ಕೊಚ್ಚಿಹೋದ ಕಡೆಗದ್ದೆ ಸಂಪರ್ಕ ರಸ್ತೆ

| Published : Oct 11 2024, 11:59 PM IST

ಸಾರಾಂಶ

ಮಳೆ ಹಾನಿ ಪ್ರದೇಶಕ್ಕೆ ಹರತಾಳು ಹಾಲಪ್ಪ ಭೇಟಿ ನೀಡಿ ಪರಿಶೀಲನೆ ನಡಸಿದರು.

ಕನ್ನಡಪ್ರಭ ವಾರ್ತೆ ರಿಪ್ಪನ್‍ಪೇಟೆ

ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಸಮೀಪದ ಅರಸಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಚಲಿಜಡ್ಡು ಕಡೇಗದ್ದೆ ಸಂಪರ್ಕ ರಸ್ತೆ ಕೊಚ್ಚಿ ಹೋಗಿದ್ದು ಆಕ್ಕ ಪಕ್ಕದ ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಣದ ನಷ್ಟ ಸಂಭವಿಸಿದೆ.

ಸುದ್ದಿ ತಿಳಿದು ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಹರತಾಳು ಹಾಲಪ್ಪ ಅತಿವೃಷ್ಠಿಯಿಂದ ಹಾನಿಗೊಳಗಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾನಿಗೀಡಾಗಿರುವ ಸಂಪರ್ಕ ರಸ್ತೆಯನ್ನು ಶೀಘ್ರ ದುರಸ್ಥಿಗೊಳಿಸಿಲು ಹಾಗೂ ಬೆಳೆ ನಷ್ಟಕ್ಕೆ ತುರ್ತು ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಗಮನ ಸೆಳೆಯಲಾಗುವುದು ಎಂದರು.

ಈ ಸಂದರ್ಭದಲ್ಲಿ ಪಕ್ಷದ ತಾಲೂಕು ಮುಖಂಡರು ಊರಿನ ಗ್ರಾಮಸ್ಥರು ರೈತ ಮುಖಂಡರು ಹಾಜರಿದ್ದರು.

* ಧಾರಾಕಾರ ಮಳೆಗೆ ಮನೆ ಕುಸಿತ: ರಾತ್ರಿ ಸುರಿದ ಭಾರೀ ಮಳೆಗೆ ಸಮೀಪದ ಅಮೃತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳಲಿಕೊಪ್ಪ ಸುರೇಶ ಎಂಬುವರ ವಾಸದ ಮನೆಯು ಕುಸಿದು ಅಪಾರ ಹಾನಿಯಾಗಿದೆ.

ಸುದ್ದಿ ತಿಳಿದು ಅಮೃತ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಚಿನ್‍ಗೌಡ ಮತ್ತು ಪಂಚಾಯಿತಿ ಸಿಬ್ಬಂದಿ ವರ್ಗ ಭೇಟಿ ನೀಡಿ ಮನೆಯವರಿಗೆ ಧೈರ್ಯ ತುಂಬಿ ಸರ್ಕಾರದಿಂದ ಪರಿಹಾರ ಕೊಡಿಸುವ ಬಗ್ಗೆ ಭರವಸೆ ನೀಡಿದರು.