ಮಹಿಳಾ ಸಬಲೀಕರಣಕ್ಕೆ ಬ್ಯಾಂಕ್‌ಗಳ ಮೂಲಕ ಸಾಲ ಸೌಲಭ್ಯ : ಶಂಕರ್‌

| Published : Jul 12 2025, 12:32 AM IST

ಮಹಿಳಾ ಸಬಲೀಕರಣಕ್ಕೆ ಬ್ಯಾಂಕ್‌ಗಳ ಮೂಲಕ ಸಾಲ ಸೌಲಭ್ಯ : ಶಂಕರ್‌
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಂಕರ್ ಕೊರವರ್ ಹೇಳಿದರು.

- ಯೂನಿಯನ್‌ ಬ್ಯಾಂಕ್‌ನಿಂದ ಸ್ವಸಹಾಯ ಸಂಘಗಳಿಗೆ ಸಾಲ ಮಂಜೂರಾತಿ ಪತ್ರ ವಿತರಣ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುದುಡಿಮೆಯೇ ಬಡತನ ಅಳಿಸುವ ಸಾಧನ. ಕೂಡಿ ಬಾಳಬೇಕು, ಒಟ್ಟಾಗಿ ದುಡಿದಾಗ ಮಾತ್ರ ಬಡತನ ನಿವಾರಣೆ ಮಾಡಲು ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಂಕರ್ ಕೊರವರ್ ಹೇಳಿದರು.

ಚಿಕ್ಕಮಗಳೂರು ನಗರಸಭೆ ಸಭಾಂಗಣದಲ್ಲಿ ಯೂನಿಯನ್ ಬ್ಯಾಂಕ್ ನಿಂದ ಏನಡೆದ ಸ್ವಸಹಾಯ ಸಂಘದ ಮಹಿಳೆಯರಿಗೆ ಸಾಲ ಮಂಜೂರಾತಿ ಪತ್ರ ಹಾಗೂ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ದರು.ಜಿಲ್ಲೆಯ ಎಲ್ಲಾ ಮಹಿಳಾ ಸ್ವಸಹಾಯ ಸಂಘಗಳ ಸಬಲೀಕರಣಕ್ಕಾಗಿ ಸರ್ಕಾರ ಬ್ಯಾಂಕ್‌ಗಳ ಮೂಲಕ ಆರ್ಥಿಕ ಸೌಲಭ್ಯ ಕಲ್ಪಿಸಲು ಮುಂದಾಗಿದ್ದು, ಇದರ ಸದುಪಯೋಗ ಪಡೆದುಕೊಂಡು ಸ್ವ ಉದ್ಯೋಗ ಸ್ಥಾಪಿಸಿ ಮಹಿಳೆಯರು ಆರ್ಥಿಕವಾಗಿ ಸದೃಢರಾಗಬೇಕೆಂದು ಕರೆ ನೀಡಿದರು.

ಹೆಣ್ಣು ಮಕ್ಕಳು ಆರ್ಥಿಕ ಸುಧಾರಣೆಯಾದರೆ ದೇಶ ಸುಭಿಕ್ಷವಾಗುತ್ತದೆ ಎಂಬುದನ್ನು ಮನಗಂಡ ಸರ್ಕಾರ ಈ ವರ್ಷ ''''''''ನಾರಿ ಶಕ್ತಿ'''''''' ಯೋಜನೆ ಜಾರಿಗೆ ತಂದಿದೆ. ಮಹಿಳೆಯರು ಯಾವುದೇ ಉದ್ಯೋಗ ಕೈಗೊಳ್ಳಬೇಕಾದರೆ ಕೌಶಲ್ಯ ತರಬೇತಿ ಅಗತ್ಯ ಆ ಮೂಲಕ ಮಹಿಳೆಯರನ್ನು ಉದ್ಯೋಗದತ್ತ ಆಸಕ್ತಿ ಮೂಡಿಸಿ ಮುಖ್ಯವಾಹಿನಿಗೆ ತರಬೇಕೆಂಬುದು ಯೂನಿಯನ್ ಬ್ಯಾಂಕಿನ ತರಬೇತಿ ಸಂಸ್ಥೆ ಉದ್ದೇಶವಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ 1 ಲಕ್ಷ ಕುಟುಂಬಗಳು ಸ್ವ-ಸಹಾಯ ಸಂಘಗಳ ಮೂಲಕ ಕಾರ್ಯ ಚಟುವಟಿಕೆ ನಡೆಸುತ್ತಿವೆ, ಉಳಿತಾಯ ಮಾಡಿ ತರಬೇತಿ ಪಡೆದು ಹೆಚ್ಚು ಆರ್ಥಿಕ ಸಬಲರಾಗಬೇಕೆಂದು ತಿಳಿಸಿದರು.

ಪ್ರಸಕ್ತ ವರ್ಷ ₹10296 ಕೋಟಿ ಯನ್ನು ಎಲ್ಲಾ ಬ್ಯಾಂಕ್‌ಗಳ ಮೂಲಕ ಸಾಲ ವಿತರಣೆಗೆ ಗುರಿ ಹೊಂದಲಾಗಿದೆ. ಇದರಲ್ಲಿ ಕೃಷಿಗೆ ₹70 ಕೋಟಿ, ಶಿಕ್ಷಣಕ್ಕೆ ₹26 ಕೋಟಿ, ಮನೆ ನಿರ್ಮಾಣಕ್ಕೆ ₹50 ಕೋಟಿ ಸೇರಿದಂತೆ ರೈತರು ಪರಿಶಿಷ್ಟ ಜಾತಿ, ಪಂಗಡದ ಸಮುದಾಯಕ್ಕೆ ಸಾಲ ನೀಡಲಾಗುವುದೆಂದು ಹೇಳಿದರು.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ಮುಖ್ಯಸ್ಥ ವಿಶುಕುಮಾರ್ ಮಾತನಾಡಿ, ಮಹಿಳೆಯರನ್ನು ಆರ್ಥಿಕ ವಾಗಿ ಸದೃಢ ಗೊಳಿಸುವ ಸಲುವಾಗಿ ಸ್ವ ಸಹಾಯ ಗುಂಪುಗಳ ಜೊತೆಯಾಗಿ ಲಕ್ಪತಿ ದೀದಿ ಎಂಬ ಯೋಜನೆಯನ್ನು ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಡಿ ರಾಷ್ಟ್ರಮಟ್ಟದ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.

ಮಹಿಳೆಯರು ಹೊಸದಾಗಿ ಉದ್ಯೋಗ ಪ್ರಾರಂಭಿಸಲು ಹಾಗೂ ವಿಸ್ತರಿಸಲು ಇದು ಸಹಾಯ ಮಾಡಿಕೊಡುತ್ತದೆ. ಮಹಿಳೆಯರು ಕೃಷಿ ಆಧಾರಿತ ಹಾಗೂ ಕೃಷಿಯೇತರ ಎರಡು ರೀತಿ ಸುಸ್ಥಿರ ಜೀವನೋಪಾಯ ಪದ್ಧತಿ ಕಂಡುಕೊಳ್ಳಲು ಇದು ಸಹಕರಿಸುತ್ತದೆ. ಈ ಯೋಜನೆ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಹೆಚ್ಚಾಗಿ ಉಪಯುಕ್ತವಾಗಿದೆ. ಯೂನಿಯನ್ ಲಕ್ಪತಿ ಬೀದಿ ಯೋಜನೆ ಮಹಿಳೆಯರಿಗೆ ಯಶಸ್ವಿಯಾಗಿಸಲು ಆರ್ಥಿಕವಾಗಿ ಸ್ವತಂತ್ರ ಸಾಧಿಸಲು ಸಂಪನ್ಮೂಲಗಳನ್ನು ಒದಗಿಸುವ ಮೂಲಕ ಆರ್ಥಿಕವಾಗಿ ಸದೃಢಗೊಳಿಸುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕಿ ಎಸ್‌. ನಯನ, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಮಹೇಶ್, ಯೂನಿಯನ್ ಬ್ಯಾಂಕ್ ಗ್ರಾಮೀಣ ಅಭಿವೃದ್ಧಿ ಅಧಿಕಾರಿ ಆರ್‌. ಮಂಜುನಾಥ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಶಾಂತ್, ಯೂನಿಯನ್ ಬ್ಯಾಂಕ್ ನಿರ್ದೇಶಕ ಶ್ರೀಪಾದ್‌ ಇದ್ದರು.11 ಕೆಸಿಕೆಎಂ 1 ಚಿಕ್ಕಮಗಳೂರು ನಗರಸಭೆ ಸಭಾಂಗಣದಲ್ಲಿ ಯೂನಿಯನ್ ಬ್ಯಾಂಕ್ ನಿಂದ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಸ್ವಸಹಾಯ ಸಂಘದ ಮಹಿಳೆಯರಿಗೆ ಸಾಲ ಮಂಜೂರಾತಿ ಪತ್ರ ಹಾಗೂ ಚೆಕ್ ವಿತರಣೆ ಮಾಡಲಾಯಿತು. ಜಿಪಂ ಉಪ ಕಾರ್ಯದರ್ಶಿ ಶಂಕರ್ ಕೊರವರ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ಮುಖ್ಯಸ್ಥ ವಿಶುಕುಮಾರ್, ಆರ್‌. ಮಂಜುನಾಥ್‌, ಶ್ರೀಪಾದ್‌ ಇದ್ದರು.