ಸಾರಾಂಶ
ರಾಮಮಂದಿರ ನಿರ್ಮಾಣ ಮಾಡಲು ದೊಡ್ಡ ಶಕ್ತಿಯಾಗಿ ಅಡ್ವಾನಿಯವರು ನಿಂತಿದ್ದರು. ಹಿಂದೂಗಳ ಭಾವನೆಗೆ ಶಕ್ತಿ ಸಿಕ್ಕಿದ್ದು ಅಡ್ವಾಣಿ ಅವರ ಅವಧಿಯಲ್ಲಿ. ಅಂತಹ ಮುತ್ಸದ್ದಿಗೆ ಭಾರತ ರತ್ನ ಘೋಷಣೆ ಮಾಡಿದ್ದಾರೆ. ಇದು ರಾಜಕೀಯ ಮುತ್ಸದ್ದಿಗೆ ಸಿಕ್ಕ ಗೌರವ. ಸಿದ್ಧಾಂತಕ್ಕೆ ಬದ್ಧರಾಗಿ ಹೋರಾಟ ಮಾಡಿದ ನಾಯಕ ಎಲ್.ಕೆ.ಅಡ್ವಾಣಿ ಅವರ ದೊಡ್ಡ ತಪ್ಪಸ್ಸಿನಿಂದ ರಾಮಮಂದಿರ ನಿರ್ಮಾಣವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ಘೋಷಣೆ ಮಾಡಿದ್ದಾರೆ. ಇದು ರಾಜಕೀಯ ಮುತ್ಸದ್ದಿಗೆ ಸಿಕ್ಕ ಗೌರವ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ಧಾಂತಕ್ಕೆ ಬದ್ಧರಾಗಿ ಹೋರಾಟ ಮಾಡಿದ ನಾಯಕ ಎಲ್.ಕೆ.ಅಡ್ವಾಣಿ ಅವರ ದೊಡ್ಡ ತಪ್ಪಸ್ಸಿನಿಂದ ರಾಮಮಂದಿರ ನಿರ್ಮಾಣವಾಗಿದೆ ಎಂದರು.
ರಾಮಮಂದಿರ ನಿರ್ಮಾಣ ಮಾಡಲು ದೊಡ್ಡ ಶಕ್ತಿಯಾಗಿ ಅಡ್ವಾನಿಯವರು ನಿಂತಿದ್ದರು. ಹಿಂದೂಗಳ ಭಾವನೆಗೆ ಶಕ್ತಿ ಸಿಕ್ಕಿದ್ದು ಅಡ್ವಾಣಿ ಅವರ ಅವಧಿಯಲ್ಲಿ. ಅಂತಹ ಮುತ್ಸದ್ದಿಗೆ ಭಾರತರತ್ನ ಸಿಕ್ಕಿರುವುದು ಹೆಮ್ಮೆಯ ವಿಚಾರ ಎಂದು ಹೇಳಿದರು.ದೇಶ ವಿಭಜನೆ ಕಾಂಗ್ರೆಸ್ ಸಂಸ್ಕೃತಿ:
ದೇಶ ವಿಭಜನೆ ಮಾಡುವುದು ಕಾಂಗ್ರೆಸ್ ಸಂಸ್ಕೃತಿಯಾಗಿದೆ. ಈ ಹಿಂದೆ ಅವರು ದೇಶವನ್ನು ಮೂರು ವಿಭಾಗ ಮಾಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಎಂದರೆ, ಇಲ್ಲಿನ ಕಾಂಗ್ರೆಸ್ ನಾಯಕರು ಭಾರತ್ ತೋಡೋ ಎಂದು ಹೇಳುತ್ತಿದ್ದಾರೆ. ದೇಶ ಒಡೆಯುವ ವಿಚಾರದಲ್ಲಿ ರಾಜಕೀಯ ನಾಯಕರು ಹೇಳಿಕೆ ಕೊಡುತ್ತಿದ್ದಾರೆ. ಆದರೆ, ಇದನ್ನು ಕಾಂಗ್ರೆಸ್ ರಾಷ್ಟ್ರೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರೇ ಈ ಹೇಳಿಕೆ ವಿರೋಧ ಮಾಡಿದ್ದಾರೆ. ಒಬ್ಬರು ದೇಶ ಒಡೆಯುವ ಮಾತನಾಡಿದರೆ, ಇನ್ನೊಬ್ಬರು ಅದನ್ನು ವಿರೋಧಿಸುತ್ತಾರೆ. ಕಾಂಗ್ರೆಸ್ ನಾಯಕರಲ್ಲಿಯೇ ಭಿನ್ನ ಇದೆ. ಇದನ್ನು ಕಾಂಗ್ರೆಸ್ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ಕುಟುಕಿದರು.ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಳೆದ ಬಾರಿ 25 ಕ್ಷೇತ್ರಗಳಲ್ಲಿ ನಾವು ಗೆದ್ದಿದ್ದೆವು. ಈ ಬಾರಿ 28 ಕ್ಷೇತ್ರದಲ್ಲೂ ಗೆಲ್ಲಲು ನಮ್ಮ ಸಂಘಟನೆ ಮುಂದಾಗಿದೆ. ಲೋಕಸಭಾ ಯುದ್ಧಕ್ಕೆ ಬೂತ್ ಮಟ್ಟದಿಂದ ಕಾರ್ಯಕರ್ತರು ಅಣಿಯಾಗುತ್ತಿದ್ದಾರೆ. ಹೀಗಾಗಿ, ದೇಶದಲ್ಲಿ 400 ಕ್ಷೇತ್ರ ಗೆಲ್ಲುವ ನೀರಿಕ್ಷೆ ಇದೆ. ದೇಶದಲ್ಲಿ ಬಿಜೆಪಿ ಪರ ವಾತಾವರಣ ಇದೆ. ಶಿವಮೊಗ್ಗ ಕ್ಷೇತ್ರದ ಅಭಿವೃದ್ಧಿ ನೋಡಿ ಜನ ನನ್ನ ಕೈ ಹಿಡಿಯುತ್ತಾರೆ ಎನ್ನುವ ನಂಬಿಕೆ ಇದೆ ಎಂದು ಹೇಳಿದರು.
- - - -4ಎಸ್‌ಎಂಜಿಕೆಪಿ02: ಬಿ.ವೈ.ರಾಘವೇಂದ್ರ