ಸಾರಾಂಶ
ಹರಪನಹಳ್ಳಿ: ಸಂವಿಧಾನದ ಚೌಕಟ್ಟಿನಲ್ಲಿ ನಾವೆಲ್ಲರೂ ಬದುಕು ಸಾಗಿಸಿ ಅಭಿವೃದ್ಧಿ ಹೊಂದಬೇಕು ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.
ಅವರು ಪಟ್ಟಣದ ಸ್ಟೇಡಿಯಂನಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ 76 ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಭಾನುವಾರ ಮಾತನಾಡಿದರು.ಡಾ.ಬಿ.ಆರ್. ಅಂಬೇಡ್ಕರ್ ಬೇರೆ ಬೇರೆ ದೇಶಗಳನ್ನು ಸುತ್ತಿ ಅಧ್ಯಯನ ಮಾಡಿ ನಮ್ಮ ದೇಶಕ್ಕೆ ಅನುಗುಣವಾದ ಸಂವಿಧಾನವನ್ನು ರೂಪಿಸಿದ್ದಾರೆ. ಆ ಸಂವಿಧಾನದ ಮೂಲಕ ನಮ್ಮ ದೇಶ ಸದೃಡವಾಗಿ ಮುನ್ನಡೆಯುತ್ತಲಿದೆ ಎಂದು ತಿಳಿಸಿದರು.
ವಿವಿಧತೆಯಲ್ಲಿ ಏಕತೆ ಹೊಂದಿರುವ ಭಾರತ ಎಂತಹ ಸವಾಲನ್ನು ಸಹ ಎದುರಿಸಿ ಅಭಿವೃದ್ದಿಯತ್ತ ಸಾಗಿದೆ ಎಂದು ನುಡಿದರು.ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕಂದಾಯ ಉಪವಿಭಾಗಾಧಿಕಾರಿ ಚಿದಾನಂದಗುರುಸ್ವಾಮಿ, ಸಂವಿಧಾನ ಜಾರಿಗೆ ಬಂದ ದಿನವನ್ನು ನಾವು ಗಣರಾಜ್ಯೋತ್ಸವ ಎಂದು ರಾಷ್ಟ್ರೀಯ ಹಬ್ಬವಾಗಿ ಆಚರಣೆ ಮಾಡುತ್ತೇವೆ ಎಂದು ತಿಳಿಸಿದರು.
ಜಗತ್ತಿನಲ್ಲಿ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ ಯಶಸ್ವಿಯಾಗಿ ನಡೆಯುತ್ತಲಿದೆ ಎಂದರು.ಪುರಸಭಾ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ ಮಾತನಾಡಿ, ಇಡೀ ದೇಶಕ್ಕೆ ಅನುಗುಣವಾದಂತಹ ಸಂವಿಧಾನವನ್ನು ರಚಿಸಿ ಕಾನೂನನ್ನು ಅಂಬೇಡ್ಕರ್ ನೀಡಿದ್ದಾರೆ ನಮ್ಮ ನಮ್ಮ ಕ್ಷೇತ್ರಗಳಲ್ಲಿ ಉತ್ತಮವಾಗಿ ಕೆಲಸ ಮಾಡೋಣ ಎಂದು ಅವರು ತಿಳಿಸಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ಈ ಸಂದರ್ಭದಲ್ಲಿ ಮಾತನಾಡಿದರು. ವಿವಿಧ ಶಾಲೆಗಳ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.ಪುರಸಭಾ ಅಧ್ಯಕ್ಷ ಎಂ.ಫಾತಿಮಾಬಿ, ಉಪಾದ್ಯಕ್ಷ ಎಚ್.ಕೊಟ್ರೇಶ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ, ಪುರಸಭಾ ಸದಸ್ಯರಾದ ಅಬ್ದುಲ್ ರಹಿಮಾನ್, ಉದ್ದಾರ ಗಣೇಶ, ಲಾಟಿ ದಾದಾಪೀರ, ಮಂಜುನಾಥ ಇಜಂತಕರ್, ಜಾಕೀರ ಹುಸೇನ್, ಡಿವೈಎಸ್ಪಿ ವೆಂಕಟಪ್ಪ ನಾಯಕ, ಸಿಪಿಐ ನಾಗರಾಜ ಎಂ.ಕಮ್ಮಾರ, ಸುವರ್ಣ ಮಹೋತ್ಸವ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ.ಟಿ.ಎಂ. ಚಂದ್ರಶೇಖರಯ್ಯ, ಸುಮಾ ಜಗದೀಶ, ಕವಿತಾ ಸುರೇಶ, ತಹಶೀಲ್ದಾರ ಬಿ.ವಿ. ಗಿರೀಶಬಾಬು, ಬಿಇಒ ಲೇಪಾಕ್ಷಪ್ಪ, ತಾಪಂ ಇಒ ಚಂದ್ರಶೇಖರ, ಪುರಸಭಾ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ, ಬಿಸಿಎಂ ಅಧಿಕಾರಿ ಭೀಮಪ್ಪ, ಪಿಎಸ್‌ಐ ಎಸ್.ಸಿ. ಹಿರೇಮಠ ಇದ್ದರು.
ಹರಪನಹಳ್ಳಿ ಪಟ್ಟಣದ ಸ್ಡೇಡಿಯಂನಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕಿ ಎಂ.ಪಿ. ಲತಾ ಧ್ವಜವಂದನೆ ಸ್ವೀಕರಿಸಿದರು. ಎಸಿ ಚಿದಾನಂದಗುರುಸ್ವಾಮಿ, ಎಂ.ವಿ. ಅಂಜಿನಪ್ಪ, ಡಿವೈಎಸ್ಪಿ ವೆಂಕಟಪ್ಪ ನಾಯಕ, ತಹಶೀಲ್ದಾರ ಗಿರೀಶಬಾಬು ಇದ್ದರು.