ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜು.8 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿರಾಜಪೇಟೆ ಕಲ್ಯಾಣಿ ಮೋಟಾರ್ಸ್‌ ನಲ್ಲಿ ವಿವಿಧ ಹುದ್ದೆ ಭರ್ತಿಗೊಳಿಸಲು ನೇರ ಸಂದರ್ಶನ ನಡೆಯಲಿದೆ.

ಈ ನೇರ ಸಂದರ್ಶನದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ 8296020826 ಅವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

-----------------------------------------------

ಆಧುನಿಕ ಪಾಕಶಾಲಾ ಕೊಠಡಿ ಉದ್ಘಾಟನೆ

ಮಡಿಕೇರಿ: ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮಹಿಳಾ ಮತ್ತು ಮಕ್ಕಳ ವಿಭಾಗದ ಬಳಿ ನೂತನವಾಗಿ ಆರಂಭಿಸಲಾಗಿರುವ ಆಧುನಿಕ ಪಾಕಶಾಲಾ ಕೊಠಡಿಯನ್ನು ಶಾಸಕ ಎ.ಎಸ್.ಪೊನ್ನಣ್ಣ ಮತ್ತು ಡಾ.ಮಂತರ್ ಗೌಡ ಶನಿವಾರ ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಪ್ರಮುಖರಾದ ತೆನ್ನಿರಾ ಮೈನಾ, ಪ್ರಕಾಶ್ ಆಚಾರ್ಯ, ಜಗದೀಶ್, ಹೊಸೂರು ಸೂರಜ್, ಮೋಹನ್, ಇತರರು ಇದ್ದರು.

ಈ ಸಂದರ್ಭದಲ್ಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಮತ್ತು ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಚರ್ಚಿಸಿದರು.