ಸಾರಾಂಶ
ಸೆ.14ರಂದು ಜಿಲ್ಲೆಯಾದ್ಯಂತ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಟ್ಟು 10 ಪೀಠಗಳ ರಚನೆ ಮಾಡಲಾಗಿ, 14,146 ಪ್ರಕರಣಗಳು ಇತ್ಯರ್ಥಪಡಿಸಲಾಗಿದೆ
ಕನ್ನಡಪ್ರಭ ವಾರ್ತೆ ಯಾದಗಿರಿ
ಸೆ.14ರಂದು ಜಿಲ್ಲೆಯಾದ್ಯಂತ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಟ್ಟು 10 ಪೀಠಗಳ ರಚನೆ ಮಾಡಲಾಗಿ, 14,146 ಪ್ರಕರಣಗಳು ಇತ್ಯರ್ಥಪಡಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ರೇಖಾ ಅವರು ತಿಳಿಸಿದ್ದಾರೆ.ಯಾದಗಿರಿ ಜಿಲ್ಲಾ ಮತ್ತು ಸೇಷನ್ಸ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ 31, ಯಾದಗಿರಿ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ 188, ಯಾದಗಿರಿ ಜೆ.ಎಂ.ಎಫ್.ಸಿ ನ್ಯಾಯಾಧೀಶ ನ್ಯಾಯಾಲಯದಲ್ಲಿ 232, ಯಾದಗಿರಿ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶ ನ್ಯಾಯಾಲಯದಲ್ಲಿ 374, ಶಹಾಪುರ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ 398, ಶಹಾಪುರ ಜೆ.ಎಂ.ಎಫ್.ಸಿ ನ್ಯಾಯಾಧೀಶರ ನ್ಯಾಯಾಲಯದಲ್ಲಿ 661, ಶಹಾಪುರ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರ ನ್ಯಾಯಾಲಯದಲ್ಲಿ 715, ಸುರಪುರ ಹಿರಿಯ ಸಿವಿಲ್ ನ್ಯಾಯಾಧೀಶ ನ್ಯಾಯಾಲಯದಲ್ಲಿ 412, ಸುರಪುರ ಜೆ.ಎಂ.ಎಫ್.ಸಿ ನ್ಯಾಯಾಧೀಶ ನ್ಯಾಯಾಲಯದಲ್ಲಿ 468, ಸುರಪುರ ಹೆಚ್ವುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶರ ನ್ಯಾಯಾಲಯದಲ್ಲಿ 564, ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಯಿತು.
ಜಿಲ್ಲೆಯಾದ್ಯಂತ ಒಟ್ಟಾರೆ 4 ಹಣ ವಸೂಲಿ ದಾವೆ, 36 ವಿಭಾಗ ಕೋರಿದ ದಾವೆಗಳು, 12 ನಿರ್ದಿಷ್ಟ ಹಕ್ಕುಗಳ ಪರಿಹಾರ ದಾವೆಗಳು, 1 ಅಂತಿಮ ಡಿಕ್ರಿ ಪ್ರಕರಣಗಳು, 20 ಚೆಕ್ ಅಮಾನ್ಯ ಪ್ರಕರಣಗಳು, 11ಇಪಿ (ಜಾರಿ ಅರ್ಜಿ), 29 ಮೋಟಾರು ವಾಹನ ಅಪಘಾತ, 225 ಜೀವನಾಂಶ ಕೋರಿ ಸಲ್ಲಿಸಿದ ಅರ್ಜಿ, 2 ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆಯಡಿ (ಡಿ.ವಿ.), 1657 ಜನನಕ್ಕೆ ಸಂಬಂಧಿಸಿದ ಪ್ರಕರಣಗಳ ಅರ್ಜಿ ಮತ್ತು 13 ರಾಜೀಯಾಗಬಹುದಾದ ಅಪರಾಧಿಕ ಪ್ರಕರಣಗಳು, 1968 ಲಘು ಪ್ರಕರಣಗಳು ಹಾಗೂ 21 ಇತರೆ ಅಪರಾಧಿಕ ಪ್ರಕರಣಗಳು ಜಿಲ್ಲಾದ್ಯಂತ ಇತ್ಯರ್ಥಗೊಂಡವು. ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇರುವ 4,043 ಹಾಗೂ ವ್ಯಾಜ್ಯಪೂರ್ವ 10,103 (ಕಂದಾಯ, ಮೋಟರ್ ವಾಹನ ಕಾಯ್ದೆ ಉಲ್ಲಂಘನೆ) ಪ್ರಕರಣಗಳನ್ನು (ಪಿ.ಎಲ್.ಸಿ) ಸೇರಿ ಒಟ್ಟು 14,146 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಂಡಿವೆ ಎಂದು ಯಾದಗಿರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮರಿಯಪ್ಪ ತಿಳಿಸಿದ್ದಾರೆ.