ಧರ್ಮಸ್ಥಳ ಗ್ರಾಮದ ಬುರುಡೆ ಕೇಸ್ ಪ್ರಕರಣದಲ್ಲಿ ಸುಳ್ಳು ಸಾಕ್ಷಿ ಹೇಳಿದ ಆರೋಪದಲ್ಲಿ ಜೈಲು ಸೇರಿ, ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾದ ಚಿನ್ನಯ್ಯ, ತನಗೆ ಮತ್ತು ತನ್ನ ಕುಟುಂಬಕ್ಕೆ ಬುರುಡೆ ಗ್ಯಾಂಗ್‌ನ ಐವರಿಂದ ಜೀವ ಬೆದರಿಕೆ ಇದೆ ಎಂದು ದೂರು ನೀಡಿದ್ದಾನೆ.
ಮಂಗಳೂರು : ಧರ್ಮಸ್ಥಳ ಗ್ರಾಮದ ಬುರುಡೆ ಕೇಸ್ ಪ್ರಕರಣದಲ್ಲಿ ಸುಳ್ಳು ಸಾಕ್ಷಿ ಹೇಳಿದ ಆರೋಪದಲ್ಲಿ ಜೈಲು ಸೇರಿ, ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾದ ಚಿನ್ನಯ್ಯ, ತನಗೆ ಮತ್ತು ತನ್ನ ಕುಟುಂಬಕ್ಕೆ ಬುರುಡೆ ಗ್ಯಾಂಗ್‌ನ ಐವರಿಂದ ಜೀವ ಬೆದರಿಕೆ ಇದೆ ಎಂದು ದೂರು ನೀಡಿದ್ದಾನೆ.
ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ ಆರೋಪ ಹೊತ್ತಿರುವ ತಿಮರೋಡಿ ಗ್ಯಾಂಗ್
ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದಲ್ಲಿ ಭಾಗಿಯಾದ ಆರೋಪ ಹೊತ್ತಿರುವ, ಸೌಜನ್ಯ ಪರ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟೆನ್ನವರ್, ಟಿ ಜಯಂತ್, ವಿಠಲ ಗೌಡ ಮತ್ತು ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ದೂರು ನೀಡಿದ್ದಾನೆ. ಧರ್ಮಸ್ಥಳ ಗ್ರಾಮದ ಸುತ್ತ ನಡೆದ ಅತ್ಯಾಚಾರ, ಕೊಲೆ ಮತ್ತು ಶವಹೂತ ಪ್ರಕರಣಗಳಿಗೆ ಸಂಬಂಧಿಸಿದಂತೆ ತಾನು ನೀಡಿದ ಹೇಳಿಕೆಗಳನ್ನು ಹಿಂತೆಗೆದುಕೊಂಡಿರುವುದರಿಂದ ಇವರು ತನಗೆ ಮತ್ತು ತನ್ನ ಹೆಂಡತಿಗೆ ತೊಂದರೆ ಉಂಟು ಮಾಡಬಹುದು ಎಂದು ದೂರಿನಲ್ಲಿ ಆರೋಪಿಸಿದ್ದಾನೆ. ಅಲ್ಲದೆ, ಇವರಿಂದ ತನಗೆ ರಕ್ಷಣೆ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾನೆ. ದೂರು ದಾಖಲಿಸಿಕೊಂಡಿರುವ ಪೊಲೀಸರು, ಈ ಸಂಬಂಧ ತನಿಖೆ ಮುಂದುವರಿಸಿದ್ದಾರೆ.
ಧರ್ಮಸ್ಥಳದಲ್ಲಿ ಈ ಹಿಂದೆ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದ ಚಿನ್ನಯ್ಯ
ಧರ್ಮಸ್ಥಳದಲ್ಲಿ ಈ ಹಿಂದೆ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದ ಚಿನ್ನಯ್ಯ, 1995 ಮತ್ತು 2014ರ ನಡುವೆ ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾಚಾರಕ್ಕೊಳಗಾದ ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರ ಶವಗಳನ್ನು ರಹಸ್ಯವಾಗಿ ಹೂಳಲಾಗಿದೆ. ನಾನೇ ಅವುಗಳನ್ನು ಹೂತಿದ್ದೇನೆ ಎಂದು ಆರೋಪಿಸಿ, ದೂರು ನೀಡಿದ್ದ. ಬಳಿಕ, ನಡೆದ ಎಸ್‌ಐಟಿ ತನಿಖೆ ವೇಳೆ, ಉಲ್ಟಾ ಹೊಡೆದು, ಸುಳ್ಳು ಹೇಳಲು ತನ್ನ ಮೇಲೆ ಒತ್ತಡವಿತ್ತು ಎಂದು ಹೇಳಿಕೊಂಡಿದ್ದ.
