2- 3 ತಿಂಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

| N/A | Published : Feb 21 2025, 11:45 PM IST / Updated: Feb 22 2025, 08:03 AM IST

2- 3 ತಿಂಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌
Share this Article
  • FB
  • TW
  • Linkdin
  • Email

ಸಾರಾಂಶ

ಶೀಘ್ರ ಸ್ಥಳೀಯ ಸಂಸ್ಥೆಗಳ ಮತ್ತು ಬಿಬಿಎಂಪಿ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ಕಾರ್ಯಕರ್ತರು ಬೂತ್‌ ಮಟ್ಟದಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

 ಬೆಂಗಳೂರು : ಶೀಘ್ರ ಸ್ಥಳೀಯ ಸಂಸ್ಥೆಗಳ ಮತ್ತು ಬಿಬಿಎಂಪಿ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ಕಾರ್ಯಕರ್ತರು ಬೂತ್‌ ಮಟ್ಟದಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ಎರಡ್ಮೂರು ತಿಂಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದೆ. ಅದರ ಜತೆಗೆ ಶೀಘ್ರ ಬಿಬಿಎಂಪಿ ಚುನಾವಣೆಯನ್ನೂ ಮಾಡಲಾಗುವುದು. ಅದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಚುನಾವಣೆ ಕುರಿತು ನಾವು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಲಿದ್ದೇವೆ. ತಾಲೂಕು ಮತ್ತು ಜಿಪಂಗಳಿಗೆ ಸಂಬಂಧಿಸಿ ಮೀಸಲಾತಿ, ಕ್ಷೇತ್ರ ಮರು ವಿಂಗಡಣೆ ಕೆಲಸ ಮಾಡಲಾಗುತ್ತಿದ್ದು, ಕೆಲವೇ ದಿನಗಳಲ್ಲಿ ಚುನಾವಣೆ ಕುರಿತು ನ್ಯಾಯಾಲಯಕ್ಕೆ ತಿಳಿಸಲಿದ್ದೇವೆ ಎಂದು ಹೇಳಿದರು.

ಗ್ರೇಟರ್‌ ಬೆಂಗಳೂರಿಗೆ ಸಂಬಂಧಿಸಿ ಶಾಸಕ ರಿಜ್ವಾನ್ ಅರ್ಷದ್‌ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಅದು ಅಂತ್ಯಗೊಂಡ ಕೂಡಲೇ ಚುನಾವಣೆ ನಡೆಸಲಾಗುವುದು. ಎರಡೂ ಚುನಾವಣೆಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಸಿದ್ಧತೆ ಮಾಡಿಕೊಳ್ಳಬೇಕು. ಬೂತ್‌ ಮಟ್ಟದಲ್ಲಿ ಈಗಲೇ ಪಕ್ಷ ಸಂಘಟನೆ ಕುರಿತು ಕೆಲಸ ಆರಂಭಿಸಬೇಕು ಎಂದು ಸೂಚಿಸಿದರು.

ಬಿಬಿಎಂಪಿಗೂ ಶೀಘ್ರ ಚುನಾವಣೆ ಆಗುತ್ತೆ

ಮುಂದಿನ ಎರಡ್ಮೂರು ತಿಂಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದೆ. ಅದರ ಜತೆಗೆ ಶೀಘ್ರ ಬಿಬಿಎಂಪಿ ಚುನಾವಣೆಯನ್ನೂ ಮಾಡಲಾಗುವುದು. ಅದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಚುನಾವಣೆ ಕುರಿತು ನಾವು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಲಿದ್ದೇವೆ.

- ಡಿ.ಕೆ.ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷ