ಸ್ತ್ರೀಶಕ್ತಿ ಸಂಘಗಳಿಗೆ ಶಕ್ತಿ ತುಂಬಲು ಸಾಲ ವಿತರಣೆ

| Published : Sep 22 2025, 01:00 AM IST

ಸಾರಾಂಶ

ಕನಕಪುರ: ತಾಲೂಕಿನ ಸ್ತ್ರೀ ಶಕ್ತಿ ಸಂಘಗಳಿಗೆ ಶಕ್ತಿ ತುಂಬುವ ಸಲುವಾಗಿ ಕೆನರಾ ಬ್ಯಾಂಕ್ ಸಹಕಾರದಿಂದ 4.17 ಕೋಟಿ ಸಾಲ ನೀಡುತ್ತಿದ್ದು ಸಾಲ ಪಡೆದ ಫಲಾನುಭವಿಗಳು ಇದರ ಸದುಪಯೋಗ ಪಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳುವಂತೆ ಕನಕಾಂಬರಿ ಮಹಿಳಾ ಒಕ್ಕೂಟದ ಗೌರವಾಧ್ಯಕ್ಷ ಎಚ್.ಕೆ.ಶ್ರೀಕಂಠ ತಿಳಿಸಿದರು.

ಕನಕಪುರ: ತಾಲೂಕಿನ ಸ್ತ್ರೀ ಶಕ್ತಿ ಸಂಘಗಳಿಗೆ ಶಕ್ತಿ ತುಂಬುವ ಸಲುವಾಗಿ ಕೆನರಾ ಬ್ಯಾಂಕ್ ಸಹಕಾರದಿಂದ 4.17 ಕೋಟಿ ಸಾಲ ನೀಡುತ್ತಿದ್ದು ಸಾಲ ಪಡೆದ ಫಲಾನುಭವಿಗಳು ಇದರ ಸದುಪಯೋಗ ಪಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳುವಂತೆ ಕನಕಾಂಬರಿ ಮಹಿಳಾ ಒಕ್ಕೂಟದ ಗೌರವಾಧ್ಯಕ್ಷ ಎಚ್.ಕೆ.ಶ್ರೀಕಂಠ ತಿಳಿಸಿದರು.

ನಗರದ ಆರ್‌ಇಎಸ್ ಸಂಸ್ಥೆಯ ಸಭಾಂಗಣದಲ್ಲಿ ಕೆನರಾ ಬ್ಯಾಂಕ್ ವತಿಯಿಂದ ಹಾರೋಹಳ್ಳಿ, ಕನಕಪುರ ತಾಲೂಕಿನ 30 ಸ್ವ ಸಹಾಯ ಸಂಘಗಳಿಗೆ ಕೃಷಿ ಮತ್ತು ಮಹಿಳಾ ಸ್ವ ಸಹಾಯ ಸಂಘಗಳಿಗೆ ಆರ್ಥಿಕ ಅರಿವು ಹಾಗೂ ಬೃಹತ್ ಸಾಲ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಒಂದು ಕುಟುಂಬ ಉತ್ತಮ ಜೀವನ ನಡೆಸಲು ಮಹಿಳೆಯೇ ಮುಖ್ಯವಾಗಿದ್ದು ಅವಳಿಗೆ ಆರ್ಥಿಕ ಶಕ್ತಿ ತುಂಬಿದರೆ ಆ ಕುಟುಂಬದ ಮಕ್ಕಳು ವಿದ್ಯಾವಂತರಾಗಿ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಾಧ್ಯ ಎಂಬುದನ್ನು ಮನಗಂಡು ನಮ್ಮ ಸಂಸ್ಥೆ ಹಲವು ವರ್ಷಗಳಿಂದ ಅವರ ಕೃಷಿ ಹಾಗೂ ಇತರೆ ದೈನಂದಿನ ಚಟುವಟಿಕೆಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿ ಅವರಿಗೆ ಶಕ್ತಿ ತುಂಬುತ್ತಿದೆ. ಸಾಲ ಪಡೆದವರು ಸಕಾಲದಲ್ಲಿ ಸಾಲ ಮರುಪಾವತಿಸಿ ಒಕ್ಕೂಟದ ಪ್ರಗತಿ ಹಾಗೂ ಆರ್ಥಿಕ ಸದೃಢತೆ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು.

ಕೆನರಾ ಬ್ಯಾಂಕ್ ಮಂಡ್ಯ ಪ್ರಾದೇಶಿಕ ಕಚೇರಿಯ ಎಜಿಎಂ ಅನುರಾಧ ಮಾತನಾಡಿ, ಕೆನರಾ ಬ್ಯಾಂಕ್ ವತಿಯಿಂದ ಹಲವಾರು ಸಾಲ ಸೌಲಭ್ಯಗಳು ಲಭ್ಯವಿದೆ, ವಿಶೇಷವಾಗಿ ಮಹಿಳೆಯರಿಗೆ ಸ್ವ ಸಹಾಯ ಗುಂಪುಗಳ ಮೂಲಕ ಹೆಚ್ಚಿನ ಸಾಲ ನೀಡಲಾಗುತ್ತಿದ್ದು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.

ಕೆನರಾ ಬ್ಯಾಂಕ್ ಮಂಡ್ಯ ಪ್ರಾದೇಶಿಕ ಕಚೇರಿಯ ಡಿಜಿಎಂ ಪಕೀರಪ್ಪ ರಂಗನಾಯಕ್, ಕನಕಪುರ ಶಾಖೆ ವ್ಯವಸ್ಥಾಪಕ

ಹೇಮಂತ್ ಕುಮಾರ್, ಕನಕಾಂಬರಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಪ್ರೇಮಾ, ಒಕ್ಕೂಟದ ವ್ಯವಸ್ಥಾಪಕ ಮಾಯಣ್ಣ ಗೌಡ, ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

ಕೆ ಕೆ ಪಿ ಸುದ್ದಿ,03: ಸ್ತ್ರೀ ಶಕ್ತಿ ಸಂಘಗಳಿಗೆ ಸಾಲ ವಿತರಣೆ