ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬೆಳ್ತಂಗಡಿ ಲಯನ್ಸ್ ಕ್ಲಬ್, ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್, ಬೆಳ್ತಂಗಡಿ ವರ್ತಕರ ಸಂಘ, ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘ ನಿಯಮಿತ ಇವುಗಳ ಸಂಯುಕ್ತ ಆಶ್ರಯದಲ್ಲಿ ಟೀಮ್ ಈಶ್ವರ ಮಲ್ಪೆ ಇವರ ಸಹಯೋಗದೊಂದಿಗೆ ಉಚಿತ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣಾ ಕಾರ್ಯಕ್ರಮ ಬೆಳ್ತಂಗಡಿ ಲಯನ್ಸ್ ಭವನದಲ್ಲಿ ಭಾನುವಾರ ನಡೆಯಿತು.

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬೆಳ್ತಂಗಡಿ ಲಯನ್ಸ್ ಕ್ಲಬ್, ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್, ಬೆಳ್ತಂಗಡಿ ವರ್ತಕರ ಸಂಘ, ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘ ನಿಯಮಿತ ಇವುಗಳ ಸಂಯುಕ್ತ ಆಶ್ರಯದಲ್ಲಿ ಟೀಮ್ ಈಶ್ವರ ಮಲ್ಪೆ ಇವರ ಸಹಯೋಗದೊಂದಿಗೆ ಉಚಿತ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣಾ ಕಾರ್ಯಕ್ರಮ ಬೆಳ್ತಂಗಡಿ ಲಯನ್ಸ್ ಭವನದಲ್ಲಿ ಭಾನುವಾರ ನಡೆಯಿತು.

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸೇವಾ ಕಾರ್ಯ ಮನುಷ್ಯನ ಮನುಷ್ಯತ್ವದ ಮುಖ್ಯ ಕಾರ್ಯ. ನಮ್ಮಿಂದ ಸಾಧ್ಯವಾಗುವುದನ್ನು ಸಮಾಜಕ್ಕೆ ಅರ್ಪಿಸುವ ಗುಣವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದರು.

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ಅಧ್ಯಕ್ಷ ಜಾನ್ ಅರ್ವಿನ್ ಡಿಸೋಜಾ ಮಾತನಾಡಿ, ಪ್ರತಿಯೊಬ್ಬರೂ ಕಷ್ಟದ ಜತೆ ಬದುಕನ್ನು ಕಂಡುಕೊಂಡವರು. ನಮ್ಮ ದುಡಿಮೆಯಿಂದ ಬರುವ ಲಾಭದ ಕಿಂಚಿತ್ತು ಪಾಲನ್ನಾದರೂ ಸಮಾಜಕ್ಕೆ ಅರ್ಪಿಸುವುದೇ ನಿಜವಾದ ಸೇವೆ ಎಂದರು.

ಟೀಮ್ ಈಶ್ವರ ಮಲ್ಪೆ ಸಂಚಾಲಕ ಲವ ಬಂಗೇರ ಮಾತನಾಡಿದರು. ಅಧ್ಯಕ್ಷತೆಯನ್ನು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕರಾಮ್ ಬಿ ವಹಿಸಿದ್ದರು.

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಮತ್ತು ವ್ಯವಸಾಯ ಸೇವಾ ಸಂಘದ ಅಧ್ಯಕ್ಷ ಲ್ಯಾನ್ಸಿ ಪಿರೇರಾ, ಬೆಳ್ತಂಗಡಿ ವರ್ತಕರ ಸಂಘದ ಉಪಾಧ್ಯಕ್ಷ ಶಶಿಧರ ಪೈ, ಶ್ರವಣ ತಜ್ಞ ಡಾ. ಪವನ್ ಮಂಗಳೂರು ಇದ್ದರು.ಬೆಳ್ತಂಗಡಿ ಪ್ರೆಸ್ ಕ್ಲಬ್ ಅಧ್ಯಕ್ಷ ಪುಷ್ಪರಾಜ ಶೆಟ್ಟಿ ಸ್ವಾಗತಿಸಿದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮನೋಹರ್ ಬಳಂಜ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.