ಸಾರಾಂಶ
ಕಲ್ಪತರು ಪ್ರಥಮ ದರ್ಜೆ ವಿಜ್ಞಾನ ಕಾಲೇಜಿನಲ್ಲಿ ಶೈಕ್ಷಣಿಕ ಚುಟವಟಿಕೆಗಳ ಉದ್ಘಾಟನಾ ಸಮಾರಂಭ
ಕನ್ನಡಪ್ರಭ ವಾರ್ತೆ ತಿಪಟೂರುವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಮತ್ತು ಸೃಜನಶೀಲತೆಯು ಅನಾವರಣಗೊಂಡಾಗ ಮಾತ್ರ ವಿದ್ಯಾರ್ಥಿ ಜೀವನದಲ್ಲಿ ಬೆಳಕನ್ನು ಕಾಣಲು ಸಾಧ್ಯ. ಈ ನಿಟ್ಟಿನಲ್ಲಿ ಹಿಂಜರಿಕೆ, ಭಯದ ಭಾವನೆಗಳನ್ನು ಬಿಟ್ಟು ಆತ್ಮ ಮನೋಬಲದಿಂದ ಉತ್ತಮ ಶಿಕ್ಷಣ ಪಡೆದು ಪರಿಪೂರ್ಣ ವ್ಯಕ್ತಿತ್ವನ್ನು ರೂಪಿಸಿಕೊಳ್ಳಬೇಕೆಂದು ಬೆಂಗಳೂರು ವಿವಿಎಸ್ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹಾಗೂ ಸಾಹಿತಿ ಡಾ.ಎಂ.ಸಿ. ಪ್ರಕಾಶ್ ತಿಳಿಸಿದರು.
ನಗರದ ಕಲ್ಪತರು ಪ್ರಥಮ ದರ್ಜೆ ವಿಜ್ಞಾನ ಕಾಲೇಜಿನ ೨೦೨೩-೨೪ನೇ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ ವೇದಿಕೆ, ವಿಜ್ಞಾನ ವೇದಿಕೆ, ಎನ್‌ಸಿಸಿ, ಎನ್‌ಎಸ್ಎಸ್, ಇಕೋ ಕ್ಲಬ್, ಫಿಲ್ಮ್ ಕ್ಲಬ್, ಯುವ ರೆಡ್ ಕ್ರಾಸ್, ರೇಂಜರ್ ಮತ್ತು ರೋವರ್ಸ್ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳಲ್ಲಿ ಅಗಾದವಾದ ಶಕ್ತಿ, ಪ್ರತಿಭೆ ಅಡಗಿದ್ದು, ಅದನ್ನು ಹೇಗೆ ನಿಭಾಯಿಸಬೇಕೆಂಬುದು ಅವರಿಗೆ ತಿಳಿಯದಂತಾಗಿದೆ. ಬಹಳಷ್ಟು ಸಾಧಕರಿದ್ದು ಅವರ ಆದರ್ಶ ಜೀವನ ಚರಿತ್ರೆಗಳನ್ನು ಅರಿತು ನಡೆದರೆ ಸಾಧನೆಯ ಹಾದಿ ಸುಲಭವಾಗಲಿದೆ. ವಿದ್ಯಾರ್ಥಿಗಳು ಮೊದಲು ತಮ್ಮ ಜವಾಬ್ದಾರಿ, ಮುಟ್ಟಬೇಕಾದ ಗುರಿಯನ್ನು ಮುಟ್ಟಿಯೇ ತೀರುತ್ತೇನೆಂಬ ಹಠ, ಛಲವನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕಿದೆ ಎಂದರು.
ಕಲ್ಪತರು ವಿದ್ಯಾ ಸಂಸ್ಥೆಯ ಉಪಾಧ್ಯಕ್ಷ ಜಿ.ಪಿ. ದೀಪಕ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾವಂತರಾಗಿ ವಿನಯತೆ, ವಿವೇಕ ಜ್ಞಾನವನ್ನು ಬೆಳಸಿಕೊಂಡು ಸುಸಂಸ್ಕೃತ ಸಮಾಜವನ್ನು ನಿರ್ಮಾಣ ಮಾಡಬೇಕು. ಸಂಸ್ಥೆಯು ನಿಮಗೆ ಬೇಕಾದ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಎಲ್ಲಾ ರೀತಿಯ ವ್ಯವಸ್ಥೆ ಕಲ್ಪಿಸಿದೆ. ಓದಿನ ಕಡೆ ಹೆಚ್ಚು ಗಮನಹರಿಸುವ ಮೂಲಕ ಉತ್ತಮ ಜ್ಞಾನದ ಜೊತೆ ಅಂಕಗಳನ್ನು ಪಡೆದು ಸಂಸ್ಥೆಗೆ, ಕಾಲೇಜಿಗೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕೆಂದರು.ಕಲ್ಪತರು ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಂ.ಆರ್. ಸಂಗಮೇಶ್, ಎಚ್.ಜಿ. ಸುಧಾಕರ್, ಉಪಾಧ್ಯಕ್ಷ ಬಾಗೇಪಲ್ಲಿ ನಟರಾಜ್ ಮಾತನಾಡಿ, ಶೈಕ್ಷಣಿಕ ಕ್ಷೇತ್ರವು ಸ್ಪರ್ಧಾತ್ಮಕ ಕ್ಷೇತ್ರವಾಗಿ ರೂಪುಗೊಳ್ಳುತ್ತಿದ್ದು, ಪ್ರತಿಯೊಂದು ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಆಸಕ್ತಿ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳ ಒಳಿತಿಗಾಗಿ ನಮ್ಮ ಸಂಸ್ಥೆ ಶ್ರಮಿಸುತ್ತಿದೆ. ಅವರ ಗುರಿ ಉದ್ದೇಶ ಈಡೇರಿಸುವ ಸಲುವಾಗಿ ಸುಸಜ್ಜಿತ ಕಟ್ಟಡ, ಕ್ಯಾಂಪಸ್, ಗ್ರಂಥಾಲಯ, ಲ್ಯಾಬ್‌ಗಳನ್ನು ಹೊಂದಿದೆ. ಜತೆಗೆ ಅನುಭವಿ ಮತ್ತು ನುರಿತ ಬೋದಕ ಸಿಬ್ಬಂದಿ ವರ್ಗವನ್ನು ಒಳಗೊಂಡಿದೆ. ಈ ಎಲ್ಲಾ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಬಳಸಿಕೊಂಡು ಶೈಕ್ಷಣಿಕ ಕ್ಷೇತ್ರಕ್ಕೆ ಕೊಡುಗೆ ನೀಡಬೇಕೆಂದರು.
ಕಾರ್ಯಕ್ರಮದಲ್ಲಿ ಕಲ್ಪತರು ಪ್ರಥಮ ದರ್ಜೆ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಚಿತ್ತರಂಜನ್ ರೈ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ ಮತ್ತು ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಬಾಕ್ಸ್........
ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ದೆಸೆಯಿಂದ ಸಾಧಿಸುವ ಛಲವನ್ನು ಅರಿತುಕೊಂಡು, ಇತರರಿಗೆ ಮಾದರಿಯಾಗಿ ಬೆಳೆಯಬೇಕು. ಗುರಿ, ಶಿಸ್ತು, ಜವಬ್ದಾರಿಯಿಂದ ಸಾಧನೆಯ ಹಾದಿಯಲ್ಲಿ ಪ್ರಾಮಾಣಿಕವಾಗಿ ನಡೆಯಬೇಕು.-ಡಾ.ಎಂ.ಸಿ. ಪ್ರಕಾಶ್, ಸಾಹಿತಿಫೋಟೋ
13-ಟಿಪಿಟಿ1ಕಲ್ಪತರು ಪ್ರಥಮ ದರ್ಜೆ ವಿಜ್ಞಾನ ಕಾಲೇಜಿನ ೨೦೨೩-೨೪ನೇ ಶೈಕ್ಷಣಿಕ ವರ್ಷದ ಉದ್ಘಾಟನಾ ಸಮಾರಂಭದಲ್ಲಿ ಸಾಹಿತಿ ಡಾ.ಎಂ.ಸಿ. ಪ್ರಕಾಶ್, ಕೆವಿಎಸ್ ಪದಾಧಿಕಾರಿಗಳು ಹಾಗೂ ಪ್ರಾಂಶುಪಾಲರು ಇದ್ದಾರೆ.