ಹರಿಹರದಲ್ಲಿ ಲಿಂ. ಶ್ರೀ ಡಾ.ಮಹಾಂತ ಶಿವಾಚಾರ್ಯ ಶ್ರೀಗಳ ಜಯಂತ್ಯುತ್ಸವ

| Published : Oct 02 2024, 01:04 AM IST

ಹರಿಹರದಲ್ಲಿ ಲಿಂ. ಶ್ರೀ ಡಾ.ಮಹಾಂತ ಶಿವಾಚಾರ್ಯ ಶ್ರೀಗಳ ಜಯಂತ್ಯುತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ಹರಿಹರದ ಪಂಚಮಸಾಲಿ ಪೀಠದ ಆವರಣದಲ್ಲಿರುವ ಮಠದಲ್ಲಿ ಭಾನುವಾರ ಲಿಂಗೈಕ್ಯ ಶ್ರೀ ಡಾ.ಮಹಾಂತ ಶಿವಾಚಾರ್ಯ ಸ್ವಾಮೀಜಿಯವರ 87ನೇ ಜಯಂತ್ಯುತ್ಸವ ಕಾರ್ಯಕ್ರಮ ನಡೆಯಿತು.

- ನೂತನ ಉಪ ಮೇಯರ್ ಸೋಗಿ ಶಾಂತಕುಮಾರ್ ಸನ್ಮಾನ- - - ದಾವಣಗೆರೆ: ಹರಿಹರದ ಪಂಚಮಸಾಲಿ ಪೀಠದ ಆವರಣದಲ್ಲಿರುವ ಮಠದಲ್ಲಿ ಭಾನುವಾರ ಲಿಂಗೈಕ್ಯ ಶ್ರೀ ಡಾ.ಮಹಾಂತ ಶಿವಾಚಾರ್ಯ ಸ್ವಾಮೀಜಿಯವರ 87ನೇ ಜಯಂತ್ಯುತ್ಸವ ಕಾರ್ಯಕ್ರಮ ನಡೆಯಿತು.

ಅಲಗೂರು ಬಬಲೇಶ್ವರದ ಪಂಚಮಸಾಲಿ ಜಗದ್ಗುರು ಶ್ರೀ ಮಹಾದೇವ ಶಿವಾಚಾರ್ಯ ಸ್ವಾಮೀಜಿ, ಮನಗೂಳಿ ಹಿರೇಮಠದ ಶ್ರೀ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯದಲ್ಲಿ ಲಿಂಗೈಕ್ಯ ಜಗದ್ಗುರುಗಳ ಕರ್ತೃ ಗದ್ದುಗೆಯಲ್ಲಿ ಜಗದ್ಗುರುಗಳ ನೂತನ ಪಂಚಲೋಹದ ಉತ್ಸವ ಮೂರ್ತಿಯ ಮಹಾರುದ್ರಾಭಿಷೇಕ ಮತ್ತು ಪೂಜಾ ವಿಧಿವಿಧಾನಗಳು ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ದಾವಣಗೆರೆ ಮಹಾನಗರ ಪಾಲಿಕೆ ನೂತನ ಉಪ ಮೇಯರ್ ಆಗಿ ಆಯ್ಕೆಯಾದ ಸೋಗಿ ಶಾಂತಕುಮಾರ್ ರನ್ನು ಸನ್ಮಾನಿಸಲಾಯಿತು.

ಪಲ್ಲಕ್ಕಿ ಉತ್ಸವ ನಂತರ ನಡೆದ ಧರ್ಮಸಭೆಯಲ್ಲಿ ಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ, ಆಡಳಿತಾಧಿಕಾರಿ ಡಾ.ರಾಜಕುಮಾರ, ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯಾಧ್ಯಕ್ಷ ಸೋಮನಗೌಡ ಮಾಲಿ ಪಾಟೀಲ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪರಮೇಶ್ ಪಟ್ಟಣ ಶೆಟ್ಟಿ, ರಾಜ್ಯ ಮಹಿಳಾ ಘಟಕ ಉಪಾಧ್ಯಕ್ಷೆ ವಸಂತ ಬಿ. ಹುಲ್ಲತ್ತಿ, ರಾಜ್ಯ ಕಾರ್ಯಧ್ಯಕ್ಷೆ ರಶ್ಮಿ ನಾಗರಾಜ್ ಕುಂಕೋದ್, ಲಕ್ಷ್ಮೇಶ್ವರ ತಾಲೂಕು ಅಧ್ಯಕ್ಷ ಮಾಗಡಿ ಮಂಜುನಾಥ್, ಸಮಾಜದ ಹಿರಿಯರಾದ ಹೊಳೆಸಿರಿಗೇರಿ ನಾಗನಗೌಡ, ಎಸ್.ಚನ್ನಬಸಪ್ಪ, ವಿಜಯನಗರ ಜಿಲ್ಲಾಧ್ಯಕ್ಷ ಪ್ರಕಾಶ್ ಪಾಟೀಲ್, ಹರಿಹರ ತಾಲೂಕು ಅಧ್ಯಕ್ಷ ಗುಳದಳ್ಳಿ ಶೇಖರಪ್ಪ, ಮನಗೂಳಿ ಗ್ರಾಮದ ಭಕ್ತರು, ಸಮಾಜ ಬಾಂಧವರು, ಉಪಸಿತರಿದ್ದರು.

- - -

-30ಕೆಡಿವಿಜಿ32ಃ:

ಹರಿಹರದ ಪಂಚಮಸಾಲಿ ಪೀಠದಲ್ಲಿ ಲಿಂಗೈಕ್ಯ ಶ್ರೀ ಡಾ.ಮಹಾಂತ ಶಿವಾಚಾರ್ಯ ಸ್ವಾಮೀಜಿ 87ನೇ ಜಯಂತ್ಯುತ್ಸವ ಕಾರ್ಯಕ್ರಮ ನಡೆಯಿತು.