ಸಾರಾಂಶ
ಸಾರ್ವಜನಿಕರು ಕಚೇರಿಗೆ ಬಂದ ಸಂದರ್ಭದಲ್ಲಿ ಅಧಿಕಾರಿಗಳು ಸ್ಪಂದಿಸಿ ಸಮಾಧಾನದಿಂದ ಆಲಿಸಿ ಅವರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ೨೪೦ ಜನರಿಗೆ ಟೋಕನ್ ನೀಡಲಾಗಿದೆ. ಅದರಲ್ಲಿ ಇಂದು ೧೮೦ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಉಳಿದ ಅರ್ಜಿಗಳನ್ನು ಶುಕ್ರವಾರ ಬೆಳಗ್ಗೆ ೧೦ ಗಂಟೆಯಿಂದ ಇದೇ ಸ್ಥಳದಲ್ಲಿ ಲೋಕಾಯುಕ್ತದ ಇತರೆ ನ್ಯಾಯಾಧೀಶರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ ಎಂದರು.
ಹಾಸನ: ಸಾರ್ವಜನಿಕರು ಕಚೇರಿಗೆ ಬಂದ ಸಂದರ್ಭದಲ್ಲಿ ಅಧಿಕಾರಿಗಳು ಸ್ಪಂದಿಸಿ ಸಮಾಧಾನದಿಂದ ಆಲಿಸಿ ಅವರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗುರುವಾರ ಸಾರ್ವಜನಿಕರ ಕುಂದುಕೊರತೆ ದೂರುಗಳ ಸ್ವೀಕಾರ, ವಿಚಾರಣೆ ಹಾಗೂ ವಿಲೇವಾರಿ ಕಾರ್ಯಕ್ರಮದಲ್ಲಿ ಸಮಾಧಾನ ಚಿತ್ತದಿಂದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಿದ ಅವರು, ಇಂದು ೨೪೦ ಜನರಿಗೆ ಟೋಕನ್ ನೀಡಲಾಗಿದೆ. ಅದರಲ್ಲಿ ಇಂದು ೧೮೦ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಉಳಿದ ಅರ್ಜಿಗಳನ್ನು ಶುಕ್ರವಾರ ಬೆಳಗ್ಗೆ ೧೦ ಗಂಟೆಯಿಂದ ಇದೇ ಸ್ಥಳದಲ್ಲಿ ಲೋಕಾಯುಕ್ತದ ಇತರೆ ನ್ಯಾಯಾಧೀಶರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಬಂದು ತಮ್ಮ ಅಹವಾಲುಗಳನ್ನು ಸಲ್ಲಿಸುವಂತೆ ತಿಳಿಸಿದರು.