ಕನ್ನಡಪ್ರಭ ವಾರ್ತೆ ಉಡುಪಿ
ರಾಜ್ಯದ ಮದ್ಯ ಮಾರಾಟ ಸನ್ನದುದಾರರ ಬೇಡಿಕೆಗಳನ್ನು ಮುಂದಿಟ್ಟು ರಾಜ್ಯ ಫೆಡರೇಶನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಮತ್ತು ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಸಾಂಕೇತಿಕ ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಫೆಡರೇಶನ್ ಅಧ್ಯಕ್ಷ ಬಿ. ಗೋವಿಂದರಾಜ್ ಹೆಗ್ಡೆ, ಚಿಲ್ಲರೆ ಮದ್ಯ ಮಾರಾಟದ ಮೇಲೆ ಕನಿಷ್ಠ ಶೇ. 20 ಲಾಭಾಂಶ ನೀಡಬೇಕು, ಹೆಚ್ಚುವರಿ ಅಬಕಾರಿ ಶುಲ್ಕ ಕಡಿಮೆ ಮಾಡಬೇಕು, 2005ರಲ್ಲಿ ತಿದ್ದುಪಡಿಯಾಗಿರುವ ಅಬಕಾರಿ ಕಾಯ್ದೆಯನ್ನು ಪುನರ್ ವಿಮರ್ಶಿಸಿ ತಿದ್ದುಪಡಿ ಮಾಡಬೇಕು, ಮಿಲಿಟರಿ ಕ್ಯಾಂಟೀನ್ ಸ್ಟೋರ್‌ಗಳ, ಡ್ಯೂಟಿ ಫ್ರೀ ಹೆಸರಿನಲ್ಲಿ ಬರುವ ನಕಲಿ ಮದ್ಯ, ಗೋವಾದಿಂದ ಬರುವ ಮದ್ಯ ಮತ್ತು ನಕಲಿ ಮದ್ಯ ತಯಾರಕರ ಕಳ್ಳಭಟ್ಟಿ ಕೇಂದ್ರಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮದ್ಯ ಮಾರಾಟಗಾರರು ಸರ್ಕಾರವನ್ನು ಆಗ್ರಹಿಸಿದರು. ಈ ಎಲ್ಲಾ ಬೇಡಿಕೆಗಳನ್ನು 2024ರ ನವೆಂಬರ್ ತಿಂಗಳಿನಲ್ಲಿ ಈಡೇರಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದರು. ಆದರೆ 5 ತಿಂಗಳು ಕಳೆದರೂ ಇನ್ನು ಕೂಡ ಯಾವುದೇ ಬೇಡಿಕೆ ಈಡೇರಿಸಿಲ್ಲ. ಬಜೆಟ್‌ನಲ್ಲಿಯೂ ಈ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಬೇಡಿಕೆಗಳು ಈಡೇರದಿದ್ದರೆ ಮುಂದೆ ಬೃಹತ್ ಹೋರಾಟ ನಡೆಸಲಾಗುವುದು ಎಂದವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಬೇಡಿಕೆಗಳ ಮನವಿಯನ್ನು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಯಿತು.ಸಂಘದ ಪ್ರಧಾನ ಕಾರ್ಯದರ್ಶಿ ಜನಾರ್ದನ್ ಎಂ.ಪೂಜಾರಿ, ಉಡುಪಿ ತಾಲೂಕು ಗೌರವಾಧ್ಯಕ್ಷ ಬಿ.ಎನ್.ಶಂಕರ ಪೂಜಾರಿ, ಕಾರ್ಕಳ ತಾಲೂಕು ಕೋಶಾಧಿಕಾರಿ ನವೀನ್‌ಚಂದ್ರ ಶೆಟ್ಟಿ, ಉಡುಪಿ ತಾಲೂಕು ಸಂಘಟನ ಕಾರ್ಯದರ್ಶಿ ಮಹೇಶ್ ಅಂಚನ್ ಕಟಪಾಡಿ, ಕುಂದಾಪುರ ತಾಲೂಕು ಖಜಾಂಚಿ ವಾದಿರಾಜ ಶೆಟ್ಟಿ, ಉಡುಪಿ ತಾಲೂಕು ಉಪಾಧ್ಯಕ್ಷ ಸಂತೋಷ್ ಶೆಟ್ಟಿ, ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ, ಕಾರ್ಕಳ ತಾಲೂಕು ಅಧ್ಯಕ್ಷ ಶೋಧನ್ ಕುಮಾರ್ ಶೆಟ್ಟಿ, ಕುಂದಾಪುರ ತಾಲೂಕು ಅಧ್ಯಕ್ಷ ರೋಹಿತ್ ಕುಮಾರ್ ಶೆಟ್ಟಿ ಮತ್ತಿತರರು ಇದ್ದರು.ನಕಲಿ ಮದ್ಯ ಹಾವಳಿ ನಿಲ್ಲಿಸಲು ಸರ್ಕಾರಕ್ಕೆ ಸನ್ನದುದಾರರ ಒತ್ತಾಯ
ರಾಜ್ಯ ಫೆಡರೇಶನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಮತ್ತು ಜಿಲ್ಲಾ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಸಾಂಕೇತಿಕ ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.