ಸಾಹಿತ್ಯ ಬದುಕಿಗೆ ಶ್ರೀಮಂತಿಕೆ ನೀಡುತ್ತದೆ: ಎ.ಪಿ. ಮಾಲತಿ

| Published : Feb 16 2025, 01:47 AM IST

ಸಾಹಿತ್ಯ ಬದುಕಿಗೆ ಶ್ರೀಮಂತಿಕೆ ನೀಡುತ್ತದೆ: ಎ.ಪಿ. ಮಾಲತಿ
Share this Article
  • FB
  • TW
  • Linkdin
  • Email

ಸಾರಾಂಶ

ಸಂಪ್ಯದ ಅಕ್ಷಯ ಕಾಲೇಜು ಸಭಾಂಗಣದಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪುತ್ತೂರು, ಗ್ರಾಮ ಪಂಚಾಯಿತಿ ಆರ್ಯಾಪು, ಅದ್ವಯ ಕನ್ನಡ ಸಾಹಿತ್ಯ ಸಂಘ ಮತ್ತು ಐಕ್ಯೂಎಸಿ ಅಕ್ಷಯ ಕಾಲೇಜು ಸಂಪ್ಯ ಆಶ್ರಯದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ಸಂಯೋಜನೆಯಲ್ಲಿ ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುಧಾಬಿ ಅವರ ಪೋಷಕತ್ವದಲ್ಲಿ ‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ’ ಅಭಿಯಾನದ ಅಂಗವಾಗಿ ನಡೆದ ಗ್ರಾಮ ಸಾಹಿತ್ಯ ಸಂಭ್ರಮ-೨೦೨೫ ಸರಣಿ ಸಾಹಿತ್ಯ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.

‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ’ ಗ್ರಾಮ ಸಾಹಿತ್ಯ ಸಂಭ್ರಮ

ಕನ್ನಡಪ್ರಭ ವಾರ್ತೆ ಪುತ್ತೂರು

ಮಕ್ಕಳನ್ನು ಸಾಹಿತ್ಯದ ಕಾರ್ಯಕ್ರಮಗಳಲ್ಲಿ ಬೆರೆಸಿಕೊಳ್ಳುವುದು ಉತ್ತಮ ವಿಚಾರ. ಈಗ ಶಾಲಾ ಕಾಲೇಜುಗಳಲ್ಲಿ ಡ್ಯಾನ್ಸ್ ಹಾಡುಗಳಿಗೆ ಉತ್ತೇಜನ ನೀಡ್ತಾರೆ, ಸಾಹಿತ್ಯಕ್ಕೆ ಉತ್ತೇಜನ ನೀಡುತ್ತಿಲ್ಲ. ಸಾಹಿತ್ಯ ನಮ್ಮನ್ನು ಬೆಳೆಸುತ್ತದೆ ಹಾಗೂ ನಮ್ಮ ಬದುಕಿಗೆ ಶ್ರೀಮಂತಿಗೆ ನೀಡುತ್ತದೆ. ಶಾಲಾ ಕಾಲೇಜು ಮಕ್ಕಳನ್ನು ಎದುರಿಟ್ಟುಕೊಂಡು ಸಾಹಿತ್ಯದ ಕಾರ್ಯಕ್ರಮ ಮಾಡಿದಾಗ ಅದು ಹೆಚ್ಚು ಅರ್ಥಪೂರ್ಣವಾಗುತ್ತದೆ ಎಂದು ಹಿರಿಯ ಸಾಹಿತಿ ಎ.ಪಿ. ಮಾಲತಿ ತಿಳಿಸಿದರು. ಅವರು ಶನಿವಾರ ಸಂಪ್ಯದ ಅಕ್ಷಯ ಕಾಲೇಜು ಸಭಾಂಗಣದಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಪುತ್ತೂರು, ಗ್ರಾಮ ಪಂಚಾಯಿತಿ ಆರ್ಯಾಪು, ಅದ್ವಯ ಕನ್ನಡ ಸಾಹಿತ್ಯ ಸಂಘ ಮತ್ತು ಐಕ್ಯೂಎಸಿ ಅಕ್ಷಯ ಕಾಲೇಜು ಸಂಪ್ಯ ಆಶ್ರಯದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ಸಂಯೋಜನೆಯಲ್ಲಿ ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುಧಾಬಿ ಅವರ ಪೋಷಕತ್ವದಲ್ಲಿ ‘ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ’ ಅಭಿಯಾನದ ಅಂಗವಾಗಿ ನಡೆದ ಗ್ರಾಮ ಸಾಹಿತ್ಯ ಸಂಭ್ರಮ-೨೦೨೫ ಸರಣಿ ಸಾಹಿತ್ಯ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ ಮಾತನಾಡಿದರು.ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಸಾಪ ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಮಾತನಾಡಿ, ವರ್ಷಕ್ಕೊಮ್ಮ ಮಾಡುವ ಸಾಹಿತ್ಯ ಸಮ್ಮೇಳನಕ್ಕಿಂತ ಗ್ರಾಮ ಸಾಹಿತ್ಯ ಸಂಭ್ರಮ ಹೆಚ್ಚು ಪರಿಣಾಮಕಾರಿಯಾಗಿದೆ. ಗ್ರಾಮ ಸಾಹಿತ್ಯ ಸಂಭ್ರಮದಲ್ಲಿ ಸುಮಾರು ೩ ಸಾವಿರದಷ್ಟು ವಿದ್ಯಾರ್ಥಿಗಳಿಗೆ ವೇದಿಕೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಆರ್ಯಾಪು ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಹರ್ಷಿತಾ ಸಾಹಿತ್ಯ ಸಂಭ್ರಮದ ಸರ್ವಾಧ್ಯಕ್ಷತೆ ವಹಿಸಿದ್ದರು. ಆರ್ಯಾಪು ಗ್ರಾಪಂ ಅಧ್ಯಕ್ಷೆ ಗೀತಾ ಎಚ್. ಕಾರ್ಯಕ್ರಮ ಉದ್ಘಾಟಿಸಿದರು. ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿ, ಆರ್ಯಾಪು ಗ್ರಾಪಂ ಅಭಿವೃದ್ಧಿ ಅಧಿಕಾರಿ ನಾಗೇಶ್, ಹಿರಿಯ ಕೃಷಿಕ ಬೂಡಿಯಾರ್ ರಾಧಾಕೃಷ್ಣ ರೈ, ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಜಯರಾಜ್ ಭಂಡಾರಿ ಶುಭ ಹಾರೈಸಿದರು. ಅಕ್ಷಯ ಕಾಲೇಜ್ ಸಂಚಾಲಕ ಜಯಂತ ನಡುಬೈಲು ಸನ್ಮಾನಿತರಿಗೆ ಅಭಿನಂದನಾ ನುಡಿಗಳನ್ನಾಡಿದರು. ಅಧ್ವಯ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಹರೀಶ್ಚಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಾಧಕರಿಗೆ ಸನ್ಮಾನ: ಕಾರ್ಯಕ್ರಮದಲ್ಲಿ ಮೌನೇಶ್ ವಿಶ್ವಕರ್ಮ (ಸಾಹಿತ್ಯ ಮತ್ತು ರಂಗಭೂಮಿ), ಎ.ಪಿ. ಉಮಾಶಂಕರಿ ಮರಿಕೆ (ಸಾಹಿತ್ಯ), ಡಾ. ನವೀನ್ ಕುಮಾರ್ ಮರಿಕೆ (ದೈವಾರಾಧನೆ), ಸಂಶುದ್ದೀನ್ ಸಂಪ್ಯ(ಪತ್ರಿಕೋದ್ಯಮ), ಕೇಶವ ಮಚ್ಚಿಮಲೆ (ರಂಗಭೂಮಿ), ಸುಬ್ಬು ಸಂಟ್ಯಾರು (ಯಕ್ಷಗಾನ), ಪುರಂದರ ಕಲ್ಲರ್ಪೆ (ಶಿಲ್ಪ ಕಲೆ), ಜ್ಞಾನ ರೈ (ಬಹುಮುಖ ಪ್ರತಿಭೆ) ಮತ್ತು ಅನಂದಾಶ್ರಮ ಸೇವಾ ಟ್ರಸ್ಟ್‌ (ಸಮಾಜಸೇವೆ) ಕ್ಷೇತ್ರದ ಸಾಧನೆಗಾಗಿ ಸನ್ಮಾನಿಸಲಾಯಿತು. ಅಭಿನಂದಿತರ ಪರವಾಗಿ ಪತ್ರಕರ್ತ ಸಂಶುದ್ಧೀನ್ ಸಂಪ್ಯ ಮಾತನಾಡಿದರು.ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕ ನಾರಾಯಣ ಕುಂಬ್ರ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಕ್ಷಯ ಕಾಲೇಜ್‌ನ ಪ್ರಾಂಶುಪಾಲ ಸಂಪತ್ ಕೆ ಪಕ್ಕಳ ಸ್ವಾಗತಿಸಿದರು. ಚಿಗುರೆಲೆ ಸಾಹಿತ್ಯ ಬಳಗದ ಅಪೂರ್ವ ಕಾರಂತ್ ವಂದಿಸಿದರು. ಚಿಗುರೆಲೆ ಸಾಹಿತ್ಯ ಬಳಗದ ಆಶಾ ಮಯ್ಯ ಮತ್ತು ಗಿರೀಶ್ ನಿರೂಪಿಸಿದರು.

ಸಮಾರೋಪ:ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್‌ ಹೋಬಳಿ ಘಟಕ ಅಧ್ಯಕ್ಷ ಕಡಮಜಲು ಸುಭಾಸ್ ರೈ ವಹಿಸಿದ್ದರು. ಅಕ್ಷಯ ಕಾಲೇಜಿನ ವಿದ್ಯಾರ್ಥಿನಿ ವಿಂಧುಶ್ರೀ ಸಮಾರೋಪ ಭಾಷಣ ಮಾಡಿದರು. ವಿವೇಕಾನಂದ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ. ಎಚ್.ಜಿ. ಶ್ರೀಧರ, ಅಕ್ಷಯ ಕಾಲೇಜ್‌ನ ಅದ್ವಯ ಕನ್ನಡ ಸಾಹಿತ್ಯ ಸಂಘ ಮತ್ತು ಐಕ್ಯೂಎಸಿ ಅಧ್ಯಕ್ಷ ಹರೀಶ್ಚಂದ್ರ, ಅಕ್ಷಯ ಕಾಲೇಜ್‌ನ ಪ್ರಾಚಾರ್ಯ ಸಂಪತ್ ಕೆ. ಪಕ್ಕಳ ಸಂದರ್ಭೋಚಿತವಾಗಿ ಮಾತನಾಡಿದರು. ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.