ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಚಾಲುಕ್ಯರ ವಿಶ್ವ ಪಾರಂಪರಿಕ ತಾಣವಾದ ಐತಿಹಾಸಿಕ ಪಟ್ಟದಕಲ್ಲಿನ ಸ್ಮಾರಕಗಳಿಗೆ ವಿದ್ಯುತ್ ದೀಪಾಲಂಕಾರದ ಮೆರಗು ನೀಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಚಾಲುಕ್ಯರ ವಿಶ್ವ ಪಾರಂಪರಿಕ ತಾಣವಾದ ಐತಿಹಾಸಿಕ ಪಟ್ಟದಕಲ್ಲಿನ ಸ್ಮಾರಕಗಳಿಗೆ ವಿದ್ಯುತ್ ದೀಪಾಲಂಕಾರದ ಮೆರಗು ನೀಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಹೇಳಿದರು.

ವಿದ್ಯುತ್ ದೀಪಾಲಂಕಾರದ ಡೆಮೋ ವೀಕ್ಷಣೆಯ ನಂತರ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು ಪಟ್ಟದಕಲ್ಲಿನಲ್ಲಿ ₹1.40 ಕೋಟಿ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲಾಗುತ್ತಿದೆ. ಸಂಜೆ 6 ರಿಂದ ರಾತ್ರಿ 9 ಗಂಟೆವರೆಗೆ ವಿದ್ಯುತ್ ದೀಪಾಲಂಕಾರದ ಮೆರಗು ನೀಡಲಾಗುತ್ತಿದೆ. ಭಾರತೀಯ ಪುರಾತತ್ವ ಇಲಾಖೆಯು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಸಿಆರ್.ಎಸ್ ಅನುದಾನಡಿಯಲ್ಲಿ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ. ಲೈಟಿಂಗ್ ಜೋಡನೆ ಕಾರ್ಯ ಪೂರ್ಣಗೊಂಡಿದ್ದು, ಮೂರು ದಿನಗಳ ಕಾಲ ಡೆಮೋ ಮಾಡಲಾಗುತ್ತಿದೆ ಎಂದು ತಿಳಿಸಿದರು.ವಿದ್ಯುತ್ ದೀಪಾಲಂಕಾರದ ಜೊತೆಗೆ ಇಂಪಾದ ಸಂಗೀತದ ಧ್ವನಿ ಕೂಡಾ ಅಳವಡಿಕೆಗೆ ಚಿಂತನೆ ಮಾಡಲಾಗುತ್ತಿದೆ. ಉದ್ಘಾಟನೆಯ ಬಳಿಕ ಇದು ನಿರಂತರವಾಗಿ ವ್ಯವಸ್ಥೆ ಮಾಡಲಾಗಿದೆ. ಇನ್ನು ಮುಂದು ಐತಿಹಾಸಿಕ ಸ್ಮಾರಕಳನ್ನು ವಿದ್ಯುತ್ ಅಲಂಕಾರದ ಮೆರಗಿನಲ್ಲಿ ಕಣ್ತುಂಬಿಕೊಳ್ಳಬಹುದಾಗಿದೆ. ವಿದ್ಯುತ್ ದೀಪಾಲಂಕಾರದ ವ್ಯವಸ್ಥೆಯ ನಿರ್ವಹಣೆಯನ್ನು ಮೂರು ವರ್ಷಗಳ ಕಾಲ ಇಂಡಿಯನ್ ಆಯಿಲ್ ಕಾರ್ಪರೇಷನ್ದವರೇ ಮಾಡಲಿದ್ದಾರೆ. ನಂತರ ಭಾರತೀಯ ಪುರಾತತ್ವ ಇಲಾಖೆಯವರು ಮಾಡಲಿದ್ದಾರೆಂದು ತಿಳಿಸಿದರು.

ಈ ಸಮಯದಲ್ಲಿ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ಭಾರತೀಯ ಪುರಾತತ್ವ ಇಲಾಖೆಯ ಅಧೀಕ್ಷಕ ರಮೇಶ ಮೂಲಿಮನಿ, ಉಪ ಅಧೀಕ್ಷಕ ಶ್ರೀಗುರು ಭಾಗಿ, ಹಿರಿಯ ಸಹಾತಕ ಸಂರಕ್ಷಣಾಧಿಕಾರಿ ಅನಿರುದ್ದ ದೇಸಾಯಿ ಸೇರಿದಂತೆ ಇತರರು ಇದ್ದರು.