ಸಾರಾಂಶ
ಕಟೀಲು ಕೇತ್ರದ ಸರಸ್ವತಿ ಸಭಾಭವನದಲ್ಲಿ ಜರುಗಿದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನ ನಡೆಯಿತು.
ಕನ್ನಡಪ್ರಭ ವಾರ್ತೆ ಮೂಲ್ಕಿ
ಸಾಹಿತ್ಯ ಯಾವುದೇ ಪ್ರಕಾರದಲ್ಲಿದ್ದರೂ ಓದುಗರು ಮೆಚ್ಚುವಂತಿರಬೇಕು. ಶಿಕ್ಷಕರು ಸಾಹಿತ್ಯ ಸಮ್ಮೇಳನಗಳಲ್ಲಿ ಭಾಗವಹಿಸಿ ಒಳ್ಳೆಯ ವಿಚಾರಗಳನ್ನು ಜನರಿಗೆ ತಿಳಿಸಬೇಕು. ಸಾಹಿತ್ಯ ಸಮ್ಮೇಳನಗಳು ಒಳ್ಳೆಯ ಮನಸ್ಸುಗಳನ್ನು ಕಟ್ಟುವ ಕಾರ್ಯ ಮಾಡಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಹೇಳಿದರು.ಕಟೀಲು ಕೇತ್ರದ ಸರಸ್ವತಿ ಸಭಾಭವನದಲ್ಲಿ ಜರುಗಿದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಆನುವಂಶಿಕ ಅರ್ಚಕ ಹರಿನಾರಾಯಣ ಆಸ್ರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶ್ರೀ ಕ್ಷೇತ್ರದಲ್ಲಿ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ವಿಶೇಷ ಪ್ರೋತ್ಸಾಹ ನೀಡಲಾಗುತ್ತಿದ್ದು, ಶ್ರೀದೇವಿಯ ಅನುಗ್ರಹದಿಂದ ಕ್ಷೇತ್ರದಲ್ಲಿ ಭಕ್ತಾದಿಗಳ ಇಷ್ಟಾರ್ಥವು ನೆರವೇರುತ್ತವೆ ಎಂದು ಹೇಳಿದರು.ಹೊಸಕೋಟೆಯ ಹಿರಿಯ ಶಿಕ್ಷಕ ಸಾಹಿತಿ ಶ್ರೀಕಾಂತ್ ಕೆ.ವಿ. ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದರು. ಕ.ಚು.ಸಾ.ಪ.ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ, ಉಡುಪಿ ಜಿಲ್ಲಾಧ್ಯಕ್ಷ ಜಿ.ಯು. ನಾಯಕ, ಉಪಾಧ್ಯಕ್ಷ ರಾಜು ಆಚಾರ್ಯ, ಕಾರ್ಯದರ್ಶಿ ಶಾಂತ ಪುತ್ತೂರು, ಶೇಖರ ಗೌಡ ಪಾಟೀಲ ರಟ್ಟಿಹಳ್ಳಿ ಉಪಸ್ಥಿತರಿದ್ದರು.ದ.ಕ. ಜಿಲ್ಲಾ ಅಧ್ಯಕ್ಷ ಜಯಾನಂದ ಪೆರಾಜೆ ಸ್ವಾಗತಿಸಿದರು. ಅಪೂರ್ವ ಕಾರಂತ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
;Resize=(128,128))
;Resize=(128,128))
;Resize=(128,128))
;Resize=(128,128))