ಮುತ್ಸಂದ್ರ ಕೃಷ್ಣಾರೆಡ್ಡಿಗೆ ಜೀವಮಾನ ಸಾಧನೆ ಪ್ರಶಸ್ತಿ

| Published : Jan 07 2025, 12:16 AM IST

ಸಾರಾಂಶ

ಹೊಸಕೋಟೆ: ಯಲಹಂಕದ ಬಾಗಲೂರಿನಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ನ 4ನೇ ವೈಜ್ಞಾನಿಕ ಸಮ್ಮೇಳನದಲ್ಲಿ ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಮುತ್ಸಂದ್ರ ಗ್ರಾಮದ ಎಂ.ಎ.ಕೃಷ್ಣಾರೆಡ್ಡಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ಮಾಜಿ ಸಚಿವೆ, ಕಲಾವಿದೆ ಉಮಾಶ್ರೀ ಅವರು ಪ್ರದಾನ ಮಾಡಿ ಗೌರವಿಸಿದರು.

ಹೊಸಕೋಟೆ: ಯಲಹಂಕದ ಬಾಗಲೂರಿನಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ನ 4ನೇ ವೈಜ್ಞಾನಿಕ ಸಮ್ಮೇಳನದಲ್ಲಿ ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಮುತ್ಸಂದ್ರ ಗ್ರಾಮದ ಎಂ.ಎ.ಕೃಷ್ಣಾರೆಡ್ಡಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ಮಾಜಿ ಸಚಿವೆ, ಕಲಾವಿದೆ ಉಮಾಶ್ರೀ ಅವರು ಪ್ರದಾನ ಮಾಡಿ ಗೌರವಿಸಿದರು. ಮುತ್ಸಂದ್ರ ಎಂಎ.ಕೃಷ್ಣಾರೆಡ್ಡಿ ರಾಜ್ಯರೆಡ್ಡಿ ಸಂಘದ ನಿರ್ದೇಶಕರಾಗಿ, ಸಮಾಜ ಸೇವಕರಾಗಿ ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದಾರೆ. ಇವರ ಸಾಮಾಜಿಕ ಕಳಕಳಿಯನ್ನ ಗುರುತಿಸಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಜೀವಮಾನ ಸಾಧನಾ ಪ್ರಶಸ್ತಿ ನೀಡಲಾಗಿದೆ.

ಪ್ರಶಸ್ತಿ ಪುರಸ್ಕೃತ ಎಂ.ಎ.ಕೃಷ್ಣಾರೆಡ್ಡಿ ಮಾತನಾಡಿ, ವ್ಶೆಜ್ಞಾನಿಕ ಸಂಶೋಧನಾ ಪರಿಷತ್ ವ್ಶೆಜ್ಞಾನಿಕ ಮನೋಭಾವವನ್ನು ಭಿತ್ತಿ ಮೂಢನಂಬಿಕೆಗಳಿಂದ ಜನರನ್ನು ಹೊರತರುವ ಮಹತ್ವದ ಕಾರ್ಯ ಮಾಡುತ್ತಿದೆ. ಜತೆಗೆ ಪ್ರತಿ ವರ್ಷ ಸಮಾಜ ಸೇವಕರನ್ನು ಗುರ್ತಿಸಿ ಅವರಿಗೆ ಪ್ರಶಸ್ತಿ ನೀಡುತ್ತಿರುವುದು ಪ್ರಶಂಶನೀಯ. ಇಂತಹ ಪ್ರಶಸ್ತಿಗಳು ಮತ್ತಷ್ಟು ಸೇವೆ ಮಾಡುವ ಜವಾಬ್ದಾರಿಯನ್ನು ಹೆಚ್ಚಿಸುತ್ತವೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ರಾಜ್ಯಾಧ್ಯಕ್ಷ ಹುಲಿಕಲ್ ನಟರಾಜ್, ಆಳಂದ ಶಾಸಕ ಬಿ.ಆರ್.ಪಾಟೀಲ್ ಸೇರಿದಂತೆ ಗಣ್ಯರು ಹಾಜರಿದ್ದರು.

ಫೋಟೋ : 6 ಹೆಚ್‌ಎಸ್‌ಕೆ 4

ಹೊಸಕೋಟೆ ತಾಲೂಕು ಅನುಗೊಂಡನಹಳ್ಳಿ ಹೋಬಳಿ ಮುತ್ಸಂದ್ರ ಗ್ರಾಮದ ಸಮಾಜ ಸೇವಕ ಎಂಎ ಕೃಷ್ಣಾರೆಡ್ಡಿ ಅವರಿಗೆ ಜೀವಮಾನ ಸಾಧನಾ ಪ್ರಶಸ್ತಿ-2024 ಧಕ್ಕಿದ್ದು ರಂಗಕರ್ಮಿ ಉಮಾಶ್ರೀ ಪ್ರಶಸ್ತಿ ಪ್ರಧಾನ ಮಾಡಿದರು.