ಪೌರ ಕಾರ್ಮಿಕರೊಂದಿಗೆ ಸ್ಥಳೀಯರು ಕೈಜೊಡಿಸಿ ಸ್ವಚ್ಛತೆಗೆ ಆದ್ಯತೆ ನೀಡಿ

| Published : Sep 26 2025, 01:00 AM IST

ಪೌರ ಕಾರ್ಮಿಕರೊಂದಿಗೆ ಸ್ಥಳೀಯರು ಕೈಜೊಡಿಸಿ ಸ್ವಚ್ಛತೆಗೆ ಆದ್ಯತೆ ನೀಡಿ
Share this Article
  • FB
  • TW
  • Linkdin
  • Email

ಸಾರಾಂಶ

ಸ್ವಚ್ಛಮೇವ ಜಯತೆ ಎನ್ನುವ ಉಕ್ತಿಯಂತೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೂಂಡರೆ ಪ್ರತಿಯೊಬ್ಬರು ಆರೋಗ್ಯಕರ ಜೀವನ ನಡೆಸಲು ಸಾಧ್ಯ.

ಗದಗ: ಪೌರ ಕಾರ್ಮಿಕರ ಜತೆಗೆ ಸ್ಥಳಿಯರು ಕೈಜೊಡಿಸಿ ಸಹಕರಿಸಿ ಸ್ವಚ್ಛತೆಗೆ ಆದ್ಯತೆ ನೀಡಿ ಎಂದು ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ್‌ ಹೇಳಿದರು.

ನಗರದ ಚನ್ನಮ್ಮ ಸರ್ಕಲ್‌ನಿಂದ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತದ ವರೆಗೆ ಸ್ವಚ್ಛತಾ ಹೀ ಸೇವಾ ಅಭಿಯಾನದಡಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಸಾಮೂಹಿಕ ಸ್ವಚ್ಛತಾ ಶ್ರಮದಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಸ್ವಚ್ಛೋತ್ಸವ ಎಂಬ ಶೀರ್ಷಿಕೆಯಡಿ ನಗರದಲ್ಲಿ ಚೆನ್ನಮ್ಮ ಸರ್ಕಲ್‌ನಿಂದ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತದ ವರೆಗೂ ಅಷ್ಟೇ ಸೀಮಿತವಾಗದೆ ನಗರದಲ್ಲಿ ಪ್ರತಿಯೊಂದು ವಾರ್ಡ್‌ಗಳಿಗೂ ಸ್ವಚ್ಛತಾ ಹೀ ಸೇವಾ ಅಭಿಯಾನ ನಡೆದಿದ್ದು, ಗದಗದಲ್ಲಿ ಮಾದರಿಯಾಗುವಂತೆ ಪೌರಕಾರ್ಮಿಕರು ಮತ್ತು ಸ್ಥಳೀಯರು ಸಹಕರಿಸಿ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳಬೇಕು ಎಂದರು.

ಸ್ವಚ್ಛಮೇವ ಜಯತೆ ಎನ್ನುವ ಉಕ್ತಿಯಂತೆ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೂಂಡರೆ ಪ್ರತಿಯೊಬ್ಬರು ಆರೋಗ್ಯಕರ ಜೀವನ ನಡೆಸಲು ಸಾಧ್ಯ ಎಂದು ತಿಳಿಸಿದರು.

ಈ ವೇಳೆ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ್ರ ಕೊಟ್ಟೂರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ನಂದಾ ಹಣಬರಟ್ಟಿ, ನಗರಸಭೆ ಪೌರಾಯುಕ್ತ ರಾಜಾರಾಮ್ .ಎನ್. ಪವಾರ, ನಗರಸಭೆ ಪರಿಸರ ಅಭಿಯಂತರ ಆನಂದ ಬದಿ, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ಎಚ್.ಎ. ಬಂಡಿವಡ್ಡರ ಸೇರಿದಂತೆ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಪೌರ ಕಾರ್ಮಿಕರು, ಎನ್.ಎಸ್.ಎಸ್, ಎನ್‌ಸಿಸಿ ವಿದ್ಯಾರ್ಥಿಗಳು, ಎನ್.ಜಿ.ಓ ಸಂಘ- ಸಂಸ್ಥೆಯವರು ಪಾಲ್ಗೊಂಡಿದ್ದರು.