ಸಾರಾಂಶ
ಪ್ರಜಾಪ್ರಭುತ್ವ ಬಲಪಡಿಸಲು ಸಾಕ್ಷರತೆ ಒಂದು ಪ್ರಮುಖ ಸಾಧನವಾಗಿದೆ ಎಂದು ಕೂಡಿಗೆಯ ಪ್ರಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಎಂ.ಚಂದ್ರಕಾಂತ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಡಿಕೇರಿ ಜೂನಿಯರ್ ಕಾಲೇಜಿನ ಆವರಣದಲ್ಲಿ ಗುರುವಾರ ನಡೆದ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕನ್ನಡಪ್ರಭ ವಾರ್ತೆ ಮಡಿಕೇರಿ
ಪ್ರಜಾಪ್ರಭುತ್ವ ಬಲಪಡಿಸಲು ಸಾಕ್ಷರತೆ ಒಂದು ಪ್ರಮುಖ ಸಾಧನವಾಗಿದೆ ಎಂದು ಕೂಡಿಗೆಯ ಪ್ರಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಎಂ.ಚಂದ್ರಕಾಂತ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ನಗರದ ಜೂನಿಯರ್ ಕಾಲೇಜಿನ ಆವರಣದಲ್ಲಿ ಗುರುವಾರ ನಡೆದ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಅಂತಾರಾಷ್ಟ್ರೀಯ ಸಾಕ್ಷರತೆ ದಿನಾಚರಣೆ ಮತ್ತು ಸಪ್ತಾಹವನ್ನು ಜಿಲ್ಲಾ ವಯಸ್ಕರ ಶಿಕ್ಷಣ ಸಹಯೋಗದಲ್ಲಿ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಗುರುವಾರ ಆಚರಿಸಲಾಯಿತು.ಸಾಕ್ಷರತೆಯ ಮಹತ್ವ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಇರಬೇಕು. ಆದ್ದರಿಂದ ಪ್ರತಿ ವರ್ಷ ವಿಶ್ವ ಸಾಕ್ಷರತಾ ದಿನ ಆಚರಿಸಲಾಗುತ್ತದೆ ಎಂದರು.
ಆಲೋಚನೆಗಳು ಮತ್ತು ಭಾವನೆಗಳನ್ನು ಓದುವ ಮತ್ತು ಬರವಣಿಗೆ ಮೂಲಕ ತಿಳಿಸಲು ಸಾಕ್ಷರತೆ ಅತ್ಯವಶ್ಯಕವಾಗಿದೆ. ಸಾಮಾಜಿಕ ಮತ್ತು ಮಾನವೀಕ ಅಭಿವೃದ್ಧಿಗೆ ಸಾಕ್ಷರತೆ ಒಂದು ಶಕ್ತಿಯಾಗಿದೆ ಎಂದು ಚಂದ್ರಕಾಂತ್ ಅಭಿಪ್ರಾಯಪಟ್ಟರು.ಪ್ರತಿಯೊಬ್ಬರೂ ಸಾಮಾಜಿಕ, ಆರ್ಥಿಕ ಹಾಗೂ ವೈಯಕ್ತಿಕವಾಗಿ ಅರಿವು ಮೂಡಿಸುವುದು ಪ್ರಮುಖ ಉದ್ದೇಶವಾಗಿದೆ ಎಂದು ಚಂದ್ರಕಾಂತ್ ಹೇಳಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಡಿವೈಎಸ್‌ಪಿ ಮಹೇಶ್ ಕುಮಾರ್, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಎಚ್.ಟಿ.ಶಶಿಕಲಾ, ಕೃಷ್ಣಪ್ಪ ಮತ್ತಿತರರು ಇದ್ದರು. ಸಾಕ್ಷರತಾ ಗೀತೆ ಹಾಗೂ ಸಾಕ್ಷರತಾ ನಾಟಕ ಪ್ರದರ್ಶಿಸಲಾಯಿತು. ನವ ಸಾಕ್ಷರರನ್ನು ಸನ್ಮಾನಿಸಲಾಯಿತು.