ಸಾರಾಂಶ
ದಾನಿಯೊಬ್ಬರು ನೀಡಿದ ಯಕೃತ್ ಅನ್ನು ಬೆಳಗಾವಿಯಿಂದ ರಸ್ತೆ ಮೂಲಕ ಹುಬ್ಬಳ್ಳಿವರೆಗೆ ತೆರಳಿ, ಅಲ್ಲಿಂದ ಇಂಡಿಗೋ ವಿಮಾನದಲ್ಲಿ ಬೆಂಗಳೂರಿಗೆ ರವಾನಿಸಲಾಯಿತು. ಬೆಂಗಳೂರಿನ ಯಶವಂತಪುರದಲ್ಲಿರುವ ಸ್ಪರ್ಶ ಆಸ್ಪತ್ರೆಯಲ್ಲಿ ಲಿವರ್ ಕಸಿ ಅಗತ್ಯವಿದ್ದ ರೋಗಿಯೊಬ್ಬರಿಗೆ ಬೆಳಗಾವಿ ದಾನಿ ನೀಡಿದ ಯಕೃತ್ ಅನ್ನು ಜೋಡಣೆ ಮಾಡಲಾಯಿತು.
ಕನ್ನಡಪ್ರಭ ವಾರ್ತೆ ಬೆಳಗಾವಿ
ದಾನಿಯೊಬ್ಬರು ನೀಡಿದ ಯಕೃತ್ ಅನ್ನು ಬೆಳಗಾವಿಯಿಂದ ರಸ್ತೆ ಮೂಲಕ ಹುಬ್ಬಳ್ಳಿವರೆಗೆ ತೆರಳಿ, ಅಲ್ಲಿಂದ ಇಂಡಿಗೋ ವಿಮಾನದಲ್ಲಿ ಬೆಂಗಳೂರಿಗೆ ರವಾನಿಸಲಾಯಿತು. ಬೆಂಗಳೂರಿನ ಯಶವಂತಪುರದಲ್ಲಿರುವ ಸ್ಪರ್ಶ ಆಸ್ಪತ್ರೆಯಲ್ಲಿ ಲಿವರ್ ಕಸಿ ಅಗತ್ಯವಿದ್ದ ರೋಗಿಯೊಬ್ಬರಿಗೆ ಬೆಳಗಾವಿ ದಾನಿ ನೀಡಿದ ಯಕೃತ್ ಅನ್ನು ಜೋಡಣೆ ಮಾಡಲಾಯಿತು. ಬೆಳಗಾವಿಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣದವರೆಗೆ ಹಾಗೂ ಬೆಂಗಳೂರು ವಿಮಾನ ನಿಲ್ದಾಣದಿಂದ ಯಶವಂತಪುರ ಸ್ಪರ್ಶ ಆಸ್ಪತ್ರೆವರೆಗೆ ಜೀರೋ ಟ್ರಾಫಿಕ್ ಮೂಲಕ ಸಾಗಿಸಲಾಯಿತು. ಲಿವರ್ ರವಾನೆಗೆ ಸ್ಪರ್ಶ ಆಸ್ಪತ್ರೆಯ ವೈದ್ಯಕೀಯ ಹಾಗೂ ಮೆಡಿಕಲ್ ಸಿಬ್ಬಂದಿ ವ್ಯವಸ್ಥೆ ಮಾಡಿಕೊಂಡಿದ್ದರು.