ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಪ್ರಾರಂಭ

| Published : Aug 03 2025, 01:30 AM IST

ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಪ್ರಾರಂಭ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ಸಕ್ಷಮ್ ಯೋಜನೆಯಡಿ ಅಂಗನವಾಡಿ ಕೇಂದ್ರಗಳನ್ನು ಸದೃಢಗೊಳಿಸುವ ಉದ್ದೇಶದೊಂದಿಗೆ ಮೂಲಭೂತ ಸೌಕರ್ಯ ಗಳನ್ನು ಒದಗಿಸಿ ಖಾಸಗಿ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಮುಂದಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಸಕ್ಷಮ್ ಯೋಜನೆಯಡಿ ಅಂಗನವಾಡಿ ಕೇಂದ್ರಗಳನ್ನು ಸದೃಢಗೊಳಿಸುವ ಉದ್ದೇಶದೊಂದಿಗೆ ಮೂಲಭೂತ ಸೌಕರ್ಯ ಗಳನ್ನು ಒದಗಿಸಿ ಖಾಸಗಿ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಮುಂದಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಶನಿವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸಮವಸ್ತ್ರ ವಿತರಿಸಿ ಮಾತನಾಡಿದರು.

ಅ. 2ಕ್ಕೆ ಅಂಗನವಾಡಿ ಕೇಂದ್ರಗಳನ್ನು ಆರಂಭವಾಗಿ 50 ವರ್ಷ ತುಂಬುತ್ತಿರುವ ಈ ಸಂದರ್ಭದಲ್ಲಿ ತಾಲೂಕಿನ 47 ಅಂಗನ ವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಪ್ರಾರಂಭಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಸಂಬಂಧ ಈಗಾಗಲೇ ಪಠ್ಯಪುಸ್ತಕ ಸರಬರಾಜಾಗುತ್ತಿದ್ದು, ಕನ್ನಡ ಹಾಗೂ ಇಂಗ್ಲಿಷ್ ಮಾಧ್ಯಮದಲ್ಲಿ ತರಗತಿ ನಡೆಸಲಾಗುವುದು. 4-5 ವರ್ಷದ ಮಕ್ಕಳಿಗೆ ಎಲ್‌ಕೆಜಿ, 5-6 ವರ್ಷದ ಮಕ್ಕಳಿಗೆ ಯುಕೆಜಿ ತರಗತಿ ಪ್ರತ್ಯೇಕ ಕೊಠಡಿಗಳಲ್ಲಿ ನಡೆಸಲಾಗುವುದೆಂದು ಮಾಹಿತಿ ನೀಡಿದರು.ಇಲಾಖೆಯಿಂದ ಅಂಗನವಾಡಿ ಕೇಂದ್ರಗಳಿಗೆ ಮಡಿಷನ್ ಕಿಟ್ ಸರಬರಾಜು ಮಾಡಲಾಗಿದ್ದು ಫಲಾನುಭವಿಗಳಿಗೆ ಈ ಕಿಟ್ಟನ್ನು ಪ್ರಥಮ ಚಿಕಿತ್ಸೆಗಾಗಿ ಬಳಸಲಾಗುತ್ತಿದೆ ಎಂದರು. ಚಿಕ್ಕಮಗಳೂರು ತಾಲೂಕಿನಲ್ಲಿ 40 ಅಂಗನವಾಡಿ ಕೇಂದ್ರಗಳನ್ನು ಗುರುತಿ ಸಿದ್ದು, ಈ ಅಂಗನವಾಡಿ ಕೇಂದ್ರ ಗಳಿಗೆ ಟಿವಿ, ಪೆನ್‌ಡ್ರೈವ್, ಸ್ಟೆಬಿಲೈಜರ್ ವಿತರಣೆ ಮಾಡಲಾಗುತ್ತಿದೆ. ಅಂಗನವಾಡಿ ಕೇಂದ್ರಕ್ಕೆ ಆಗಮಿಸುವ 3-6 ವರ್ಷದ ಮಕ್ಕಳಿಗೆ ಹಾಗೂ ಇತರೆ ಫಲಾನುಭವಿಗಳಿಗೆ ಶಿಕ್ಷಣ ನೀಡಲಾಗುವುದು ಎಂದು ಹೇಳಿದರು.ಪ್ರತಿ ವರ್ಷದಂತೆ ತಾಲೂಕಿನ 407 ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಮವಸ್ತ್ರ, ಇತರೆ ಪರಿಕರ ನೀಡಲಾಗುವುದು ಇಲಾಖೆಯಿಂದ ಉತ್ತಮ ಗುಣಮಟ್ಟದ 2 ಸಮವಸ್ತ್ರದ ಸೀರೆಗಳನ್ನು ವಿತರಿಸಲಾಗುವುದೆಂದರು.ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಂಗನಾಥ್ ಮಾತನಾಡಿ, ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಹಂತ ಹಂತವಾಗಿ ಆಂಗ್ಲ ಮಾಧ್ಯಮದಲ್ಲಿ ಎಲ್‌ಕೆಜಿ, ಯುಕೆಜಿ ವಿನೂತನ ತರಗತಿಗಳನ್ನು 2025 ರ ಅಕ್ಟೋಬರ್ 2 ರಂದು ವಿದ್ಯುಕ್ತವಾಗಿ ಸರ್ಕಾರದ ಆದೇಶದಂತೆ ಆರಂಭಿಸಲಾಗುವುದು. ಖಾಸಗಿ ಶಾಲೆಗಳ ಶಿಕ್ಷಣಕ್ಕೆ ಕಡಿಮೆ ಇಲ್ಲದಂತೆ ಕಾರ್ಯ ನಿರ್ವಹಿಸಲು ಸಚಿವರು ಸೂಚನೆ ನೀಡಿದ್ದಾರೆ ಎಂದರು.ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ವಿಜಯ್‌ಕುಮಾರ್, ಎಸಿಡಿಪಿಒ ರೂಪಾ ಕುಮಾರಿ, ವಸಂತ ಕುಮಾರಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಉಪಸ್ಥಿತರಿದ್ದರು.-- ಬಾಕ್ಸ್‌ --₹2 ಕೋಟಿ ವೆಚ್ಚದಲ್ಲಿ ಅಂಬೇಡ್ಕರ್ ಭವನ ನವೀಕರಣಚಿಕ್ಕಮಗಳೂರು: ನಗರದ ಹೃದಯ ಭಾಗದ ಡಾ. ಅಂಬೇಡ್ಕರ್ ಭವನವನ್ನು ಸುಮಾರು ₹2 ಕೋಟಿ ವೆಚ್ಚದಲ್ಲಿ ನವೀಕರಣ ಗೊಳಿಸಲಾಗುವುದೆಂದು ಶಾಸಕ ಎಚ್.ಡಿ. ತಮ್ಮಯ್ಯ ತಿಳಿಸಿದರು.ಇಂದು ನಗರದ ಅಂಬೇಡ್ಕರ್ ಭವನ ನವೀಕರಣ ಸಂಬಂಧ ಅಧಿಕಾರಿಗಳು ಹಾಗೂ ಶೋಷಿತ ವರ್ಗದ ಸಂಘಟನೆಗಳ ಪ್ರಮುಖರೊಂದಿಗೆ ಭೇಟಿಮಾಡಿ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ನೇತೃತ್ವದಲ್ಲಿ ನಗರದ ಹೃದಯ ಭಾಗದ ಅಂಬೇಡ್ಕರ್ ಭವನ ಸಮಗ್ರ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯ ಒದಗಿಸಲು ₹೨ ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಹೇಳಿದರು.

ಶೋಷಿತ ವರ್ಗದ ಸಂಘಟನೆಗಳ ಪ್ರಮುಖರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಲಾಗಿದೆ. ಅಭಿಪ್ರಾಯ ಸಂಗ್ರಹಿಸಲಾಗಿದೆ. ಅಂಬೇಡ್ಕರ್ ಭವನ ನಿರ್ವಹಣೆ ಮತ್ತು ಅನುದಾನ ಸದ್ಭಳಕೆ ಮಾಡುವ ಮೂಲಕ ಸಮಗ್ರ ಅಭಿವೃದ್ಧಿ ಮಾಡಲಾಗುವುದೆಂದು ಹೇಳಿದರು.ಸುಸಜ್ಜಿತ ಶೌಚಾಲಯ, ಸ್ವಚ್ಛತೆ, ಅಡುಗೆ ಮನೆ, ಸಿಸಿ ಟಿವಿಗಳನ್ನು ಅಳವಡಿಸಲಾಗುವುದು. ನಗರದ ಹೊರಭಾಗದಲ್ಲಿ 5-10 ಎಕರೆ ಜಾಗವನ್ನು ಜಿಲ್ಲಾಡಳಿತ ಗುರ್ತಿಸಿದ್ದು, ಸಧ್ಯದಲ್ಲೇ ಜಿಲ್ಲಾಮಟ್ಟದ ಅಂಬೇಡ್ಕರ್ ಅಧ್ಯಯನ ಸಂಸ್ಥೆ ಅಥವಾ ಬುದ್ಧ ವಿಹಾರ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು.ವಕೀಲ ಅನಿಲ್‌ಕುಮಾರ್ ಮಾತನಾಡಿ, ಈ ಅಂಬೇಡ್ಕರ್ ಭವನವನ್ನು ಅಭಿವೃದ್ಧಿಪಡಿಸಿ ಬಡವರ ಅನುಕೂಲಕ್ಕೆ ಸದ್ಭಳಕೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ. ರಾಧಾಕೃಷ್ಣ ಮಾತನಾಡಿ, ನಗರದ ಅಂಬೇಡ್ಕರ್ ಭವನ ತುಂಬಾ ಶಿಥಿಲಾ ವಸ್ಥೆಯಲ್ಲಿದ್ದು, ಈ ಬಗ್ಗೆ ಅನೇಕ ವರ್ಷಗಳ ಹೋರಾಟ ಇಂದು ಫಲಿಸಿದೆ. ಶಾಸಕ ಎಚ್.ಡಿ. ತಮ್ಮಯ್ಯನವರ ಪರಿಶ್ರಮದ ಫಲವಾಗಿ ರಾಜ್ಯ ಸರ್ಕಾರದಿಂದ ₹2 ಕೋಟಿ ಅನುದಾನ ಬಿಡುಗಡೆಯಾಗಿದೆ.ಇಂದು ನಡೆದ ಸಭೆಯಲ್ಲಿ ಸೂಕ್ತ ಸಲಹೆ ನೀಡಲಾಗಿದ್ದು, ಶೋಷಿತ ಸಮುದಾಯಕ್ಕೆ ಈ ಭವನ ಮುಂದೆ ಅನುಕೂಲವಾಗಲಿದೆ ಎಂದರು.ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ ಮಾತನಾಡಿ, ಅಂಬೇಡ್ಕರ್ ಭವನ ನವೀಕರಣ ಗೊಳ್ಳುತ್ತಿರುವುದು ಶೋಷಿತರು, ಬಡವರು, ಅಂಬೇಡ್ಕರ್ ಅನುಯಾಯಿಗಳು ಹಾಗೂ ಎಲ್ಲಾ ವರ್ಗದ ಜನರ ಪರವಾಗಿ ಧನ್ಯವಾದ ಅರ್ಪಿಸಿ, ಶಾಸಕರ ಮುಂದಿನ ಜೀವನ ಉಜ್ವಲವಾಗಲಿ, ರಾಜಕೀಯವಾಗಿ ಪ್ರಜ್ವಲಿಸಲಿ ಎಂದು ಶುಭ ಹಾರೈಸಿದರು.