ಸಾರಾಂಶ
ಸರ್ಕಾರಿ ಶಾಲೆಗಳ ಉಳಿವಿಗಾಗಿ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಅನುಕೂಲವಾಗಲು ಪಾಲಿಬೆಟ್ಟ ಲಯನ್ಸ್ ಕ್ಲಬ್ ವತಿಯಿಂದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಮಾಡಿದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಸರ್ಕಾರಿ ಶಾಲೆಗಳ ಉಳಿವಿಗಾಗಿ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಅನುಕೂಲವಾಗಲು ಪಾಲಿಬೆಟ್ಟ ಲಯನ್ಸ್ ಕ್ಲಬ್ ವತಿಯಿಂದ ಚೆನ್ನಂಗಿ ಸರ್ಕಾರಿ ಶಾಲೆಯ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಮಾಡಿದರುಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಪಿ.ಎಸ್ ಸುಬ್ರಮಣಿ ಮಾತನಾಡಿ ಲಯನ್ಸ್ ಕ್ಲಬ್ ಹಲವು ವರ್ಷಗಳಿಂದ ಶಿಕ್ಷಣ, ಆರೋಗ್ಯ, ಪರಿಸರ ಸೇರಿದಂತೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಗ್ರಾಮೀಣ ಭಾಗದ ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್‌ಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದರು.
ಸಮಾಜ ಸೇವಕ ಡಾ. ಎ ಸಿ ಗಣಪತಿ ಮಾತನಾಡಿ, ಕಾಡಂಚಿನ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೂರಕವಾದ ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳನ್ನು ಕಲಿಸುವ ಮೂಲಕ ಮಾದರಿ ಶಾಲೆಯನ್ನಾಗಿಸಿದ ಶಿಕ್ಷಕರುಗಳ ಪರಿಶ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಲಯನ್ಸ್ ಸಂಸ್ಥೆಯ ಕಾರ್ಯದರ್ಶಿ ಸದಾ ಕುಶಾಲಪ್ಪ ಮಾತನಾಡಿ, ಲಯನ್ಸ್ ಸಂಸ್ಥೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು 50 ವರ್ಷದ ಸಂಭ್ರಮಾಚರಣೆಯಲ್ಲಿ ಇದೆ.
ಶಾಲಾ ಮುಖ್ಯ ಶಿಕ್ಷಕಿ ಕೆ ಕೆ ಸುಷಾ ಮಾತನಾಡಿ, ಶಾಲೆಯ ವಿದ್ಯಾರ್ಥಿಗಳಿಗೆ ಅನುಕೂಲಕರವಾಗುವ ನಿಟ್ಟಿನಲ್ಲಿ ಬ್ಯಾಗ್ ಸೇರಿದಂತೆ ಪರಿಕರಗಳನ್ನು ವಿತರಣೆ ಮಾಡಿದ್ದು ಶಾಲೆಯ ಶೈಕ್ಷಣಿಕ ಬೆಳವಣಿಗೆಗೆ ಲಯನ್ಸ್ ಸಂಸ್ಥೆ ಪ್ರತಿ ವರ್ಷ ಸಹಕಾರ ನೀಡುತ್ತಿದ್ದಾರೆ ಎಂದು ಅಭಿನಂದಿಸಿದರು.ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಬೇಬಿ, ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಸಿದ್ದಪ್ಪ, ಲಯನ್ಸ್ ಸಂಸ್ಥೆಯ ಪ್ರಮುಖರಾದ ಡಾ. ಭವಿಷ್ಯಕುಮಾರ್, ಕೆ ಕೆ ಅಯ್ಯಪ್ಪ, ಬಿ ಪಿ ಗಣಪತಿ, ಠವಿ, ಅನಂತ್ ಕುಮಾರ್, ರಾಣಾ ಮುತ್ತಪ್ಪ, ಜಯ, ಕೃಷ್ಣ, ಇಂದಿರಾ, ಅನೀತ, ಬೀನ, ಮುತ್ತ, ವನಜ ಶಾಲಾ ಶಿಕ್ಷಕರುಗಳಾದ ಪ್ರತೀಮ, ಮಂಜುಳ ಸೇರಿದಂತೆ ಮತ್ತಿತರರಿದ್ದರು.