿದರು.ಅಧ್ಯಯನ ಕೇಂದ್ರದ ವಿಶ್ವಸ್ಥ ಮಂಡಳಿಯ ಪ್ರಮುಖರಾದ ಗುಜ್ಜಾಡಿ ಪ್ರಭಾಕರ್ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಆಭರಣ ಜ್ಯುವೆಲ್ಲರ್ಸ್ ನಿರ್ದೇಶಕ ಸುಭಾಷ್ ಎಂ. ಕಾಮತ್, ಮಹೇಶ್ ಎಂ. ಕಾಮತ್, ಸಂಧ್ಯಾ ಎಸ್. ಕಾಮತ್, ಬ್ರಹ್ಮಾವರ ಕಸಾಪ ಅಧ್ಯಕ್ಷ ಜಿ. ರಾಮಚಂದ್ರ ಐತಾಳ್, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ಕಲಾಕೇಂದ್ರದ ಕಾರ್ಯದರ್ಶಿ ರಾಜಶೇಖರ್ ಹೆಬ್ಬಾರ್, ವಿಶ್ವಸ್ಥ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಗುರುರಾಜ್ ಕೋಟೇಶ್ವರ ಸ್ವಾಗತಿಸಿ, ನಿರೂಪಿಸಿದರು. ಕಾರ್ಯದರ್ಶಿ ನಾರಾಯಣ ಆಚಾರ್ ವಂದಿಸಿದರು. ಈ ಮೊದಲು ಕಾರಂತರ ಭಾವಚಿತ್ರಕ್ಕೆ ಅಥಿತಿಗಳು ಪುಷ್ಪನಮನ ಸಲ್ಲಿಸಿದರು.