ಸಾರಾಂಶ
20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ ಸಮಾರಂಭ
ಕನ್ನಡಪ್ರಭ ವಾರ್ತೆ, ತರೀಕೆರೆ (ಎಂ.ಕೆ.ಇಂದಿರಾ ವೇದಿಕೆ)ಸಾಹಿತ್ಯ ಸಮ್ಮೇಳನಗಳು ನಮ್ಮ ಮನಸ್ಸನ್ನು ಅರಳಿಸುತ್ತದೆ ಎಂದು ಹೊಸನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ, ಸಾಹಿತಿ ಡಾ.ಶ್ರೀಪತಿ ಹಳಗುಂದ ಅಭಿಪ್ರಾಯ ಪಟ್ಟರು.
ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಪಟ್ಟಣದ ಬಯಲು ರಂಗ ಮಂದಿರದಲ್ಲಿ ನಡೆದ 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ ಸಮಾರಂಭದಲ್ಲಿ ಭಾಷಣ ಮಾಡಿ, ಹೃದಯದಲ್ಲಿ ಕನ್ನಡಕ್ಕಾಗಿ ಜಾಗ ಕೊಟ್ಟು ಕನ್ನಡವನ್ನು ಬಳಸಿ, ಬೆಳೆಸಬೇಕು. ಆಗ ಭಾಷೆ ಯಾವತ್ತೂ ಗಟ್ಟಿಯಾಗಿರುತ್ತದೆ ಎಂದರು.ಕನ್ನಡಕ್ಕಿರುವ ಯೋಗ ಮತ್ತು ಯೋಗ್ಯತೆಯನ್ನು ಮಕ್ಕಳಿಗೆ ತಿಳಿಸಿ, ಸಾಹಿತ್ಯಕ್ಕೆ ಇರುವ ತಾಕತ್ತು ಹೇಳಿಕೊಡಬೇಕು. ಸಾಹಿತ್ಯಕ್ಕೆ ಇರುವ ಶಕ್ತಿಯನ್ನು ಜನರಿಗೂ ಮನವರಿಕೆ ಮಾಡಬೇಕು. ಸಾಹಿತ್ಯ ಸಮ್ಮೇಳನಗಳು ಆತ್ಮವಿಶ್ವಾಸ ವನ್ನು ಬೆಳೆಸುತ್ತದೆ ಎಂದು ಹೇಳಿದರು.
20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ.ಎಚ್.ಎಂ.ಮರುಳಸಿದ್ದಯ್ಯ ಪಟೇಲ್ ಮಾತನಾಡಿ ನೆನಪುಗಳು ಗಟ್ಟಿಯಾಗಿ ಉಳಿಯುತ್ತದೆ. ಸಮ್ಮೇಳನ ಯಶಸ್ಸಿಗೆ ಅನೇಕರು ಕಾರ್ಯನಿರ್ವಹಿಸಿದ್ದಾರೆ. ಸಮ್ಮೇಳನ ಅಚ್ಚುಕಟ್ಟಾಗಿ ನಡೆದಿದೆ, ಪ್ರತಿಯೊಬ್ಬರ ಶ್ರಮ ಇದರ ಹಿಂದಿದೆ. ಶಾಸಕ ಜಿ.ಎಚ್.ಶ್ರೀನಿವಾಸ್, ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್, ತಾಲೂಕು ಮತ್ತು ಸದಸ್ಯರಿಗೆ ನಾನು ಅಭಿನಂದಿಸುತ್ತೇನೆ ಎಂದು ಹೇಳಿದರುಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ ಸಮ್ಮೇಳನದಿಂದ ಕನ್ನಡ ಸಾಹಿತ್ಯ ಅಭಿಮಾನಿಗಳಿಗೆ ಸಂತೋಷವಾಗಿದೆ. ಸಮ್ಮೇಳನ ಕನ್ನಡ ಬಾಷೆ, ಸಂಸ್ಕೃತಿ ಸಾಹಿತ್ಯ ಮತ್ತು ಕಲೆಗೆ ಹೆಚ್ಚು ಒತ್ತು ನೀಡಿದೆ. ಸಮ್ಮೇಳನ ದೊಡ್ಡ ಸಮಾವೇಶವಾಗಿದೆ. ಹಬ್ಬದ ವಾತಾವರಣ ಉಂಟು ಮಾಡಿದೆ, ಕನ್ನಡ ಭಾಷೆ ಬೆಳವಣಿಗೆಗೆ ಸಮ್ಮೇಳನಗಳು ಪೂರಕವಾಗಿ ಕಾರ್ಯ ನಿರ್ವಹಿಸುತ್ತಿದೆ. ಸಮ್ಮೇಳನ ಯುವಕರಿಗೆ ಹೆಚ್ಚು ಅವಕಾಶ ನೀಡಿದೆ, ಪುಸ್ತಕ ಮಳಿಗೆ ಹಾಗೂ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
, ಸಮ್ಮೇಳನಾಧ್ಯಕ್ಷ ಡಾ.ಹೆಚ್.ಎಂ.ಮರುಳಸಿದ್ದಯ್ಯ ಪಟೇಲ್ ಅವರನ್ನು ಸನ್ಮಾನಿಸಲಾಯಿತು. ಸಾಹಿತಿ ಡಾ.ಎಚ್.ಎಸ್.ಸತ್ಯನಾರಾಯಣ, ಕೊಪ್ಪ ಸಾಹಿತಿ ಎಸ್.ಎನ್.ಚಂದ್ರಕಲಾ ಅವರಿಗೆ ಸಾಹಿತ್ಯ ಸಿರಿ ಪ್ರಶಸ್ತಿ ಮತ್ತು ಉಪವಿಭಾಗಾಧಿಕಾರಿಗಳಿಗೆ ಕನ್ನಡಶ್ರೀ ಪ್ರಶಸ್ತಿ ವಿತರಿಸಿ ಗೌರವಿಸಲಾಯಿತು.ಚಿತ್ರದುರ್ಗ ಸಂಸದ ಬಿ.ಎನ್.ಚಂದ್ರಪ್ಪ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್, ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್, ಚಿಕ್ಕಮಗಳೂರು ನಗರಸಭಾ ಅಧ್ಯಕ್ಷೆ ಸುಜಾತಾ ಶಿವಕುಮಾರ್, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಎಸ್.ಎಸ್.ವೆಂಕಟೇಶ್, ಜಿಪಂ ಮಾಜಿ ಅಧ್ಯಕ್ಷ ಎಚ್.ವಿಶ್ವನಾಥ್, ಕನ್ನಡಶ್ರೀ ಬಿ.ಎಸ್.ಭಗವಾನ್, ಜಿಲ್ಲಾ ಕಸಾಪ ಪ್ರಧಾನ ಸಂಚಾಲಕ ಇಮ್ರಾನ್ ಅಹಮದ್ ಬೇಗ್, ಸೈಯದ್ ಮುಹೀಬುಲ್ಲ, ಪುರಸಭಾ ಮಾಜಿ ಅಧ್ಯಕ್ಷ ಎಂ.ನರೇಂದ್ರ, ಕಸಾಪ ಮಹಿಳಾ ಘಟಕ ಅಧ್ಯಕ್ಷೆ ಸುನಿತಾ ಕಿರಣ್ ಭಾಗವಹಿಸಿದ್ದರು.9ಕೆಟಿಆರ್.ಕೆ.1ಃ ತರೀಕೆರೆಯಲ್ಲಿ ನಡೆದ 20ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷ ಡಾ. ಎಚ್.ಎಂ.ಮರುಳಸಿದ್ದಯ್ಯ ಪಟೇಲ್ ಅವರನ್ನು ಸನ್ಮಾನಿಸಲಾಯಿತು. ಶಾಸಕ ಜಿ.ಎಚ್. ಶ್ರೀನಿವಾಸ್, ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್, ತಾಲೂಕು ಕಸಾಪ ಅಧ್ಯಕ್ಷ ರವಿ ದಳವಾಯಿ ಮತ್ತಿತರರು ಇದ್ದರು.