ಲಯನ್ಸ್ ಕ್ಲಬ್ ಉಡುಪಿ ಚೇತನದ ಪದಪ್ರದಾನ, ಪ್ರತಿಭಾ ಪುರಸ್ಕಾರ

| Published : Aug 06 2024, 12:34 AM IST

ಸಾರಾಂಶ

ಪದಪ್ರದಾನ ಅಧಿಕಾರಿಯಾಗಿ ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ವಿ.ಜಿ. ಶೆಟ್ಟಿ ನೂತನ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಹಾಗೂ ಅವರ ತಂಡಕ್ಕೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಲಯನ್ಸ್ ಕ್ಲಬ್ ಉಡುಪಿ ಚೇತನದ ಪದಪ್ರದಾನ ಸಮಾರಂಭವು ಇತ್ತೀಚೆಗೆ ಉಡುಪಿಯ ಅಜ್ಜರಕಾಡಿನಲ್ಲಿರುವ ಟೌನ್ ಹಾಲ್ ಮಿನಿ ಹಾಲ್‌ನಲ್ಲಿ ಜರುಗಿತು. ಪದಪ್ರದಾನ ಅಧಿಕಾರಿಯಾಗಿ ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ವಿ.ಜಿ. ಶೆಟ್ಟಿ ನೂತನ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಹಾಗೂ ಅವರ ತಂಡಕ್ಕೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಮುಖ್ಯ ಅತಿಥಿಯಾಗಿ ಮಾಜಿ ಜಿಲ್ಲಾ ಗವರ್ನರ್ ಜಯಕರ ಶೆಟ್ಟಿ ಇಂದ್ರಾಳಿ, ಲಯನ್ಸ್ ಕ್ಲಬ್ ಉಡುಪಿ ಚೇತನದ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು.

ಇದೇ ಸಂದರ್ಭ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಲಿಯೋ ಸದಸ್ಯೆಯರಾದ ದೀಪಾಲಿ ಹಾಗೂ ಅನನ್ಯ ಅವರನ್ನು ಸನ್ಮಾನಿಸಲಾಯಿತು. ಆರ್ಥಿಕವಾಗಿ ಹಿಂದುಳಿದ ಒಬ್ಬ ಪ್ರತಿಭಾವಂತ ವಿದ್ಯಾರ್ಥಿಗೆ ಮುಂದಿನ ವಿದ್ಯಾರ್ಜನೆಗೆ ಆರ್ಥಿಕ ಸಹಾಯವನ್ನು ನೀಡಲಾಯಿತು. ಹಾಗೆಯೇ ಅನಾರೋಗ್ಯದಿಂದ ಬಳಲುತ್ತಿದ್ದ ಓರ್ವರಿಗೆ ಧನಸಹಾಯ ನೀಡಲಾಯಿತು ಮತ್ತು ವೈದ್ಯರ ದಿನಾಚರಣೆ ಪ್ರಯುಕ್ತ ಡಾ. ಪೂಜಿತಾ ಶೆಟ್ಟಿ ಅವರನ್ನು ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಇಬ್ಬರು ನೂತನ ಸದಸ್ಯರನ್ನು ಕ್ಲಬ್‌ಗೆ ಸೇರಿಸಿಗೊಳ್ಳಲಾಯಿತು. ಪ್ರಾಂತೀಯ ಅಧ್ಯಕ್ಷ ವಿ.ಎಸ್. ಉಮ್ಮರ್ ಹಾಗೂ ವಲಯಾಧ್ಯಕ್ಷ ಜಗದೀಶ್ ಆಚಾರ್ಯ ಪೆರಂಪಳ್ಳಿ ಶುಭಾಸಂಶನೆಗೈದರು. ನಿಕಟಪೂರ್ವ ಅಧ್ಯಕ್ಷ ಜಗದೀಶ್ ಆಚಾರ್ಯ ಪೆರಂಪಳ್ಳಿ ಸ್ವಾಗತಿಸಿದರು. ನೂತನ ಕಾರ್ಯದರ್ಶಿ ಅಭಿಜಿತ್ ಸುವರ್ಣ ವಂದಿಸಿದರು. ಮಾಜಿ ಅಧ್ಯಕ್ಷ ಪ್ರದೀಪ್ ಶೆಟ್ಟಿ ಕರ್ಜೆ ಹಾಗೂ ರತ್ನಾಕರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ನೂತನ ಕೋಶಾಧಿಕಾರಿ ಮನೋಜ್ ಶೆಟ್ಟಿ ಹಾಗೂ ಮಾಜಿ ಅಧ್ಯಕ್ಷ ಪ್ರವೀಣ್ ಕುಮಾರ್ ಈ ಕಾರ್ಯಕ್ರಮದ ಸಂಯೋಜಕರಾಗಿದ್ದರು.