ಪುರಾಣ ಪ್ರವಚನ ಆಲಿಸುವುದರಿಂದ ಮನಸ್ಸಿಗೆ ನೆಮ್ಮದಿ

| Published : Aug 04 2025, 12:30 AM IST

ಪುರಾಣ ಪ್ರವಚನ ಆಲಿಸುವುದರಿಂದ ಮನಸ್ಸಿಗೆ ನೆಮ್ಮದಿ
Share this Article
  • FB
  • TW
  • Linkdin
  • Email

ಸಾರಾಂಶ

ಶರಣರ ಕುರಿತು ಪುರಾಣ ಕಥೆ ಕೇಳುವ ಮೂಲಕ ಧರ್ಮ, ಸಂಸ್ಕೃತಿ ಹಾಗೂ ಶಿವಶರಣರ ತತ್ವಾದರ್ಶ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು

ಯಲಬುರ್ಗಾ: ಪುರಾಣ, ಪ್ರವಚನ ಆಲಿಸುವುದರಿಂದ ಮನಸ್ಸಿಗೆ ನೆಮ್ಮದಿ ಲಭಿಸುತ್ತದೆ ಎಂದು ಶ್ರೀಧರ ಮುರಡಿ ಹಿರೇಮಠದ ಶ್ರೀಬಸವಲಿಂಗೇಶ್ವರ ಸ್ವಾಮೀಜಿ ಹೇಳಿದರು.

ಪಟ್ಟಣದ ಶ್ರೀಧರ ಮುರಡಿ ಹಿರೇಮಠದಲ್ಲಿ ಶ್ರಾವಣಮಾಸ ನಿಮಿತ್ತ ಶುಕ್ರವಾರದಿಂದ ಆರಂಭಗೊಂಡ ಕಲಬುರ್ಗಿ ಶರಣಬಸವೇಶ್ವರರ ಪುರಾಣ ಪ್ರವಚನಕ್ಕೆ ಚಾಲನೆ ನೀಡಿ ಮಾತನಾಡಿದರು.

ಶರಣರ ಕುರಿತು ಪುರಾಣ ಕಥೆ ಕೇಳುವ ಮೂಲಕ ಧರ್ಮ, ಸಂಸ್ಕೃತಿ ಹಾಗೂ ಶಿವಶರಣರ ತತ್ವಾದರ್ಶ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು. ಪುರಾಣಗಳಿಂದ ಸಮಾಜ ಸುಧಾರಣೆ ಸಾಧ್ಯ. ತಾಯಂದಿರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಜತೆಗೆ ಸಂಸ್ಕಾರ, ಸಂಸ್ಕೃತಿ ಕಲಿಸಬೇಕು. ಸಮಾಜದಲ್ಲಿ ಹಿರಿಯರಿಗೆ ಗೌರವ ಕೊಡುವುದನ್ನು ಕಲಿಸಬೇಕು. ಪ್ರತಿಯೊಬ್ಬರೂ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಮೂಲಕ ಪರೋಪಕಾರ ಗುಣ ಬೆಳೆಸಿಕೊಳ್ಳಬೇಕು ಎಂದರು.

ಹಿರಿಯ ಮುಖಂಡ ವೀರಣ್ಣ ಹುಬ್ಬಳ್ಳಿ ಮಾತನಾಡಿದರು.

ಪುರಾಣ ಪ್ರವಚನಕಾರ ಪ್ರಕಾಶಯ್ಯ ಶಾಸ್ತ್ರಿ ಹಿರೇಮಠ ಪುರಾಣ ನಡೆಸಿಕೊಟ್ಟರು. ಶರಣಕುಮಾರ ಬಂಡಿ, ಲಿಂಗರಾಜ ಗವಾಯಿಗಳು ಸಂಗೀತ ಸಾಥ ನೀಡಿದರು. ಈ ಸಂದರ್ಭದಲ್ಲಿ ಶ್ರೀಮಠದ ಭಕ್ತರು ಭಾಗವಹಿಸಿದ್ದರು.