ದುರ್ಗಾ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ
KannadaprabhaNewsNetwork | Published : Oct 21 2023, 12:30 AM IST
ದುರ್ಗಾ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ
ಸಾರಾಂಶ
ದುರ್ಗಾ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ
ಬಾಳೆಹೊನ್ನೂರು: ಮಾರ್ಕಾಂಡೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ 14ನೇ ವರ್ಷದ ದುರ್ಗಾದೇವಿ ನವರಾತ್ರಿ ಮಹೋತ್ಸವದಲ್ಲಿ ಶುಕ್ರವಾರ ದುರ್ಗಾ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲಾಯಿತು. ನವರಾತ್ರಿಯ 6ನೇ ದಿನ ಆಶ್ವಯುಜ ಶುದ್ಧ ಷಷ್ಠಿಯಂದು ದುರ್ಗೆಯು ವಿಷ್ಣುರೂಪಿಣಿಯಾಗಿ, ಇಂದ್ರಾಣಿಯಾಗಿ ದೇವತೆಗಳಿಗೆ ದರ್ಶನ ನೀಡಿದ ದಿನವೆಂದು ಪುರಾಣದಲ್ಲಿ ಉಲ್ಲೇಖವಿದ್ದು, ಈ ದಿನ ಪುಟ್ಟ ಮಕ್ಕಳಿಗೆ ಪ್ರಥಮವಾಗಿ ಅಕ್ಷರಾಭ್ಯಾಸ ಮಾಡಿಸಿದಲ್ಲಿ ಆ ಮಕ್ಕಳು ಸಿದ್ಧ, ಬುದ್ಧಿವಂತರಾಗಿ, ವಿದ್ಯಾಸಂಪನ್ನರಾಗಿ ಉತ್ತಮ ವ್ಯಕ್ತಿಗಳಾಗುತ್ತಾರೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ವಿಶೇಷ ಅಕ್ಷರಾಭ್ಯಾಸ ಕಾರ್ಯ ನಡೆಸಿದ್ದು, 6 ಪುಟ್ಟ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲಾಯಿತು. ಅಕ್ಷರಾಭ್ಯಾಸದ ಪ್ರಯುಕ್ತ ದೇವಿ ಶಾರದಾ ಮಾತೆಯ ರೂಪದಲ್ಲಿ ವಿಶೇಷ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಮೃಗವಾಹಿನಿ ಇಂದ್ರಾಣಿ ರೂಪಿಣಿ ಪೂಜಾ ಪಾರಾಯಣ ನಡೆಸಲಾಯಿತು. ಅರ್ಚಕರಾದ ಸುಬ್ರಹ್ಮಣ್ಯಭಟ್ ಮತ್ತು ಸಂಗಡಿಗರು ಅಕ್ಷರಾಭ್ಯಾಸ ಧಾರ್ಮಿಕ ವಿಧಿಯ ನೇತೃತ್ವ ವಹಿಸಿದ್ದರು. ಸಮಿತಿ ಕಾರ್ಯಾಧ್ಯಕ್ಷ ವೈ.ಮೋಹನ್‌ಕುಮಾರ್, ಖಜಾಂಚಿ ಭಾಸ್ಕರ್ ವೆನಿಲ್ಲಾ, ಕಾರ್ಯದರ್ಶಿ ಆರ್.ಡಿ.ಮಹೇಂದ್ರ, ಪ್ರಭಾಕರ್ ಪ್ರಣಸ್ವಿ, ಮತ್ತಿತರರು ಇದ್ದರು. ೨೦ಬಿಹೆಚ್‌ಆರ್ ೨: ಬಾಳೆಹೊನ್ನೂರಿನ ದುರ್ಗಾದೇವಿ ನವರಾತ್ರಿ ಮಹೋತ್ಸವದಲ್ಲಿ ದುರ್ಗಾ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲಾಯಿತು.