ಸಾರಾಂಶ
ಕನ್ನಡಪ್ರಭ ವಾರ್ತೆ ರಾಮದುರ್ಗರಾಜ್ಯದಲ್ಲಿ ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದ ಪಂಚ್ ಗ್ಯಾರಂಟಿಗಳನ್ನು ಈಡೇರಿಸಿದ್ದು, ಗ್ರಾಮೀಣ ಮಹಿಳೆಯರ ಬದುಕು ಉಜ್ವಲವಾಗಿದೆ ಎಂದು ವಿಧಾನ ಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.
ಕನ್ನಡಪ್ರಭ ವಾರ್ತೆ ರಾಮದುರ್ಗರಾಜ್ಯದಲ್ಲಿ ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದ ಪಂಚ್ ಗ್ಯಾರಂಟಿಗಳನ್ನು ಈಡೇರಿಸಿದ್ದು, ಗ್ರಾಮೀಣ ಮಹಿಳೆಯರ ಬದುಕು ಉಜ್ವಲವಾಗಿದೆ ಎಂದು ವಿಧಾನ ಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.
ತಾಲೂಕಿನ ಎಂ.ಚಂದರಗಿ ಪಂಚಾಯತಿ ವ್ಯಾಪ್ತಿಯಲ್ಲಿ ಕೆರೆ ಹೂಳು ತೆಗೆಯುತ್ತಿದ್ದ ನರೇಗಾ ಕಾರ್ಮಿಕರಲ್ಲಿ ಬೆಳಗಾವಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಪರ ಮತಯಾಚಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದರೇ ಅನೇಕ ಗ್ಯಾರಂಟಿಗಳನ್ನು ನೀಡಲಿದೆ ಎಂದು ಭರವಸೆ ನೀಡಿದರು.ಬಿಜೆಪಿ ಕೇವಲ ಸುಳ್ಳು ಹೇಳಿಕೊಂಡು ಅಧಿಕಾರ ನಡೆಸುತ್ತಿದೆ. ಬಡವರ, ದೀನದಲಿತರ ಏಳಿಗೆಗಾಗಿ ಅನೇಕ ಯೋಜನೆಗಳನ್ನು ರೂಪಿಸಿದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು. ಬೆಳಗಾವಿ ಲೋಕಸಭಾ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರಗೆ ಮತ ನೀಡಬೇಕು ಎಂದು ಕೋರಿದರು.
ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಜಹೂರ ಹಾಜಿ, ಎಂ.ಚಂದರಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಸಂಜಯ ಹಳ್ಳಿ, ಸದಸ್ಯರಾದ ಬಸವರಾಜ ದಾಸಪ್ಪಗೋಳ, ಈರಣ್ಣ ಅಂಗಡಿ ಸೇರಿದಂತೆ ಗ್ರಾಮದ ಮುಖಂಡರು ಹಾಜರಿದ್ದರು.